ಗ್ರಾಹಕರಲ್ಲಿ ಹಕ್ಕುಗಳ ಸಂರಕ್ಷಣೆ ಜಾಗೃತಿ ಮೂಡಿಸಿ: ಜಿಲ್ಲಾಧಿಕಾರಿ

| Published : Mar 26 2024, 01:16 AM IST

ಗ್ರಾಹಕರಲ್ಲಿ ಹಕ್ಕುಗಳ ಸಂರಕ್ಷಣೆ ಜಾಗೃತಿ ಮೂಡಿಸಿ: ಜಿಲ್ಲಾಧಿಕಾರಿ
Share this Article
  • FB
  • TW
  • Linkdin
  • Email

ಸಾರಾಂಶ

ಸರಕು ಮತ್ತು ಸೇವೆಗಳ ಸೇವಾ ನ್ಯೂನತೆ ವಿರುದ್ಧ ರಕ್ಷಣೆ ಪಡೆಯುವ ಹಕ್ಕುಗಳು ಮತ್ತು ಅನ್ಯಾಯದ ವ್ಯಾಪಾರ ಪದ್ಧತಿಗಳಿಂದ ಗ್ರಾಹಕರನ್ನು ರಕ್ಷಿಸಲು ಸರಕು ಮತ್ತು ಸೇವೆಯ ಗುಣಮಟ್ಟ, ಪ್ರಮಾಣ ಮತ್ತು ದರ ಕುರಿತು ಪ್ರಶ್ನಿಸಲು ಪ್ರತಿಯೊಬ್ಬ ಗ್ರಾಹಕರು ಸಂರಕ್ಷಣಾ ಹಕ್ಕುಗಳ ಬಗ್ಗೆ ತಿಳಿಯಬೇಕು ಎಂದು ಜಿಲ್ಲಾಧಿಕಾರಿ ಡಾ. ಎಂ.ವಿ. ವೆಂಕಟೇಶ್ ದಾವಣಗೆರೆಯಲ್ಲಿ ಹೇಳಿದ್ದಾರೆ.

ಕನ್ನಡ ಪ್ರಭ ವಾರ್ತೆ, ದಾವಣಗೆರೆ

ಸರಕು ಮತ್ತು ಸೇವೆಗಳ ಸೇವಾ ನ್ಯೂನತೆ ವಿರುದ್ಧ ರಕ್ಷಣೆ ಪಡೆಯುವ ಹಕ್ಕುಗಳು ಮತ್ತು ಅನ್ಯಾಯದ ವ್ಯಾಪಾರ ಪದ್ಧತಿಗಳಿಂದ ಗ್ರಾಹಕರನ್ನು ರಕ್ಷಿಸಲು ಸರಕು ಮತ್ತು ಸೇವೆಯ ಗುಣಮಟ್ಟ, ಪ್ರಮಾಣ ಮತ್ತು ದರ ಕುರಿತು ಪ್ರಶ್ನಿಸಲು ಪ್ರತಿಯೊಬ್ಬ ಗ್ರಾಹಕರು ಸಂರಕ್ಷಣಾ ಹಕ್ಕುಗಳ ಬಗ್ಗೆ ತಿಳಿಯಬೇಕು ಎಂದು ಜಿಲ್ಲಾಧಿಕಾರಿ ಡಾ. ಎಂ.ವಿ. ವೆಂಕಟೇಶ್ ಹೇಳಿದರು.

ನಗರದ ಯುಬಿಡಿಟಿ ಎಂಜಿನಿಯರಿಂಗ್ ಕಾಲೇಜಿನಲ್ಲಿ ಶುಕ್ರವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ, ಜಿಲ್ಲಾ ಗ್ರಾಹಕರ ವಾಣಿಜ್ಯಗಳ ಪರಿಹಾರ ಆಯೋಗ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಕಾನೂನು ಮಾಪನಶಾಸ್ತ್ರ ಇಲಾಖೆ, ಜಿಲ್ಲಾ ಗ್ರಾಹಕರ ಮಾಹಿತಿ ಕೇಂದ್ರ, ಆಹಾರ ಸುರಕ್ಷತಾ ಮತ್ತು ಗುಣಮಟ್ಟ ಪ್ರಾಧಿಕಾರ, ಯುಬಿಡಿಟಿ ಎಂಜಿನಿಯರಿಂಗ್ ಕಾಲೇಜು ಆಶ್ರಯದಲ್ಲಿ ಏರ್ಪಡಿಸಲಾಗಿದ್ದ ವಿಶ್ವ ಗ್ರಾಹಕರ ದಿನ ಕಾರ್ಯಕ್ರಮ ಉದ್ಘಾಟಸಿ ಅವರು ಮಾತನಾಡಿದರು.

ಗ್ರಾಹಕರಿಗೆ ಸರಕು, ಸೇವೆಗಳ ಬಗ್ಗೆ ಜಾಗೃತಿ ಇರಬೇಕು. ಗ್ರಾಹಕರು ಸರಕುಗಳನ್ನು ಒದಗಿಸುವ ಮಾರಾಟಗಾರ ಬಳಿ ಬಂದಾಗ ಆಯಾ ವಸ್ತುಗಳ ಬಗ್ಗೆ ಸಂಪೂರ್ಣ ಮಾಹಿತಿ ಪಡೆಯುವ ಹಕ್ಕು ಹೊಂದಿರುತ್ತಾನೆ. ವ್ಯಾಪಾರದಾರರಿಂದ ಗ್ರಾಹಕರಿಗೆ ಒದಗಿಸಿದ ಸರಕುಗಳು ಗುಣಮಟ್ಟಕ್ಕೆ ಅನುಗುಣವಾಗಿಲ್ಲದಿದ್ದರೆ, ಖರೀದಿಸಿದ ವಸ್ತುಗಳ ಸಂಪೂರ್ಣ ದಾಖಲೆಗಳನ್ನಿಟ್ಟುಕೊಂಡು ಗ್ರಾಹಕರ ನ್ಯಾಯಾಲಯದಲ್ಲಿ ಪ್ರಶ್ನಿಸಬಹುದಾಗಿದೆ. ಕಳಪೆ, ಸೇವಾ ನ್ಯೂನತೆ ವಿರುದ್ಧ ನಷ್ಟಕ್ಕೆ ಪರಿಹಾರ ಪಡೆಯಲು ಸಾಧ್ಯವಿದೆ ಎಂದರು.

ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಅಧ್ಯಕ್ಷ ಮಹಾಂತೇಶ್ ಈರಪ್ಪ ಶಿಗ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿ. ದೈನಂದಿನ ಜೀವನದಲ್ಲಿ ಪ್ರತಿಯೊಬ್ಬರೂ ಗ್ರಾಹಕರೇ. ಗ್ರಾಹಕರಿಗೆ ನ್ಯಾಯಯುತ, ಯೋಗ್ಯ ಹಾಗೂ ಗುಣಮಟ್ಟದ ಸರಕು ಮತ್ತು ಸೇವೆಗಳನ್ನು ನೀಡುವ ಜವಾಬ್ದಾರಿ ವ್ಯಾಪಾರಸ್ಥರದಾಗಿದೆ ಎಂದರು.

ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಮಹಾವೀರ್ ಮ. ಕೆರೆಣ್ಣ ಮಾತನಾಡಿ, ವ್ಯಾಪಾರಸ್ಥರು ವಸ್ತುಗಳಿಗೆ ನಿಗದಿತ ಬೆಲೆಗಿಂತ ಹೆಚ್ಚಿನ ದರ ಪಡೆಯುವಂತಿಲ್ಲ. ವಸ್ತುಗಳು ದೋಷದಿಂದ ಕೂಡಿದ್ದರೆ ಪ್ರಶ್ನೆ ಮಾಡುವ ಹಕ್ಕು ಗ್ರಾಹಕರಿಗಿದೆ ಎಂದರು.

ಆಹಾರ ಇಲಾಖೆ ಉಪ ನಿರ್ದೇಶಕ ಸಿದ್ದರಾಮ್ ಮಾರಿಹಾಳ್ ಸ್ವಾಗತಿಸಿದರು. ಯುಬಿಡಿಟಿ ಕಾಲೇಜಿನ ಪ್ರಾಧ್ಯಾಪಕರಾದ ಮೊಹಮದ್ ರಫಿ ಉಪನ್ಯಾಸ ನೀಡಿದರು.

ಜಿಲ್ಲಾ ಗ್ರಾಹಕರ ವಾಣಿಜ್ಯಗಳ ಪರಿಹಾರ ಆಯೋಗದ ಸದಸ್ಯರಾದ ಸಿ.ಎಸ್. ತ್ಯಾಗರಾಜನ್, ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಮಹಿಳಾ ಸದಸ್ಯರಾದ ಬಿ.ವಿ. ಗೀತಾ, ಯುಬಿಡಿಟಿ ಎಂಜಿನಿಯರಿಂಗ್ ಕಾಲೇಜ್ ಪ್ರಾಚಾರ್ಯ ಡಾ. ಡಿ.ಪಿ. ನಾಗರಾಜಪ್ಪ, ವಿದ್ಯಾರ್ಥಿಗಳ ಕ್ಷೇಮಾಭಿವೃದ್ಧಿ ಸಂಘದ ಡೀನ್ ಎನ್.ಮಂಜನಾಯಕ್, ಡಿಸಿಐಸಿ ಅಧ್ಯಕ್ಷೆ ಎಚ್.ಅನಿತಾ, ಆಹಾರ ಇಲಾಖೆಯ ಸಹ ನಿರ್ದೇಶಕ ಟಿ.ಶಿವಾಜಿ, ಆಹಾರ ನಿರೀಕ್ಷಕರು ಮಂಜುನಾಥ ಇತರರು ಭಾಗವಹಿಸಿದ್ದರು.

- - - -22ಕೆಡಿವಿಜಿ41ಃ:

ದಾವಣಗೆರೆಯಲ್ಲಿ ವಿಶ್ವ ಗ್ರಾಹಕರ ದಿನ ಕಾರ್ಯಕ್ರಮವನ್ನು ಡಾ. ಎಂ.ವಿ.ವೆಂಕಟೇಶ್ ಉದ್ಘಾಟಿಸಿದರು.