ಭಾರತ ಸೇವಾದಲವು ಶೈಕ್ಷಣಿಕ ಇಲಾಖೆಯ ಅಂಗಸಂಸ್ಥೆಯಾಗಿದೆ. ಭಾರತ ಸೇವಾದಳವು ಉತ್ತಮ ನಾಗರಿಕರನ್ನು ಸೃಷ್ಟಿ ಮಾಡುತ್ತಿದ್ದು, ದೇಶದ ಪ್ರಗತಿಗೆ ಪೂರಕವಾಗಿದೆ.
ಹೊನ್ನಾವರದಲ್ಲಿ ಧ್ವಜ ನೀತಿಸಂಹಿತೆ ಕಾರ್ಯಾಗಾರ
ಕನ್ನಡಪ್ರಭ ವಾರ್ತೆ ಹೊನ್ನಾವರಧ್ವಜವನ್ನು ಹೇಗೆ ವಂದಿಸಬೇಕು ಎಂಬ ಮಾಹಿತಿ ಎಲ್ಲರಿಗೂ ದೊರಕಬೇಕು ಎಂಬ ಉದ್ದೇಶದಿಂದ ಧ್ವಜ ನೀತಿ ಸಂಹಿತೆ ಕಾರ್ಯಾಗಾರ ಆಯೋಜಿಸಲಾಗಿದೆ ಎಂದು ಎಂದು ಭಾರತ ಸೇವಾದಳದ ಕೇಂದ್ರ ಸಮಿತಿ ಸದಸ್ಯ ಎಂ.ಬಿ. ಪೈ ಹೇಳಿದರು.
ಪಟ್ಟಣದ ನಾಮಧಾರಿ ಸಭಾಭವನದಲ್ಲಿ ತಾಲೂಕು ಆಡಳಿತ ಮತ್ತು ಭಾರತ ಸೇವಾದಳ ಸಮಿತಿ ಆಶ್ರಯದಲ್ಲಿ ಶುಕ್ರವಾರ ಆಯೋಜಿಸಿದ್ದ ತಾಲೂಕಿನ ವಿವಿಧ ಇಲಾಖೆಗಳ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಧ್ವಜ ನೀತಿಸಂಹಿತೆ ಕಾರ್ಯಾಗಾರದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.ಭಾರತ ಸೇವಾದಳವು ಶೈಕ್ಷಣಿಕ ಇಲಾಖೆಯ ಅಂಗಸಂಸ್ಥೆಯಾಗಿದೆ. ಭಾರತ ಸೇವಾದಳವು ಉತ್ತಮ ನಾಗರಿಕರನ್ನು ಸೃಷ್ಟಿ ಮಾಡುತ್ತಿದ್ದು, ದೇಶದ ಪ್ರಗತಿಗೆ ಪೂರಕವಾಗಿದೆ ಎಂದರು.
ಕಾರ್ಯಕ್ರಮ ಉದ್ಘಾಟಿಸಿದ ಭಾರತ ಸೇವಾದಳದ ಜಿಲ್ಲಾಧ್ಯಕ್ಷ ಯೋಗೇಶ ರಾಯ್ಕರ್ ಮಾತನಾಡಿ, ಎಲ್ಲ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿ ಧ್ವಜ ನೀತಿ ಸಂಹಿತಿಯ ಅರಿವು ಪಡೆಯಬೇಕು ಎಂದರು. ಅಧ್ಯಕ್ಷತೆ ವಹಿಸಿದ್ದ ಭಾರತ ಸೇವಾದಳದ ತಾಲೂಕು ಅಧ್ಯಕ್ಷ ವಾಮನ ನಾಯ್ಕ ಮಾತನಾಡಿ, ತಾಲೂಕಿನಲ್ಲಿ ಉತ್ತಮ ಕಾರ್ಯಕ್ರಮಗಳನ್ನು ನಡೆಸಲಾಗುತ್ತಿದೆ ಎಂದರು.ತಹಸೀಲ್ದಾರ್ ಪ್ರವೀಣ ಕರಾಂಡೆ, ತಾಪಂ ಕಾರ್ಯನಿರ್ವಹಣಾಧಿಕಾರಿ ಪುಟ್ಟೇಗೌಡ, ಕ್ಷೇತ್ರ ಶಿಕ್ಷಣಾಧಿಕಾರಿ ಬಿ.ಎಸ್. ಭಜಂತ್ರಿ, ಬಿಆರ್‌ಸಿ ಸಮನ್ವಯಾಧಿಕಾರಿ ಜಯಶ್ರೀ ನಾಯ್ಕ, ಗ್ರಾಪಂ ಮಾಜಿ ಅಧ್ಯಕ್ಷ ಐ.ವಿ. ನಾಯ್ಕ, ಗ್ಯಾರಂಟಿ ಸಮಿತಿ ಅಧ್ಯಕ್ಷ ಅಣ್ಣಪ್ಪ ನಾಯ್ಕ, ಹೆಸ್ಕಾಂ ಎಇಇ ರಾಮಕೃಷ್ಣ ಭಟ್ಟ, ಎಂ.ಜಿ. ನಾಯ್ಕ ಮಾತನಾಡಿದರು.
ಭಾರತ ಸೇವಾದಳದ ಜಿಲ್ಲಾ ಸದಸ್ಯೆ ಕಲ್ಪನಾ ಹೆಗಡೆ, ಸಿಡಿಪಿಒ ವನಿತಾ ದೇಶಭಂಡಾರಿ, ಕೆ.ಎಂ. ಹೆಗಡೆ, ಅರುಣ ಫರ್ನಾಂಡಿಸ್, ಲಕ್ಷ್ಮೀ ದಳವಾಯಿ ಉಪಸ್ಥಿತರಿದ್ದರು. ಭಾರತ ಸೇವಾದಳದ ತಾಲೂಕು ಸಂಚಾಲಕ ಬಾಬು ನಾಯ್ಕ ಪ್ರಾಸ್ತಾವಿಕವಾಗಿ ಮಾತನಾಡಿದರು. ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಸುಧೀಶ ನಾಯ್ಕ ಸ್ವಾಗತಿಸಿದರು. ವಿ.ಜಿ. ಭಟ್ಟ ವಂದಿಸಿದರು. ಉದಯ ನಾಯ್ಕ ಕಾರ್ಯಕ್ರಮ ನಿರ್ವಹಿಸಿದರು.