ಸಾರಾಂಶ
ಸಾಮಾಜಿಕ ನ್ಯಾಯದ ಪ್ರಕಾರ ಅಲೆಮಾರಿಗಳಿಗೆ ಪ್ರತ್ಯೇಕ ಮೀಸಲಾತಿಯನ್ನು ಕಲ್ಪಿಸಬೇಕೆಂದು ಒತ್ತಾಯಿಸಿ ಮಹಾನಾಯಕ ದಲಿತ ಸೇನೆ ಸಂಘಟನೆಯಿಂದ ನಗರದಲ್ಲಿ ಉಪವಿಭಾಗಧಿಕಾರಿ ಮೆಹಬೂಬ್ ಜಿಲಾನಿ ಖುರೇಷಿ ಹಾಗೂ ತಹಸೀಲ್ದಾರ್ ಎಂ.ಸಿದ್ದೇಶ್ ಅವರಿಗೆ ಮನವಿ ಸಲ್ಲಿಸಲಾಯಿತು.
ಹಿರಿಯೂರು: ಸಾಮಾಜಿಕ ನ್ಯಾಯದ ಪ್ರಕಾರ ಅಲೆಮಾರಿಗಳಿಗೆ ಪ್ರತ್ಯೇಕ ಮೀಸಲಾತಿಯನ್ನು ಕಲ್ಪಿಸಬೇಕೆಂದು ಒತ್ತಾಯಿಸಿ ಮಹಾನಾಯಕ ದಲಿತ ಸೇನೆ ಸಂಘಟನೆಯಿಂದ ನಗರದಲ್ಲಿ ಉಪವಿಭಾಗಧಿಕಾರಿ ಮೆಹಬೂಬ್ ಜಿಲಾನಿ ಖುರೇಷಿ ಹಾಗೂ ತಹಸೀಲ್ದಾರ್ ಎಂ.ಸಿದ್ದೇಶ್ ಅವರಿಗೆ ಮನವಿ ಸಲ್ಲಿಸಲಾಯಿತು.
ಈ ವೇಳೆ ಮಾತನಾಡಿದ ಸಂಘಟನೆಯ ರಾಜ್ಯ ಕಾರ್ಯಾಧ್ಯಕ್ಷ ಕೆ.ಪಿ.ಶ್ರೀನಿವಾಸ್, ಅಲೆಮಾರಿಗಳಿಗೆ ಪ್ರತ್ಯೇಕ ಮೀಸಲಾತಿ ಕಲ್ಪಿಸಿ ಸಾಮಾಜಿಕ ನ್ಯಾಯ ಎತ್ತಿ ಹಿಡಿಯಲು ಇತ್ತೀಚಿಗೆ ಸರ್ಕಾರವು ಒಳಮೀಸಲಾತಿ ಜಾರಿ ಮಾಡಿದ್ದು, ಜಸ್ಟಿಸ್ ನಾಗಮೋಹನ್ ದಾಸ್ ವರದಿಯಲ್ಲಿ ಪರಿಶಿಷ್ಟ ಜಾತಿಯಲ್ಲಿ ತೀರ ಹಿಂದುಳಿದ ಅಲೆಮಾರಿ ಸಮುದಾಯಗಳಿಗೆ ಶೇ.1 ಮೀಸಲು ಕಲ್ಪಿಸಿರುತ್ತಾರೆ. ಆದರೆ ಸಿದ್ದರಾಮಯ್ಯನವರ ಸರ್ಕಾರವು ಸಾಮಾಜಿಕವಾಗಿ, ಆರ್ಥಿಕವಾಗಿ ಹಿಂದುಳಿದ ಅಲೆಮಾರಿ ಸಮುದಾಯಗಳನ್ನು ಸ್ಪೃಶ್ಯ ಜಾತಿಯವರೊಂದಿಗೆ ಸೇರಿಸಿ ಅನ್ಯಾಯ ಮಾಡಿದ್ದು, ಸಾಮಾಜಿಕ ನ್ಯಾಯದ ಪ್ರಕಾರ ಅಲೆಮಾರಿಗಳಿಗೆ ಪ್ರತ್ಯೇಕ ಮೀಸಲಾತಿಯನ್ನು ಕಲ್ಪಿಸಬೇಕೆಂದು ಒತ್ತಾಯಿಸಿದರು.ಈ ಸಂದರ್ಭದಲ್ಲಿ ಆಲ್ ಇಂಡಿಯಾ ಬಹುಜನ ಸಮಾಜಪಾರ್ಟಿ ಜಿಲ್ಲಾಧ್ಯಕ್ಷ ಹನುಮಂತರಾಯ ಬ್ಯಾಡರಹಳ್ಳಿ, ತಾಲೂಕು ಅಧ್ಯಕ್ಷ ಜಗದೀಶ್ ಅಬ್ಬಿನಹೊಳೆ, ಮಾನವ ಬಂಧುತ್ವ ವೇದಿಕೆಯ ತಾಲೂಕು ಸಂಚಾಲಕ ಮಾರುತೇಶ್ ಕೂನಿಕೆರೆ, ಶಿವು ಖಂಡೇನಹಳ್ಳಿ, ಆಲೂರು ಕಾಂತರಾಜ್, ಮರಡಿಹಳ್ಳಿ ತಿಪ್ಪೇಸ್ವಾಮಿ, ಮಹೇಶ್ ಪಟ್ರೆಹಳ್ಳಿ, ಮಹೇಶ್, ಮಹಾಂತೇಶ್, ಪ್ರಕಾಶ್ ಮುಂತಾದವರು ಹಾಜರಿದ್ದರು.