ವಿಜಯಪುರ ನಗರದ ಬಿ.ಎಲ್.ಡಿ.ಇ. ಡೀಮ್ಡ್ ವಿವಿಯ ಶ್ರೀ ಬಿ.ಎಂ. ಪಾಟೀಲ ವೈದ್ಯಕೀಯ ಮಹಾವಿದ್ಯಾಲಯ, ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರ ಹಾಗೂ ಶ್ರೀ ಬಿ.ಎಂ. ಪಾಟೀಲ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ವತಿಯಿಂದ ವಿಶ್ವ ಅಂಗಾಂಗ ದಾನ ದಿನಾಚರಣೆ ನಿಮಿತ್ತ ಅಂಗಾಂಗ ದಾನ ಜನಜಾಗೃತಿ ಜಾಥಾ ನಡೆಯಿತು.
ಕನ್ನಡಪ್ರಭ ವಾರ್ತೆ ವಿಜಯಪುರ
ಅಂಗಾಂಗ ದಾನದ ಮಹತ್ವದ ಸಂದೇಶವನ್ನು ಸಮಾಜದ ಪ್ರತಿಯೊಬ್ಬರಿಗೂ ತಲುಪಿಸುವ ಅಗತ್ಯವಿದ್ದು, ಯುವಜನತೆ ಈ ಮಹತ್ವದ ಮಾನವೀಯ ಕಾರ್ಯದಲ್ಲಿ ಸಕ್ರಿಯವಾಗಿ ಭಾಗವಹಿಸಬೇಕು ಎಂದು ಬಿಎಲ್.ಡಿಇ ಡೀಮ್ಡ್ ವಿಶ್ವವಿದ್ಯಾಲಯ ಕುಲಪತಿ ಪ್ರೊ.ಡಾ.ಅರುಣ ಇನಾಮದಾರ ಕರೆ ನೀಡಿದರು.ನಗರದ ಬಿ.ಎಲ್.ಡಿ.ಇ. ಡೀಮ್ಡ್ ವಿವಿಯ ಶ್ರೀ ಬಿ.ಎಂ.ಪಾಟೀಲ ವೈದ್ಯಕೀಯ ಮಹಾವಿದ್ಯಾಲಯ, ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರ ಹಾಗೂ ಶ್ರೀ ಬಿ.ಎಂ. ಪಾಟೀಲ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ವತಿಯಿಂದ ವಿಶ್ವ ಅಂಗಾಂಗ ದಾನ ದಿನಾಚರಣೆ ನಿಮಿತ್ತ ಹಮ್ಮಿಕೊಂಡಿದ್ದ ಅಂಗಾಂಗ ದಾನ ಜನಜಾಗೃತಿ ಜಾಥಾ ಹಾಗೂ ಸಾರ್ವಜನಿಕ ಜಾಗೃತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಅಂಗಾಂಗ ದಾನ ಕುರಿತು ಅರಿವು ಮೂಡಿಸುವುದು ಹಾಗೂ ದಾನಕ್ಕೆ ನೋಂದಣಿ ಮಾಡಿಕೊಳ್ಳಲು ಸಾರ್ವಜನಿಕರನ್ನು ಪ್ರೇರೇಪಿಸುವುದು ಅಗತ್ಯವಾಗಿದೆ. ಬಿ.ಎಲ್.ಡಿ.ಇ. ಅಸೋಸಿಯೇಷನ್ ಅಧ್ಯಕ್ಷ ಎಂ.ಬಿ.ಪಾಟೀಲ ಹಾಗೂ ಬಿ.ಎಲ್.ಡಿ.ಇ. ಡೀಮ್ಡ್ ವಿಶ್ವವಿದ್ಯಾಲಯದ ಕುಲಾಧಿಪತಿ ಬಿ.ಎಂ.ಪಾಟೀಲರ ಒತ್ತಾಸೆಯೂ ಅಂಗಾಂಗ ದಾನದ ಜಾಗೃತಿ ಮೂಡಿಸುವುದಾಗಿದೆ ಎಂದರು.
ಬೆಳಗ್ಗೆ 9.15ಕ್ಕೆ ಬಿ.ಎಲ್.ಡಿ.ಇ. ಡೀಮ್ಡ್ ವಿಶ್ವವಿದ್ಯಾಲಯದ ಆವರಣದಿಂದ ಆರಂಭವಾದ ಜನಜಾಗೃತಿ ಜಾಥಾ ನಗರದ ಶ್ರೀ ಸಿದ್ಧೇಶ್ವರ ದೇವಸ್ಥಾನದ ವರೆಗೆ ಸಾಗಿತು. ಹಿರಿಯ ಉಪಪ್ರಾಂಶುಪಾಲ ಡಾ.ವಿಜಯಕುಮಾರ ಕಲ್ಯಾಣಪಗೋಳ, ಡಾ.ಎಸ್.ಬಿ.ಪಾಟೀಲ, ಡಾ.ವಿನಯ ಕುಂದರಗಿ ಮಾತನಾಡಿದರು.ಸಮಕುಲಾಧಿಪತಿ ಡಾ.ವೈ.ಎಂ.ಜಯರಾಜ, ಕುಲಸಚಿವ ಡಾ.ಆರ್.ವಿ.ಕುಲಕರ್ಣಿ, ಡಾ.ಸಂತೋಷ ಪಾಟೀಲ, ಡಾ.ಬಸವರಾಜ.ಎಸ್, ಡಾ.ಕಾರ್ತಿಕ.ಸಿ, ವೈದ್ಯರು, ಆಸ್ಪತ್ರೆ ಸಿಬ್ಬಂದಿ, ವೈದ್ಯಕೀಯ ವಿದ್ಯಾರ್ಥಿಗಳು, ನರ್ಸಿಂಗ ವಿದ್ಯಾರ್ಥಿಗಳು ಹಾಗೂ ಅಲೈಡ್ ಹೆಲ್ತ್ ಸೈನ್ಸಸ್ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಕಸಿ ಸಂಯೋಜಕ ಶಾಂತೇಶ ಸಲಗರೆ ವಂದಿಸಿದರು.