ಸಾರಾಂಶ
ಕನ್ನಡಪ್ರಭ ವಾರ್ತೆ ಯಾದಗಿರಿ
ಅನುಸೂಚಿತ ಜಾತಿ ಹಾಗೂ ಅನುಸೂಚಿತ ಪಂಗಡಗಳ ನೊಂದ ಸಂತ್ರಸ್ತರಿಗೆ ಸಕಾಲಕ್ಕೆ ಪರಿಹಾರ ದೊರೆಯಲು ಅನುಕೂಲವಾಗುವಂತೆ ದೌರ್ಜನ್ಯ ನಿಯಂತ್ರಣ ಕಾಯ್ದೆಯ ಬಗ್ಗೆ ಸೂಕ್ತ ಜಾಗೃತಿ ಮೂಡಿಸುವಂತೆ ಜಿಲ್ಲಾಧಿಕಾರಿ ಡಾ. ಸುಶೀಲಾ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆ ಹಾಗೂ ಅನುಸೂಚಿತ ಜಾತಿ ಅನುಸೂಚಿತ ಪಂಗಡ (ದೌರ್ಜನ್ಯ ನಿಯಂತ್ರಣ) ಕಾಯ್ದೆಯಡಿ ಅಡಿಯಲ್ಲಿ ನಡೆಸಿದ ಸಭೆಗಳ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಜನಾಂಗದ ಮೇಲಾಗುವ ದೌರ್ಜನ್ಯ ಪ್ರಕರಣಗಳಿಗೆ ಸಂಬಂಧಿಸಿದಂತೆ ಸಿಗಬಹುದಾದ ಪರಿಹಾರೋಪಾಯಗಳು, ಕಾಯ್ದೆದೆ ಕುರಿತು ಅರಿವು ಸೇರಿದಂತೆ ಅಸ್ಪೃಶ್ಯತೆ ನಿವಾರಣೆ ಕುರಿತು ಸೂಕ್ತ ಜಾಗೃತಿ ಮೂಡಿಸಲು ತಿಳಿಸಿದರು.ಆಯಾ ತಾಲೂಕು ತಹಸೀಲ್ದಾರರು, ಪೊಲೀಸ್ ಇಲಾಖೆ ಅಧಿಕಾರಿಗಳ, ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳು, ನಗರ ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳು ಸೂಕ್ತ ಯೋಜನೆಯೊಂದಿಗೆ ಅರಿವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು. ದೌರ್ಜನ್ಯ ನಿಯಂತ್ರಣ ಕಾಯ್ದೆಯ ಹಾಗೂ ಕಾನೂನಿನ ಕುರಿತು ಅರಿವು ಮೂಡಿಸಿದಲ್ಲಿ ಇಂತಹ ಪ್ರಕರಣಗಳ ನಿಯಂತ್ರಣಕ್ಕೆ ಸಹಕಾರಿಯಾಗಲಿದ್ದು, ಕಾರಣ ಸಂಬಂಧಿಸಿದ ಅಧಿಕಾರಿಗಳು ಗಂಭೀರತೆಯಿಂದ ಹಾಗೂ ಕಾಳಜಿ ವಹಿಸಲು ತಿಳಿಸಿದರು.
ವಿಶೇಷ ಘಟಕ ಹಾಗೂ ಗಿರಿಜನ ಉಪಯೋಜನೆಯಡಿ ಅನುದಾನ ಶೇ.100 ರಷ್ಟು ಬಳಸಿ ಬರುವ ಮಾರ್ಚ್ ಅಂತ್ಯೆಯೊಳಗೆ ಗುರಿಗೆ ತಕ್ಕಂತೆ ಆರ್ಥಿಕ ಮತ್ತು ಭೌತಿಕ ಪ್ರಗತಿ ಸಾಧಿಸಬೇಕು. ನಿಗಧಿಪಡಿಸಿ ಕಾಮಗಾರಿಗಳನ್ನು ಖುದ್ದಾಗಿ ಪರಿಶೀಲಿಸಿ ಪ್ರಗತಿ ಸಾಧಿಸಬೇಕು. ಯಾವುದೇ ಕಾಮಕಾರಿ ಬಾಕಿ ಉಳಿಯಂತೆ ನಿಗಾವಹಿಸಬೇಕು. ಸಭೆಗಳನ್ನು ನಡೆಸಿ ಕುಂದುಕೊರತೆಗಳಿಗೆ ಪರಿಹಾರ ಒದಗಿಸಬೇಕೆಂದು ಹೇಳಿದರು.ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಧರಣೇಶ ಎಸ್.ಪಿ., ಸಹಾಯಕ ಆಯುಕ್ತ ಹಂಪಣ್ಣ ಸಜ್ಜನ್, ನಗರಸಭೆ ಪೌರಾಯುಕ್ತ ಲಕ್ಷ್ಮಿಕಾಂತ, ಜಿಲ್ಲಾ ಸಮಾಜ ಕಲ್ಯಾಣ ಅಧಿಕಾರಿ ಸರೋಜಾ, ದೌರ್ಜನ್ಯ ಸಮಿತಿ ಸದಸ್ಯ ಮರೆಪ್ಪ ಚಟ್ಟೇರಕರ್, ಮಲ್ಲಪ್ಪ ಗೋಗಿ, ದಿನೇಶ ಕುಮಾರ, ನಿಂಗಪ್ಪ ದೇವಳಗುಡ್ಡ, ರವಿಕುಮಾರ ಯಕ್ಷಿಂತಿ, ಹಿಂದುಳಿದ ವರ್ಗಗಳ ಅಧಿಕಾರಿ ಗಂಗಾಧರ್ ದೊಡ್ಡಮನಿ ಸೇರಿದಂತೆ ಇತರರಿದ್ದರು.