ವಿದ್ಯಾರ್ಥಿ ದೆಸೆಯಲ್ಲೇ ಮಾನವ ಹಕ್ಕುಗಳ ಅರಿವು ಮೂಡಿಸಿ

| Published : Jun 04 2024, 12:30 AM IST

ವಿದ್ಯಾರ್ಥಿ ದೆಸೆಯಲ್ಲೇ ಮಾನವ ಹಕ್ಕುಗಳ ಅರಿವು ಮೂಡಿಸಿ
Share this Article
  • FB
  • TW
  • Linkdin
  • Email

ಸಾರಾಂಶ

ಕುಂದಾಣ: ಮಾನವ ಹಕ್ಕುಗಳ ಕುರಿತು ಇಂದು ಪ್ರಪಂಚಾದ್ಯಂತ ಚರ್ಚೆಯಾಗುತ್ತಿದೆ. ವಿದ್ಯಾರ್ಥಿ ದೆಸೆಯಿಂದಲೇ ಇವುಗಳ ಬಗ್ಗೆ ಅರಿವು ಮೂಡಿಸುವುದರಿಂದ ಭವಿಷ್ಯದಲ್ಲಿ ಆರೋಗ್ಯಕರ ಸಮಾಜ ಸೃಷ್ಟಿಸಲು ಸಾಧ್ಯವಾಗುತ್ತದೆ ಎಂದು ಕರ್ನಾಟಕ ಮಾನವ ಹಕ್ಕುಗಳ ಪ್ರಚಾರ ಸಮಿತಿ ಸಂಸ್ಥಾಪಕ ರಾಜ್ಯಾಧ್ಯಕ್ಷ ಡಿ.ಕೆ.ಮಹೇಂದ್ರ ಕುಮಾರ್ ತಿಳಿಸಿದರು.

ಕುಂದಾಣ: ಮಾನವ ಹಕ್ಕುಗಳ ಕುರಿತು ಇಂದು ಪ್ರಪಂಚಾದ್ಯಂತ ಚರ್ಚೆಯಾಗುತ್ತಿದೆ. ವಿದ್ಯಾರ್ಥಿ ದೆಸೆಯಿಂದಲೇ ಇವುಗಳ ಬಗ್ಗೆ ಅರಿವು ಮೂಡಿಸುವುದರಿಂದ ಭವಿಷ್ಯದಲ್ಲಿ ಆರೋಗ್ಯಕರ ಸಮಾಜ ಸೃಷ್ಟಿಸಲು ಸಾಧ್ಯವಾಗುತ್ತದೆ ಎಂದು ಕರ್ನಾಟಕ ಮಾನವ ಹಕ್ಕುಗಳ ಪ್ರಚಾರ ಸಮಿತಿ ಸಂಸ್ಥಾಪಕ ರಾಜ್ಯಾಧ್ಯಕ್ಷ ಡಿ.ಕೆ.ಮಹೇಂದ್ರ ಕುಮಾರ್ ತಿಳಿಸಿದರು.

ಪಟ್ಟಣದ ಮಾನವ ಹಕ್ಕುಗಳ ಪ್ರಚಾರ ಸಮಿತಿ ಕಚೇರಿಯಲ್ಲಿ ನೂತನ ಪದಾಧಿಕಾರಿಗಳಿಗೆ ಪ್ರಮಾಣ, ನೇಮಕಾತಿ ಆದೇಶ ಪತ್ರ ಹಾಗೂ ಐಡಿ ಕಾರ್ಡ್ ವಿತರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನೂತನವಾಗಿ ಅಧಿಕಾರ ಸ್ವೀಕರಿಸಿರುವ ಪದಾಧಿಕಾರಿಗಳು ಸಂಸ್ಥೆಯ ಕಟ್ಟುಪಾಡುಗಳೆಗೆ ಬದ್ಧರಾಗಿ ಕೆಲಸ ನಿರ್ವಹಿಸಬೇಕು. ಮಾನವನ ಹಕ್ಕುಗಳ ಬಗ್ಗೆ ಹೆಚ್ಚು ಪ್ರಚುರಪಡಿಸಿ ಅನ್ಯಾಯಕ್ಕೊಳಗಾದವರಿಗೆ ನ್ಯಾಯದೊರಕಿಸಿ ಕೊಡಬೇಕು ಎಂದು ಹೇಳಿದರು.ನಮ್ಮ ಮಾನವ ಹಕ್ಕುಗಳು ವ್ಯಕ್ತಿಯ ಸ್ವಾತಂತ್ರ್ಯ, ಸಮಾನತೆ, ಗೌರವ ಹಾಗೂ ಘನತೆಗೆ ಸಂಬಂಧಿಸಿದವುಗಳು. ಪ್ರತಿಯೊಬ್ಬರಿಗೂ ಸ್ವತಂತ್ರವಾಗಿ ಜೀವಿಸಲು ಮಾನವ ಹಕ್ಕುಗಳು ರಕ್ಷಣೆ ನೀಡುತ್ತವೆ. ಮಾನವ ಹಕ್ಕುಗಳ ಬಗ್ಗೆ ಸಾರ್ವಜನಿಕ ವಲಯದಲ್ಲಿ ಅರಿವು ಮೂಡಿಸುವ ಕೆಲಸ ಮಾಡಬೇಕು. ಮಕ್ಕಳಿಗೆ ಕಾನೂನಿನ ಮೌಲ್ಯಗಳನ್ನು ಕುರಿತು ವ್ಯಾಸಂಗದ ಅವಧಿಯಲ್ಲೇ ಅರಿವು ಮೂಡಿಸುವುದು ಅಗತ್ಯ. ಇತ್ತೀಚಿನ ದಿನಗಳಲ್ಲಿ ಅನೇಕ ಮೂಲಭೂತ ಹಕ್ಕುಗಳ ಉಲ್ಲಂಘನೆ ನಡೆಯುತ್ತಿದೆ. ಪರಿಸರ ಮಾಲಿನ್ಯದ ನಡುವೆ ಜನರು ಬದುಕುವಂತಹ ಸ್ಥಿತಿ ನಿರ್ಮಾಣವಾಗಿದೆ. ಸರ್ಕಾರಗಳು ಮೂಲಭೂತ ಹಕ್ಕುಗಳಿಗೆ ಚ್ಯುತಿ ಬಾರದಂತಹ ಯೋಜನೆಗಳನ್ನು ರೂಪಿಸುವುದು ಅವಶ್ಯಕ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಕರ್ನಾಟಕ ಮಾನವ ಹಕ್ಕುಗಳ ಪ್ರಚಾರ ಸಮಿತಿ ರಾಜ್ಯಧ್ಯಾಕ್ಷೆ ಎನ್.ವಸಂತ,ಗೌರವ ಕಾರ್ಯದರ್ಶಿ ಡಿ.ಆರ್.ಬಾಲರಾಜು ಮತ್ತಿತರರು ಉಪಸ್ಥಿತರಿಕದ್ದರು.ಬಾಕ್ಸ್‌..........

ನೂತನ ಪದಾಧಿಕಾರಿಗಳು

ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷೆ ಆರ್‌.ಪುನೀತಾ, ಕಾನೂನು ಘಟಕದ ಅಧ್ಯಕ್ಷ ಕೆ.ಎಂ.ಸಂದೀಪ್, ರೈತ ಸಂಘದ ಅಧ್ಯಕ್ಷ ಚಂದ್ರಶೇಖರ್, ಉಪಾಧ್ಯಕ್ಷ ಗೋಪಾಲ್, ಪ್ರಾಚೀನ ಇತಿಹಾಸ ಪ್ರಾಚ್ಯ ವಸ್ತು ಶಾಸನ ಸಂರಕ್ಷ್ಷಣಾ ಸಮಿತಿ ಅಧ್ಯಕ್ಷ ಗುರುಸಿದ್ದಯ್ಯ, ತುಮಕೂರು ಜಿಲ್ಲಾಧ್ಯಕ್ಷ ಕೃಷ್ಣಮೂರ್ತಿ, ದೇವನಹಳ್ಳಿ ತಾಲೂಕು ಅಧ್ಯಕ್ಷ ಎಂ.ರಾಮಕೃಷ್ಣ, ರೈತ ಸಂಘದ ಅಧ್ಯಕ್ಷ ಆಂಜಿನಪ್ಪ, ಕಾನೂನು ಘಟಕದ ಅಧ್ಯಕ್ಷ ಎನ್.ಎಂ.ಶಿವಕುಮಾರ್, ಕಾರ್ಮಿಕ ಘಟಕದ ಅಧ್ಯಕ್ಷ ಮುನಿಕೃಷ್ಣ ಉಪಾಧ್ಯಕ್ಷ ರವಿಕುಮಾರ್, ಮಹಿಳಾ ಘಟಕದ ಅಧ್ಯಕ್ಷೆ ಬಿ.ಎ.ಮಮತಾ, ಸಾರ್ವಜನಿಕ ಹಿತರಕ್ಷಣಾ ಸಮಿತಿ ಉಪಾಧ್ಯಕ್ಷ ರಾಧಾಕೃಷ್ಣ, ಗೋಪಾಲಕೃಷ್ಣ, ಮಧುಚಂದ್ರ, ಎಚ್.ಹರ್ಷ, ನರಸಿಂಹಮೂರ್ತಿ, ಖಜಾಂಚಿ ಮಲ್ಲಿಕಾರ್ಜುನ, ಸಂಘಟನಾ ಕಾರ್ಯದರ್ಶಿ ಶ್ರೀನಿವಾಸ್ ಅವರನ್ನು ಆಯ್ಕೆ ಮಾಡಲಾಗಿದೆ.

ದೇವನಹಳ್ಳಿ: ೦೧ ಚಿತ್ರಸುದ್ದಿ : ೦೩

ದೇವನಹಳ್ಳಿಯ ಮಾನವ ಹಕ್ಕುಗಳ ಪ್ರಚಾರ ಸಮಿತಿ ಕಚೇರಿಯಲ್ಲಿ ಸಮಿತಿಯ ನೂತನ ಪದಾಧಿಕಾರಿಗಳ ಪ್ರಮಾಣ ಸ್ವೀಕಾರ ಹಾಗೂ ಆದೇಶ ಪತ್ರವನ್ನು ವಿತರಿಸಲಾಯಿತು.