ಸ್ವಚ್ಛ ಪರಿಸರ ನಿರ್ಮಾಣ ಪ್ರತಿಯೊಬ್ಬ ನಾಗರಿಕನ ಕರ್ತವ್ಯ: ಜಯರಾಮ ಪ್ರಭು

| Published : Nov 18 2025, 02:00 AM IST

ಸ್ವಚ್ಛ ಪರಿಸರ ನಿರ್ಮಾಣ ಪ್ರತಿಯೊಬ್ಬ ನಾಗರಿಕನ ಕರ್ತವ್ಯ: ಜಯರಾಮ ಪ್ರಭು
Share this Article
  • FB
  • TW
  • Linkdin
  • Email

ಸಾರಾಂಶ

ವಿಶ್ವಕರ್ಮ ಸಹಕಾರ ಬ್ಯಾಂಕ್ ಕಾರ್ಕಳ ಶಾಖೆಯ ಆಶ್ರಯದಲ್ಲಿ ‘ಸ್ವಚ್ಛತಾ ಹೀ ಸೇವಾ’ ಧ್ಯೇಯ ವಾಕ್ಯದೊಂದಿಗೆ ಕಾರ್ಕಳ ನಗರದಲ್ಲಿ ಸ್ವಚ್ಛ ಭಾರತ್ ಶ್ರಮದಾನ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.

ಕನ್ನಡಪ್ರಭ ವಾರ್ತೆ ಕಾರ್ಕಳ

ಮಾನವ ಜೀವನಕ್ಕೆ ಅಗತ್ಯವಾದ ಶುಭ್ರ-ಸುವಾಸನೆಯ ಪರಿಸರವನ್ನು ಕಾಪಾಡಲು ಪ್ರತಿಯೊಬ್ಬ ನಾಗರಿಕರೂ ಜವಾಬ್ದಾರಿಯುತವಾಗಿ ನಡೆದುಕೊಳ್ಳಬೇಕು ಎಂದು ಶ್ರೀ ವೆಂಕಟರಮಣ ದೇವಸ್ಥಾನದ ಆಡಳಿತ ಮೊಕ್ತೇಸರ ಕೆ. ಜಯರಾಮ ಪ್ರಭು ತಿಳಿಸಿದ್ದಾರೆ.

ವಿಶ್ವಕರ್ಮ ಸಹಕಾರ ಬ್ಯಾಂಕ್ ಕಾರ್ಕಳ ಶಾಖೆಯ ಆಶ್ರಯದಲ್ಲಿ ‘ಸ್ವಚ್ಛತಾ ಹೀ ಸೇವಾ’ ಧ್ಯೇಯ ವಾಕ್ಯದೊಂದಿಗೆ ನಗರದಲ್ಲಿ ನಡೆದ ಸ್ವಚ್ಛ ಭಾರತ್ ಶ್ರಮದಾನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ರೋಟರಿ ಕ್ಲಬ್ ಕಾರ್ಕಳ ಅಧ್ಯಕ್ಷ ಕೆ. ನವೀನ್ ಚಂದ್ರ ಶೆಟ್ಟಿ ಮಾತನಾಡಿ, ಪರಿಸರ ಸಂರಕ್ಷಣೆಯ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ವಿಶ್ವಕರ್ಮ ಬ್ಯಾಂಕ್ ಶ್ಲಾಘನೀಯ ಸೇವೆ ಸಲ್ಲಿಸುತ್ತಿದೆ ಎಂದು ಪ್ರಶಂಸಿಸಿದರು.

ಕಾರ್ಯಕ್ರಮದಲ್ಲಿ ವಿಶ್ವಕರ್ಮ ಸಹಕಾರ ಬ್ಯಾಂಕಿನ ಉಪಾಧ್ಯಕ್ಷ ಜಗದೀಶ್ ಆಚಾರ್ಯ, ನಿರ್ದೇಶಕ ಭರತ್ ನಿಡ್ಪಳ್ಳಿ ಮತ್ತು ಬಿಜು ಜಯ, ಲಯನ್ಸ್ ಕ್ಲಬ್ ಕಾರ್ಕಳ ಸಿಟಿ ಅಧ್ಯಕ್ಷ ಗೋಪಾಲ್ ಅಂಚನ್, ಸ್ಥಾಪಕ ಅಧ್ಯಕ್ಷೆ ಜ್ಯೋತಿ ರಮೇಶ್ ಸೇರಿದಂತೆ ಸದಸ್ಯರು, ರೋಟರಿ ಕ್ಲಬ್ ಕಾರ್ಯದರ್ಶಿ ಚೇತನ್ ನಾಯಕ್ ಮತ್ತು ಸದಸ್ಯರು, ಕಾರ್ಕಳ ಪುರಸಭಾ ಸದಸ್ಯರು, ವಿಶ್ವಕರ್ಮ ಮಹಿಳಾ ಮಂಡಳಿಯ ಅಧ್ಯಕ್ಷೆ ನಳಿನಿ ವಿಜೇಂದ್ರ, ಸ್ವಚ್ಛ ಕಾರ್ಕಳ ಸಂಯೋಜಕ ಫೆಲಿಕ್ಸ್ ಜೋಸೆಫ್ ಮತ್ತು ತಂಡ, ಪ್ರಾಧ್ಯಾಪಕ ಶಂಕರ್ ಕುಡ್ವ, ಭುವನೇಂದ್ರ ಕಾಲೇಜಿನ ಎನ್‌ಎಸ್‌ಎಸ್‌, ಎನ್‌ಸಿಸಿ ಮತ್ತು ಸ್ಕೌಟ್ಸ್–ಗೈಡ್ಸ್ ವಿದ್ಯಾರ್ಥಿಗಳು, ಶ್ರೀಮದ್ ಭುವನೇಂದ್ರ ಹೈಸ್ಕೂಲಿನ ಮುಖ್ಯೋಪಾಧ್ಯಾಯ ಆರ್. ನಾರಾಯಣ ಶೆಣೈ, ವೆಂಕಟರಮಣ ಮಹಿಳಾ ಕಾಲೇಜಿನ ಗೀತಾ ಜಿ., ಧಾರ್ಮಿಕ ಕಾರ್ಯಕರ್ತ ಹರೀಶ್ ಆಚಾರ್ಯ ಹಾಗೂ ಸತೀಶ್ ಆಚಾರ್ಯ, ಕಾರ್ಕಳ ಟೈಗರ್ಸ್ ಸದಸ್ಯರು, ವಿಶ್ವಕರ್ಮ ಬ್ರಾಹ್ಮಣ ಸಮಾಜ ಸೇವಾ ಸಂಘ ನೀರೇಬೈಲೂರು ಮತ್ತು ನಿಂಜೂರು ಘಟಕಗಳ ಪದಾಧಿಕಾರಿಗಳು, ಮಾಧ್ಯಮ ಪ್ರತಿನಿಧಿಗಳು, ಬ್ಯಾಂಕ್ ಸದಸ್ಯರು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.

ಕಾರ್ಯಕ್ರಮದ ಅಂಗವಾಗಿ ಶ್ರೀ ವೆಂಕಟರಮಣ ದೇವಸ್ಥಾನ ರಸ್ತೆ -ಮಾರ್ಕೆಟ್ - ಕಾರ್ಕಳ ಬಸ್ ನಿಲ್ದಾಣ ಮಾರ್ಗದುದ್ದಕ್ಕೂ ವ್ಯಾಪಕ ಸ್ವಚ್ಛತಾ ಶ್ರಮದಾನ ನಡೆಯಿತು.