ಮಂಗಳೂರು: ಹವಾಮಾನ ವೈಪರೀತ್ಯದ ಕಾರಣದಿಂದಾಗಿ ಮುಂಬರುವ ಬೇಸಿಗೆಯ ಅವಧಿಯಲ್ಲಿ ಕುಡಿಯುವ ನೀರಿನ ಕೊರತೆ ಎದುರಾಗುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಸಾರ್ವಜನಿಕರಲ್ಲಿ ನೀರಿನ ಸದ್ಬಳಕೆ ಹಾಗೂ ಸಂರಕ್ಷಣೆ ಕುರಿತು ವ್ಯಾಪಕ ಅರಿವು ಮತ್ತು ಜಾಗೃತಿ ಮೂಡಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ.ಖಾದರ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.ಅವರು ಭಾನುವಾರ ದ.ಕ. ಜಿಲ್ಲಾಧಿಕಾರಿ ಕಚೇರಿಯಲ್ಲಿ ಕುಡಿಯುವ ನೀರು ಹಾಗೂ ವಿವಿಧ ಇಲಾಖೆಗಳ ವಿಷಯಗಳ ಬಗ್ಗೆ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.ಮುಂದಿನ ಬೇಸಿಗೆಯಲ್ಲಿ ನೀರಿಗಾಗಿ ಯಾವುದೇ ರೀತಿಯಲ್ಲಿ ಸಾರ್ವಜನಿಕರು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಬಾರದು ಎಂಬ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗಿದೆ. ಕುಡಿಯುವ ನೀರನ್ನು ಅನಗತ್ಯವಾಗಿ ಪೋಲು ಮಾಡದೆ, ಮಿತವಾಗಿ ಹಾಗೂ ಜಾಗರೂಕತೆಯಿಂದ ಬಳಸಲು ಸಾರ್ವಜನಿಕರಲ್ಲಿ ವಿನಂತಿಸಬೇಕು. ಸ್ಥಳೀಯಾಡಳಿತ ಮತ್ತು ಸಂಬಂಧಪಟ್ಟ ಇಲಾಖೆಗಳ ಮುಖಾಂತರ ಜಾಗೃತಿ ಅಭಿಯಾನಗಳನ್ನು ಹಮ್ಮಿಕೊಳ್ಳಲು ಅವರು ಜಿಲ್ಲಾಧಿಕಾರಿಗಳಿಗೆ ಸೂಚಿಸಿದರು.ಅನುದಾನ ಲಭ್ಯವಿದೆ: ಕುಡಿಯುವ ನೀರಿನ ಪೂರೈಕೆ ಮತ್ತು ಸಂಬಂಧಿತ ಅಂದಾಜು ಕಾಮಗಾರಿಗಳ ವೆಚ್ಚಕ್ಕಾಗಿ ಜಿಲ್ಲಾಧಿಕಾರಿಗಳು ಹಾಗೂ ತಾಲೂಕು ತಹಸೀಲ್ದಾರರ ಖಾತೆಯಲ್ಲಿ ಈಗಾಗಲೇ ಸಾಕಷ್ಟು ಅನುದಾನ ಲಭ್ಯವಿದೆ ಎಂದು ಸಚಿವರು ಸ್ಪಷ್ಟಪಡಿಸಿದರು.ಒಂದು ವೇಳೆ ಈ ಅನುದಾನ ಸಾಲದೇ, ಹೆಚ್ಚುವರಿ ಹಣಕಾಸಿನ ಅಗತ್ಯವಿದ್ದಲ್ಲಿ, ತಕ್ಷಣವೇ ಸರ್ಕಾರಕ್ಕೆ ಸೂಕ್ತ ಪ್ರಸ್ತಾವನೆ ಸಲ್ಲಿಸಿ ಅಗತ್ಯ ಅನುದಾನ ಪಡೆದುಕೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.ಜಿಲ್ಲಾಧಿಕಾರಿ ದರ್ಶನ್ ಸೇರಿದಂತೆ ಅಧಿಕಾರಿಗಳು ಇದ್ದರು.
ಬೇಸಿಗೆಯಲ್ಲಿ ಕುಡಿಯುವ ನೀರಿನ ಅಭಾವ ತಡೆಗೆ ಅರಿವು ಮೂಡಿಸಿ: ಸಚಿವ ಖಾದರ್
ಹವಾಮಾನ ವೈಪರೀತ್ಯದ ಕಾರಣದಿಂದಾಗಿ ಮುಂಬರುವ ಬೇಸಿಗೆಯ ಅವಧಿಯಲ್ಲಿ ಕುಡಿಯುವ ನೀರಿನ ಕೊರತೆ ಎದುರಾಗುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಸಾರ್ವಜನಿಕರಲ್ಲಿ ನೀರಿನ ಸದ್ಬಳಕೆ ಹಾಗೂ ಸಂರಕ್ಷಣೆ ಕುರಿತು ವ್ಯಾಪಕ ಅರಿವು ಮತ್ತು ಜಾಗೃತಿ ಮೂಡಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ.ಖಾದರ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
Latest Videos
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.