ಸಾರಾಂಶ
ಮನೆ ಮನೆಗೆ ಪೊಲೀಸ್ ಎಂಬ ಸರ್ಕಾರದ ವಿನೂತನ ಕಾರ್ಯಕ್ರಮ ವಿಭಿನ್ನ ಹಾಗೂ ಅರ್ಥ ಪೂರ್ಣ ಕಾರ್ಯಕ್ರಮವಾಗಿದೆ. ಇದರ ಯಶಸ್ವಿಗೆ ಎಲ್ಲಾ ಪೊಲೀಸ್ ಅಧಿಕಾರಿ, ಸಿಬ್ಬಂದಿ ಶ್ರಮಿಸಬೇಕು. ಸಾರ್ವಜನಿಕರ ಸಹಕಾರವೂ ಅತ್ಯಗತ್ಯ ಎಂದು ಎಸ್ಪಿ ಡಾ.ಕವಿತಾ ಹೇಳಿದರು.
ಕೊಳ್ಳೇಗಾಲ: ಮನೆ ಮನೆಗೆ ಪೊಲೀಸ್ ಎಂಬ ಸರ್ಕಾರದ ವಿನೂತನ ಕಾರ್ಯಕ್ರಮ ವಿಭಿನ್ನ ಹಾಗೂ ಅರ್ಥ ಪೂರ್ಣ ಕಾರ್ಯಕ್ರಮವಾಗಿದೆ. ಇದರ ಯಶಸ್ವಿಗೆ ಎಲ್ಲಾ ಪೊಲೀಸ್ ಅಧಿಕಾರಿ, ಸಿಬ್ಬಂದಿ ಶ್ರಮಿಸಬೇಕು. ಸಾರ್ವಜನಿಕರ ಸಹಕಾರವೂ ಅತ್ಯಗತ್ಯ ಎಂದು ಎಸ್ಪಿ ಡಾ.ಕವಿತಾ ಹೇಳಿದರು. ಪಟ್ಟಣದ ಭ್ರಮರಾಂಭ ಕಲ್ಯಾಣ ಮಂಟಪದಲ್ಲಿ ಆಯೋಜಿಸಿದ್ದ ಮನೆ ಮನೆಗೆ ಪೊಲೀಸ್ ತರಬೇತಿ ಕಾರ್ಯಾಗಾರದಲ್ಲಿ ಮಾತನಾಡಿ, ಮನೆ ಮನೆಗೆ ಪೊಲೀಸ್ ಜನರೊಂದಿಗೆ ಬೆರೆಯಲು, ಜನಸ್ನೇಹಿ ಪೊಲೀಸ್ ವ್ಯವಸ್ಥೆಗೆ ಪೂರಕ ವಾತಾವರಣ ನಿರ್ಮಾಣ ಮಾಡುವ ನಿಟ್ಟಿನಲ್ಲಿ ಸಹಕಾರಿಯಾಗಲಿದೆ ಎಂದರು.
ಬೀಟ್ ವ್ಯವಸ್ಥೆ ಸುಧಾರಣೆ ಹಾಗೂ ಮನೆಗೂ ಕೂಡ ತೆರಳಿ, ತಳಹಂತದ ಮಾಹಿತಿ ಸಂಗ್ರಹಕ್ಕೆ ಸಹಕಾರಿಯಾಗಲಿದೆ. ಇದರಿಂದಾಗಿ ಸಾರ್ವಜನಿಕರ ಸುರಕ್ಷತೆಗೆ ಸಹಕಾರಿಯಾಗಲಿದೆ, ನಾಗರೀಕರು ಮೋಸದ ಜಾಲದ ಬಗ್ಗೆ ಎಚ್ಚರಿಕೆಯಿಂದಿರಬೇಕು ಎಂದರು.ಅಡಿಷನಲ್ ಎಸ್ಪಿ ಶಶಿಧರ್, ಉಪವಿಭಾಗ ಡಿವೈಎಸ್ಪಿ ಧರ್ಮೇಂದ್ರ, ಸಿಪಿಐ ಶಿವಮಾದಯ್ಯ ಇನ್ನಿತರಿದ್ದರು.