ಜನಪ್ರಿಯ ಸರ್ಕಾರಿ ಕಾರ್ಯಕ್ರಮಗಳ ಬಗ್ಗೆ ಮತದಾರರಲ್ಲಿ ಜಾಗೃತಿ ಮೂಡಿಸಿ: ಜಿ.ಎಚ್.ಶ್ರೀನಿವಾಸ್

| Published : Apr 18 2024, 02:16 AM IST

ಜನಪ್ರಿಯ ಸರ್ಕಾರಿ ಕಾರ್ಯಕ್ರಮಗಳ ಬಗ್ಗೆ ಮತದಾರರಲ್ಲಿ ಜಾಗೃತಿ ಮೂಡಿಸಿ: ಜಿ.ಎಚ್.ಶ್ರೀನಿವಾಸ್
Share this Article
  • FB
  • TW
  • Linkdin
  • Email

ಸಾರಾಂಶ

ಸರ್ಕಾರದ ಜನಪ್ರಿಯ ಕಾರ್ಯಕ್ರಮಗಳ ಬಗ್ಗೆ ಮತದಾರರಲ್ಲಿ ಜಾಗೃತಿ ಮೂಡಿಸುವ ಮೂಲಕ ಕಾಂಗ್ರೆಸ್ ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆ ಜಯಗಳಿಸಲು ಪ್ರತಿ ಬೂತ್ ಮಟ್ಟದಲ್ಲಿ ಮತಯಾಚನೆ ಮಾಡಬೇಕು ಎಂದು ಶಾಸಕ ಜಿ.ಎಚ್. ಶ್ರೀನಿವಾಸ್ ಹೇಳಿದ್ದಾರೆ.

- ರಂಗೇನಹಳ್ಳಿಯಲ್ಲಿ ಲಕ್ಕವಳ್ಳಿ ಹೋಬಳಿ ಮಟ್ಟದ ಕಾಂಗ್ರೆಸ್ ಕಾರ್ಯಕರ್ತರ ಸಭೆ

ಕನ್ನಡಪ್ರಭ ವಾರ್ತೆ, ತರೀಕೆರೆ

ಸರ್ಕಾರದ ಜನಪ್ರಿಯ ಕಾರ್ಯಕ್ರಮಗಳ ಬಗ್ಗೆ ಮತದಾರರಲ್ಲಿ ಜಾಗೃತಿ ಮೂಡಿಸುವ ಮೂಲಕ ಕಾಂಗ್ರೆಸ್ ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆ ಜಯಗಳಿಸಲು ಪ್ರತಿ ಬೂತ್ ಮಟ್ಟದಲ್ಲಿ ಮತಯಾಚನೆ ಮಾಡಬೇಕು ಎಂದು ಶಾಸಕ ಜಿ.ಎಚ್. ಶ್ರೀನಿವಾಸ್ ಹೇಳಿದ್ದಾರೆ.ಲಕ್ಕವಳ್ಳಿ ಹೋಬಳಿ ಕಾಂಗ್ರೆಸ್ ಸಮಿತಿಯಿಂದ ರಂಗೇನಹಳ್ಳಿಯಲ್ಲಿ ಏರ್ಪಡಿಸಿದ್ದ ಲಕ್ಕವಳ್ಳಿ ಹೋಬಳಿ ಕಾಂಗ್ರೆಸ್ ಕಾರ್ಯಕರ್ತರ ಸಭೆ ಉದ್ಘಾಟನೆ ನೆರವೇರಿಸಿ ಮಾತನಾಡಿದರು. ಈ ಬಾರಿ ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆಯವರು ಹಿರಿಯ ಅನುಭವಿ ರಾಜಕಾರಿಣಿ, ಸರಳ ಸಜ್ಜನಿಕೆಯ ವ್ಯಕ್ತಿ, ಕಾರ್ಯಕರ್ತರು ಹೆಚ್ಚಿನ ಶ್ರಮವಹಿಸಿ ಸರ್ಕಾರದ ಜನಪ್ರಿಯ ಕಾರ್ಯಕ್ರಮಗಳ ಬಗ್ಗೆ ಮತದಾರರಲ್ಲಿ ಜಾಗೃತಿ ಮೂಡಿಸಿ ಕಾಂಗ್ರೆಸ್ ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆ ಜಯಗಳಿಸಲು ಪ್ರತಿ ಬೂತ್ ಮಟ್ಟದಲ್ಲಿ ಮತಯಾಚನೆ ಮಾಡಬೇಕು. ಅತ್ಯಂತ ಹೆಚ್ಚಿನ ಮತ ನೀಡಿ ಜಯಪ್ರಕಾಶ್ ಹೆಗ್ಡೆ ಅವರನ್ನು ಗೆಲ್ಲಿಸ ಬೇಕು ಎಂದು ಮನವಿ ಮಾಡಿದರು.ಚಿಕ್ಕಮಗಳೂರು ಜಿಲ್ಲಾ ಕಾಂಗ್ರೆಸ್ ಸಮಿತಿ ಜಿಲ್ಲಾಧ್ಯಕ್ಷ ಡಾ.ಅಂಶುಮಂತ್ ಮಾತನಾಡಿ ಕಳೆದ ವಿಧಾನ ಸಭಾ ಚುನಾವಣೆ ಯಲ್ಲಿ ಜಿಲ್ಲೆಯ ಐದು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿದ್ದು, ಇದಕ್ಕೆಲ್ಲಾ ಮೂಲ ಕಾರಣ ಕಾಂಗ್ರೆಸ್ ಕಾರ್ಯ ಕರ್ತರು. ಲೋಕಸಭಾ ಚುನಾವಣೆ ಆಭ್ಯರ್ಥಿ ಜಯಪ್ರಕಾಶ ಹೆಗ್ಡೆಯವರಿಗೆ ಅತ್ಯಂತ ಹೆಚ್ಚಿನ ಮತ ನೀಡಿ ಅವರನ್ನು ಗೆಲ್ಲಿಸಬೇಕೆಂದು ಮನವಿ ಮಾಡಿದರು.ಕೆಪಿಸಿಸಿ ಸದಸ್ಯರು ಎಚ್.ವಿಶ್ವನಾಥ್ ಮಾತನಾಡಿ ಜಯಪ್ರಕಾಶ್ ಹೆಗ್ಡೆ ಅವರು ಸರಳ ಸಜ್ಜನ ಹಾಗೂ ಸೇವಾ ಮನೋಭಾವನೆ ಉಳ್ಳ ರಾಜಕಾರಿಣಿ. ಅವರಿಗೆ ಅತ್ಯಂತ ಹೆಚ್ಚಿನ ಮತ ನೀಡಿ ಗೆಲ್ಲಿಸಬೇಕೆಂದು ಮನವಿ ಮಾಡಿದರು. ಜಿಲ್ಲಾ ಕಾಂಗ್ರೆಸ್ ಸಮಿತಿ ಕಾರ್ಯದರ್ಶಿ ಹೇಮಣ್ಣ ಎಲ್.ಟಿ. ಮಾತನಾಡಿ ಜಯಪ್ರಕಾಶ್ ಹೆಗ್ಡೆ ಸಂಸದರಾಗಿ ಮಾಡಿದ ಅಭಿವೃದ್ಧಿ ಕಾರ್ಯಗಳು ಮತ್ತು ಜನರ ನಡುವೆ ಬಾಂಧವ್ಯ ಬೆಸೆಯುವ ವ್ಯಕ್ತಿತ್ವ ಕೈಗನ್ನಡಿಯಾಗಿದೆ. ಜನರ ದ್ವನಿ ಯಾಗಿ ಸಂಸತ್ ನಲ್ಲಿ ಹೋರಾಟ ಮಾಡಿ ಉತ್ತಮ ಸೇವೆ ಮಾಡಿದ್ಧಾರೆ. ಜಯಪ್ರಕಾಶ್ ಹೆಗ್ಡೆ ಅವರಿಗೆ ಅತ್ಯಂತ ಹೆಚ್ಚಿನ ಮತ ನೀಡಿ ಅವರನ್ನು ಗೆಲ್ಲಿಸಬೇಕೆಂದು ಕೋರಿದರು.ತರೀಕೆರೆ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಎಚ್.ಯು.ಪಾರೂಕ್ ಮಾತನಾಡಿ ಕೇಂದ್ರ ಸರ್ಕಾರದ ದುರಾಡಳಿತ ಕೊನೆ ಗೊಳ್ಳುವ ಸಂಭವವಿದೆ, ಜಯುಪ್ರಕಾಶ್ ಹೆಗ್ಗೆ ಅವರಿಗೆ ಅತ್ಯಂತ ಹೆಚ್ಚಿನ ಮತ ನೀಡಿ ಅವರನ್ನು ಗೆಲ್ಲಿಸಬೇಕು ಎಂದು ಮನವಿ ಮಾಡಿದರು.ಮುಖಂಡರಾದ ಎಚ್.ಎಂ.ಗೋಪಿಕೃಷ್ಣ, ಎಲ್.ಎ.ಅನ್ಬು, ರವಿಕಿಶೋರ್, ನಂದಕುಮಾರ್, ಹನೀಪ್ ಮತ್ತಿತರರು ಮಾತನಾಡಿದರು. ಲಕ್ಕವಳ್ಳಿ ಹೋಬಳಿ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಎಚ್.ಎನ್.ಮಂಜುನಾಥ್ ಲಾಡ್, ತರೀಕೆರೆ ಕ್ಷೇತ್ರದ ಚುನಾವಣೆ ಉಸ್ತುವಾರಿ ಮೋಹನ್, ಕೆ.ಪಿ.ಕುಮಾರ್, ಕಾಂಗ್ರೆಸ್ ನಗರಾಧ್ಯಕ್ಷ ಟಿ.ಎಸ್.ಪ್ರಕಾಶ್ ವರ್ಮ, ಸಂತೋಷ್, ಫಣಿ ರಾಜ್, ರಮೇಶ್ ಶಂಕರಘಟ್ಟ, ಬ್ಲಾಕ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾದ ಭಾಗ್ಯಲಕ್ಷ್ಮಿ, ಹೋಬಳಿ ಕಾಂಗ್ರೆಸ್ ಕಾರ್ಯಕರ್ತರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ಧರು.17ಕೆಟಿಆರ್.ಕೆ.6ಃ

ತರೀಕೆರೆಯ ರಂಗೇನಹಳ್ಳಿಯಲ್ಲಿ ಲಕ್ಕವಳ್ಳಿ ಹೋಬಳಿ ಕಾಂಗ್ರೆಸ್ ಸಮಿತಿಯಿಂದ ಏರ್ಪಡಿಸಿದ್ದ ಲಕ್ಕವಳ್ಳಿ ಹೋಬಳಿ ಕಾಂಗ್ರೆಸ್ ಕಾರ್ಯಕರ್ತರ ಸಭೆಯನ್ನು ಶಾಸಕ ಜಿ.ಎಚ್.ಶ್ರೀನಿವಾಸ್ ಉದ್ಘಾಟಿಸಿದರು. ಕೆಪಿಸಿಸಿ ಸದಸ್ಯ ಎಚ್. ವಿಶ್ವನಾಥ್, ಲಕ್ಕವಳ್ಳಿ ಹೋಬಳಿ ಕಾಂಗ್ರೆಸ್ ಸಮಿತಿ ಅಧ್ಯಕ್ಷರು ಎಚ್.ಎನ್.ಮಂಜುನಾಥ್ ಲಾಡ್

ಮತ್ತಿತರರು ಇದ್ದರು.