ಭ್ರಷ್ಟಾಚಾರ ನಿಮೂರ್ಲನೆ ಅರಿವು ಮೂಡಿಸಿ: ಲಕ್ಷ್ಮೀನಾರಾಯಣ

| Published : Oct 30 2024, 12:36 AM IST

ಸಾರಾಂಶ

ದೇಶದ ಅಭಿವೃದ್ಧಿಯನ್ನು ಕುಂಠಿತಗೊಳಿಸುತ್ತಿರುವ ಭ್ರಷ್ಟಾಚಾರದ ವಿರುದ್ಧ ಸರ್ಕಾರಗಳು ಕಠಿಣ ಕಾನೂನುಗಳನ್ನು ಜಾರಿಗೊಳಿಸಿವೆ ಎಂದು ಜಿಲ್ಲಾ ಕರ್ನಾಟಕ ಲೋಕಾಯುಕ್ತ ಇಲಾಖೆಯ ಪೊಲೀಸ್‌ ಅಧೀಕ್ಷಕ ಲಕ್ಷ್ಮೀನಾರಾಯಣ ಎ. ವಿ. ಹೇಳಿದರು

ಕನ್ನಡಪ್ರಭ ವಾರ್ತೆ ತುಮಕೂರುದೇಶದ ಅಭಿವೃದ್ಧಿಯನ್ನು ಕುಂಠಿತಗೊಳಿಸುತ್ತಿರುವ ಭ್ರಷ್ಟಾಚಾರದ ವಿರುದ್ಧ ಸರ್ಕಾರಗಳು ಕಠಿಣ ಕಾನೂನುಗಳನ್ನು ಜಾರಿಗೊಳಿಸಿವೆ ಎಂದು ಜಿಲ್ಲಾ ಕರ್ನಾಟಕ ಲೋಕಾಯುಕ್ತ ಇಲಾಖೆಯ ಪೊಲೀಸ್‌ ಅಧೀಕ್ಷಕ ಲಕ್ಷ್ಮೀನಾರಾಯಣ ಎ. ವಿ. ಹೇಳಿದರು.ಇಲ್ಲಿನ ವಿವಿಯಲ್ಲಿ ಜಿಲ್ಲಾ ಕರ್ನಾಟಕ ಲೋಕಾಯುಕ್ತ ಇಲಾಖೆಯ ವತಿಯಿಂದ ಮಂಗಳವಾರ ಆಯೋಜಿಸಿದ್ದ ಭ್ರಷ್ಟಾಚಾರದ ವಿರುದ್ಧ ಜಾಗೃತಿ ಅರಿವಿನ ಸಪ್ತಾಹ ಉದ್ಘಾಟಿಸಿ ಮಾತನಾಡಿದರು. ಭ್ರಷ್ಟಾಚಾರ ನಿಮೂರ್ಲನೆಯ ಅರಿವು ವಿದ್ಯಾರ್ಥಿಗಳಿಂದ ಆರಂಭವಾಗಬೇಕು ಎಂದರು.ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನೂರುನ್ನಿಸಾ ಮಾತನಾಡಿ, ಜಿಲ್ಲಾ ಕಾರಾಗೃಹದಲ್ಲಿ ಭ್ರಷ್ಟಾಚಾರದ ಮೊಕದ್ದಮೆಯಲ್ಲಿ ಕೆಲ ಸರ್ಕಾರಿ ಅಧಿಕಾರಿಗಳು ಶಿಕ್ಷೆ ಅನುಭವಿಸುತ್ತಿದ್ದಾರೆ. ದುರಾಸೆಯ ಸ್ವಭಾವದಿಂದ ಮನುಷ್ಯನಲ್ಲಿ ನೈತಿಕ ಮೌಲ್ಯಗಳು ಕುಸಿದಿವೆ. ಎಲ್ಲೆಡೆ ಭ್ರಷ್ಟಾಚಾರದ ಬೇರು ವಿಸ್ತಾರವಾಗುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದರು.ಸರ್ಕಾರಿ ಸೌಲಭ್ಯಗಳಿದ್ದರೂ ಅಧಿಕಾರಿಗಳು ಭ್ರಷ್ಟಾಚಾರದಲ್ಲಿ ತೊಡಗುತ್ತಿರುವುದು ವಿಷಾದನೀಯ. ಮಾನವೀಯ ಮೌಲ್ಯಗಳನ್ನು ಗಾಳಿಗೆ ತೂರಿ ಭ್ರಷ್ಟತೆಯನ್ನು ಮೈಗೂಡಿಸಿಕೊಂಡು, ಆದಾಯಕ್ಕಿಂತಲೂ ಹೆಚ್ಚಿನ ಆಸ್ತಿ ಹೊಂದಿರುವ ಅಧಿಕಾರಿಗಳಿಗೆ ಕಾನೂನು ಕಠಿಣಕ್ರಮ ಕೈಗೊಳ್ಳಬೇಕು ಎಂದರು. ಕರ್ನಾಟಕ ಲೋಕಾಯುಕ್ತ ಇಲಾಖೆಯ ಪೊಲೀಸ್‌ ಉಪಾಧೀಕ್ಷಕ ಬಸವರಾಜ್‌ ಆರ್.ಮಗದುಮ್‌ ಮಾತನಾಡಿ, ಭ್ರಷ್ಟಾಚಾರದಿಂದ ಆಗುತ್ತಿರುವ ಅನಾಹುತಗಳು, ಸರ್ಕಾರಿ ಉದ್ಯೋಗ ಪಡೆಯಲು ಅರ್ಹ ಅಭ್ಯರ್ಥಿಗಳಿಗೆ ಆಗುತ್ತಿರುವ ಅನ್ಯಾಯ, ಸರ್ಕಾರಿ ಕಚೇರಿಗಳಲ್ಲಿ ನಡೆಯುತ್ತಿರುವ ಭ್ರಷ್ಟಾಚಾರ, ಭ್ರಷ್ಟಾಚಾರ ನಿಗ್ರಹಿಸಲು ಕೇಂದ್ರ ಸರ್ಕಾರವು ರಚಿಸಿರುವ ಕೇಂದ್ರ ಜಾಗೃತ ಆಯೋಗ, ಭ್ರಷ್ಟಾಚಾರ ವಿರೋಧಿ ಇಲಾಖೆ, ಸಾರ್ವಜನಿಕ ಜಾಗೃತಿ, ಕಾನೂನುಗಳ ಕುರಿತು ತಿಳಿಸಿದರು.ಜಿಲ್ಲಾ ಕರ್ನಾಟಕ ಲೋಕಾಯುಕ್ತ ಇಲಾಖೆಯ ಪೊಲೀಸ್‌ ಉಪಾಧೀಕ್ಷಕ ರಾಮಕೃಷ್ಣ ಕೆ. ಜಿ. ಭ್ರಷ್ಟಾಚಾರದ ವಿರುದ್ಧ ಪ್ರತಿಜ್ಞಾವಿಧಿ ಬೋಧಿಸಿದರು. ವಿವಿ ಕುಲಸಚಿವೆ ನಾಹಿದಾಜಮ್‌ಜಮ್‌ ಅಧ್ಯಕ್ಷತೆ ವಹಿಸಿದ್ದರು.ಜಿಲ್ಲಾಕರ್ನಾಟಕ ಲೋಕಾಯುಕ್ತ ಇಲಾಖೆಯ ಪೊಲೀಸ್‌ ಇನ್ಸ್ ಪೆಕ್ಟರ್ ಶಿವರುದ್ರಪ್ಪ ಮೇಟಿ ಉಪಸ್ಥಿತರಿದ್ದರು.