ಸಾರಾಂಶ
ಗವಿಸಿದ್ಧೇಶ್ವರ ಪದವಿ ಮಹಾವಿದ್ಯಾಲಯದಲ್ಲಿ ಭೌತಶಾಸ್ತ್ರ ವಿಭಾಗದ ವತಿಯಿಂದ ಜರುಗಿದ ಒಂದು ದಿನದ ಕಾರ್ಯಾಗಾರ ಉದ್ಘಾಟನೆ
ಕನ್ನಡಪ್ರಭ ವಾರ್ತೆ ಕೊಪ್ಪಳ
ಚಂದ್ರಯಾನ ಯಶಸ್ಸು ವಿಜ್ಞಾನಿಗಳ ಪ್ರಾಮುಖ್ಯತೆ ಹೆಚ್ಚಿಸಿದ್ದು, ಜಾಗೃತಿ ಮೂಡಿಸಿದೆ ಎಂದು ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ ಭೌತಶಾಸ್ತ್ರ ವಿಭಾಗದ ಪ್ರಾಧ್ಯಾಪಕ ಡಾ. ಉದಯಕುಮಾರ ಖಡ್ಕೆ ಹೇಳಿದರು.ನಗರದ ಶ್ರೀ ಗವಿಸಿದ್ಧೇಶ್ವರ ಪದವಿ ಮಹಾವಿದ್ಯಾಲಯದಲ್ಲಿ ಭೌತಶಾಸ್ತ್ರ ವಿಭಾಗದ ವತಿಯಿಂದ ಜರುಗಿದ ಒಂದು ದಿನದ ಕಾರ್ಯಾಗಾರ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು. ವಿದ್ಯಾರ್ಥಿಗಳು ಭೌತಶಾಸ್ತ್ರ ವಿಷಯದಲ್ಲಿ ಹೆಚ್ಚಿನ ಆಸಕ್ತಿ ಹೊಂದುವಂತೆ ಪ್ರಾಧ್ಯಾಪಕರು ಪ್ರೇರೇಪಿಸಬೇಕು. ವಿಜ್ಞಾನದ ಅಗತ್ಯತೆ ಮತ್ತು ಪ್ರಾಮುಖ್ಯತೆ ಇತ್ತೀಚೆಗೆ ಅರಿವಾಗುತ್ತಿದೆ. ಹೀಗಾಗಿ, ವಿದ್ಯಾರ್ಥಿಗಳಲ್ಲಿ ವಿಜ್ಞಾನದ ಕುರಿತು ಕುತೂಹಲ ಮೂಡಿಸಬೇಕು. ಹಾಗೆಯೇ ವಿದ್ಯಾರ್ಥಿಗಳು ಪ್ರಶ್ನೆ ಮಾಡುವ ಮನೋಭಾವನೆಯನ್ನು ಪ್ರೇರೇಪಿಸಬೇಕು ಎಂದರು.
ಶ್ರೀ ಗವಿಸಿದ್ಧೇಶ್ವರ ವಿದ್ಯಾವರ್ಧಕ ಟ್ರಸ್ಟಿನ ಆಡಳಿತಾಧಿಕಾರಿ ಡಾ. ಮಹಾಂತೇಶ ಸಾಲಿಮಠ ಮಾತನಾಡಿ, ವಿದ್ಯಾರ್ಥಿಗಳು ಯಶಸ್ಸು ಸಾಧಿಸಲು ವೈಜ್ಞಾನಿಕ ತಳಹದಿಯ ಜೊತೆಗೆ ಆಸಕ್ತಿ ರೂಢಿಸಿಕೊಳ್ಳಬೇಕೆಂದು ಸಲಹೆ ನೀಡಿದರು.ಮಹಾವಿದ್ಯಾಲಯದ ಪ್ರಾಚಾರ್ಯ ಡಾ. ಚನ್ನಬಸವ ಅಧ್ಯಕ್ಷತೆ ವಹಿಸಿದ್ದರು. ಉಪಪ್ರಾಚಾರ್ಯ ಡಾ. ಕರಿಬಸವೇಶ್ವರ ಬಿ., ಐಕ್ಯೂಎಸಿ ಸಂಯೋಜಕ ಡಾ. ಅರುಣಕುಮಾರ ಎ.ಜಿ. ಭಾಗವಹಿದ್ದರು. ಕಾರ್ಯಕ್ರಮದ ಆಯೋಜಕ ಭೌತಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಡಾ. ಮಂಜುನಾಥ ಎಂ., ಪ್ರಾಧ್ಯಾಪಕರಾದ ಡಾ. ಶಶಿಕಾಂತ ಉಮ್ಮಾಪುರೆ, ಡಾ. ಮಂಜುನಾಥ ಗಾಳಿ, ಡಾ. ಜಾಲಿಹಾಳ ಶರಣಪ್ಪ, ಡಾ. ಸುಂದರ ಮೇಟಿ, ಡಾ. ಅಜಿತ ನಾರಾಯಣ ಉಪಸ್ಥಿತರಿದ್ದರು.
ವಿಭಾಗದ ಸಹಾಯಕ ಪ್ರಾಧ್ಯಾಪಕ ಶರಣಪ್ಪ ಚವ್ಹಾಣ ಸ್ವಾಗತಿಸಿದರು. ಬಿಎಸ್ಸಿ 6ನೇ ಸೆಮ್ ವಿದ್ಯಾರ್ಥಿನಿ ಸಂಗೀತ ಪ್ರಾರ್ಥಿಸಿದರು. ವೆನಿಲಾ ಮತ್ತು ವೈಷ್ಣವಿ ನಿರೂಪಿಸಿದರು. ವಿಭಾಗದ ಉಪನ್ಯಾಸಕ ಅಕ್ಷಯಕುಮಾರ ಎಲ್. ವಂದಿಸಿದರು.;Resize=(128,128))
;Resize=(128,128))
;Resize=(128,128))
;Resize=(128,128))