ನಿಷೇಧಿತ ಪ್ಲಾಸ್ಟಿಕ್ ಬಳಸದಂತೆ ಅರಿವು ಮೂಡಿಸಿ: ಪುರಸಭೆ ಅಧ್ಯಕ್ಷ ಪರಮೇಶ್

| Published : Jan 14 2024, 01:31 AM IST

ನಿಷೇಧಿತ ಪ್ಲಾಸ್ಟಿಕ್ ಬಳಸದಂತೆ ಅರಿವು ಮೂಡಿಸಿ: ಪುರಸಭೆ ಅಧ್ಯಕ್ಷ ಪರಮೇಶ್
Share this Article
  • FB
  • TW
  • Linkdin
  • Email

ಸಾರಾಂಶ

ಪುರಸಭೆ ಕಾರ್ಯಾಲಯದಿಂದ ವಾರದ ಸಂತೆ ಮತ್ತು ಅಂಗಡಿಗಳಿಗೆ ಅನಿರೀಕ್ಷಿತ ಭೇಟಿ ನೀಡಿ ಸುಮಾರು 83 ಕೆಜಿಯಷ್ಟು ನಿಷೇಧಿತ ಪ್ಲಾಸ್ಟಿಕ್ ನ್ನು ವಶಪಡಿಸಿಕೊಂಡಿರುವ ಸಂದರ್ಭದಲ್ಲಿ ಮಾತನಾಡಿದ ಪುರಸಭೆ ಅಧ್ಯಕ್ಷ ಪರಮೇಶ್‌ ಅಂಗಡಿಗಳಿಗೆ ಹೋಗುವಾಗ ಮನೆಯಿಂದಲೇ ಬಟ್ಟೆ ಬ್ಯಾಗ್ ತೆಗೆದುಕೊಂಡು ಹೋಗಬೇಕು ಎಂದು ಹೇಳಿದ್ದಾರೆ.

ಕನ್ನಡಪ್ರಭ ವಾರ್ತೆ, ತರೀಕೆರೆ

ಅಂಗಡಿಗಳಿಗೆ ಹೋಗುವಾಗ ಮನೆಯಿಂದಲೇ ಬಟ್ಟೆ ಬ್ಯಾಗ್ ತೆಗೆದುಕೊಂಡು ಹೋಗಬೇಕು ಎಂದು ಪುರಸಭೆ ಅಧ್ಯಕ್ಷ ಪರಮೇಶ್ ಹೇಳಿದ್ದಾರೆ.ಪುರಸಭೆ ಕಾರ್ಯಾಲಯದಿಂದ ವಾರದ ಸಂತೆ ಮತ್ತು ಅಂಗಡಿಗಳಿಗೆ ಅನಿರೀಕ್ಷಿತ ಭೇಟಿ ನೀಡಿ ಸುಮಾರು 83 ಕೆಜಿಯಷ್ಟು ನಿಷೇಧಿತ ಪ್ಲಾಸ್ಟಿಕ್ ನ್ನು ವಶಪಡಿಸಿಕೊಂಡಿರುವ ಸಂದರ್ಭದಲ್ಲಿ ಮಾತನಾಡುತ್ತಿದ್ದರು. ನಿಷೇಧಿತ ಪ್ಲಾಸ್ಟಿಕ್ ನ್ನು ಬಳಸಬಾರದು ಎಂದು ಪ್ರತಿಯೊಂದು ಕಾರ್ಯಕ್ರಮದಲ್ಲಿ ಈ ಬಗ್ಗೆ ಅರಿವು ಮೂಡಿಸಲಾಗುತ್ತಿದೆ ಎಂದು ಹೇಳಿದರು.ಪುರಸಭೆ ಸದಸ್ಯ ಟಿ.ದಾದಾಪೀರ್ ಮಾತನಾಡಿ ಮನುಕುಲಕ್ಕೆ ಕಂಟಕವಾಗಿರುವ ಪ್ಲಾಸ್ಟಿಕ್ ನಿರ್ಮೂಲನೆಗೆ ವಿಶ್ವ ದಾದ್ಯಂತ ಚಳುವಳಿ ನಡೆಯುತ್ತಿದ್ದು, ಪಟ್ಟಣದ ಪುರಸಭೆ ಈ ಅಭಿಯಾನದಲ್ಲಿ ಕೈಜೋಡಿಸಿದೆ. ಮನುಕುಲಕ್ಕೆ ಕಂಟಕ ವಾಗಿರುವ ಪ್ಲಾಸ್ಟಿಕ್ ಬಳಕೆಯನ್ನು ಸ್ನಯಂ ಪ್ರೇರಿತರಾಗಿ, ಸ್ವಯಂ ನಿಯಂತ್ರಣಕ್ಕೆ ನಾಗರಿಕರು ಸಹಕರಿಸಬೇಕು ಎಂದು ಮನವಿ ಮಾಡಿದರು.

ಪುರಸಭೆ ಸದಸ್ಯ ಟಿ.ಎಂ.ಬೋಜರಾಜ್ ಮಾತನಾಡಿ ಪುರಸಭೆಯಿಂದ ವಾರದ ಸಂತೆಯಲ್ಲಿ ಮತ್ತು ಅಂಗಡಿಗಳಲ್ಲಿ ಬಹಳ ದೊಡ್ಡ ಪ್ರಮಾಣದಲ್ಲಿ ನಿಷೇಧಿತ ಪ್ಲಾಸ್ಟಿಕ್ ನ್ನು ವಶ ಪಡಿಸಿಕೊಂಡಿರುವುದು ಉತ್ತಮವಾದ ಕಾರ್ಯ. ಪ್ಲಾಸ್ಟಿಕ್ ಪರಿಸರಕ್ಕೆ ಹಾನಿ ಉಂಟುಮಾಡುತ್ತದೆ. ಪ್ಲಾಸ್ಟಿಕ್ ನ್ನು ಬಳಸಬಾರದು, ಪ್ಲಾಸ್ಟಿಕ್ ಮುಕ್ತ ಪಟ್ಟಣವನ್ನಾಗಿಸಲು ಎಲ್ಲರೂ ಸಹಕರಿಸ ಬೇಕೆಂದು ಮನವಿ ಮಾಡಿದರು.

ಪುರಸಭೆ ಮುಖ್ಯಾಧಿಕಾರಿ ಎಚ್.ಪ್ರಶಾಂತ್ ಮಾತನಾಡಿ ಪುರಸಭೆಯಿಂದ ವಾರದ ಸಂತೆಯಲ್ಲಿ ಮತ್ತು ಅಂಗಡಿಗಳಲ್ಲಿ ಅನಿರೀಕ್ಷಿತ ಕಾರ್ಯಾಚರಣೆ ನಡೆಸಿ ನಿಷೇಧಿತ ಪ್ಲಾಸ್ಟಿಕ್ ನ್ನು ವಶಪಡಿಸಿಕೊಳ್ಳಲಾಗಿದೆ. ಪ್ಲಾಸ್ಟಿಕ್ ಮುಕ್ತ ತರೀಕೆರೆ ಪುರಸಭೆ ಸಂಕಲ್ಪವಾಗಿದ್ದು, ಈ ಬಗ್ಗೆ ಸಾರ್ವಜನಿಕರಿಗೆ ಸಾಕಷ್ಟು ಅರಿವು ಮೂಡಿಸುವ ಕಾರ್ಯ ಕೈಗೊಳ್ಳಲಾಗುತ್ತಿದೆ. ಅದಾಗ್ಯೂ ನಿಷೇಧಿತ ಪ್ಲಾಸ್ಟಿಕ್ ನ ದಾಸ್ತಾನು ಮಾರಾಟ ಮತ್ತು ಬಳಕೆ ಕಂಡು ಬಂದಲ್ಲಿ ಪುರಸಬೆಯಿಂದ ಕಠಿಣ ಕ್ರಮ ಕೈಗಕೊಳ್ಳಲಾಗುವುದು, ಪ್ಲಾಸ್ಟಿಕ ಪರಿಸರಕ್ಕೆ ಮಾರಕ. ನಿಷೇಧಿತ ಪ್ಲಾಸ್ಟಿಕ್ ಬಳಕೆ ಬೇಡ ಎಂದು ಹೇಳಿದರು.

ಪುರಸಭೆ ಸದಸ್ಯ ವಸಂತಕುಮಾರ್, ಪರಿಸರ ಅಭಿಯಂತರರಾದ ತಾಹೇರಾ ತಸ್ನಿಂ, ಹಿರಿಯ ಅರೋಗ್ಯ ನಿರೀಕ್ಷಕರಾದ ಮಹೇಶ್ವರಪ್ಪ, ಪುರಸಭೆ ಸಿಬ್ಬಂದಿ ಭಾಗವಹಿಸಿದ್ದರು.

13ಕೆಟಿಆರ್.ಕೆ.1ಃ

ತರೀಕೆರೆಯಲ್ಲಿ ಪುರಸಭೆ ಕಾರ್ಯಾಲಯದಿಂದ ವಾರದ ಸಂತೆ ಮತ್ತು ಅಂಗಡಿಗಳಲ್ಲಿ ಸುಮಾರು 83 ಕೆಜಿಯಷ್ಟು ಪ್ಲಾಸ್ಟಿಕನ್ನು ವಶಪಡಿಸಿಕೊಳ್ಳಲಾಯಿತು. ಪುರಸಭೆ ಅಧ್ಯಕ್ಷ ಪರಮೇಶ್, ಸದಸ್ಯರಾದ ಟಿ.ದಾದಾಪೀರ್, ಟಿ.ಎಂ. ಬೋಜರಾಜ್, ವಸಂತಕುಮಾರ್, ಮುಖ್ಯಾಧಿಕಾರಿ ಎಚ್.ಪ್ರಶಾಂತ, ಪರಿಸರ ಅಭಿಯಂತರರಾದ ತಾಹೇರಾ ತಸ್ನಿಂ ಮತ್ತಿತರರು ಇದ್ದರು.