ಸಾರಾಂಶ
ಮಾಜಿ ಸಿಎಂ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಅವರು ನೀರಾವರಿ ಕ್ಷೇತ್ರದಲ್ಲಿ ಸಾಕಷ್ಟು ಕೆಲಸ ಮಾಡಿ ಇತಿಹಾಸ ಸೃಷ್ಟಿಸಿದ್ದಾರೆ. ಬರದ ನಾಡಾಗಿದ್ದ ಶಿಗ್ಗಾಂವಿ ಸವಣೂರು ಭಾಗದಲ್ಲಿ ಹನಿ ನೀರಾವರಿ ಕಲ್ಪಿಸುವ ಮೂಲಕ ಆಧುನಿಕ ಭಗೀರಥ ಎನಿಸಿದ್ದಾರೆ ಎಂದು ಹುಕ್ಕೇರಿಮಠದ ಸದಾಶಿವ ಸ್ವಾಮೀಜಿ ಹೇಳಿದರು.
ಹಾವೇರಿ: ಮಾಜಿ ಸಿಎಂ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಅವರು ನೀರಾವರಿ ಕ್ಷೇತ್ರದಲ್ಲಿ ಸಾಕಷ್ಟು ಕೆಲಸ ಮಾಡಿ ಇತಿಹಾಸ ಸೃಷ್ಟಿಸಿದ್ದಾರೆ. ಬರದ ನಾಡಾಗಿದ್ದ ಶಿಗ್ಗಾಂವಿ ಸವಣೂರು ಭಾಗದಲ್ಲಿ ಹನಿ ನೀರಾವರಿ ಕಲ್ಪಿಸುವ ಮೂಲಕ ಆಧುನಿಕ ಭಗೀರಥ ಎನಿಸಿದ್ದಾರೆ ಎಂದು ಹುಕ್ಕೇರಿಮಠದ ಸದಾಶಿವ ಸ್ವಾಮೀಜಿ ಹೇಳಿದರು.
ನಗರದ ಎಂ.ಜಿ. ವೃತ್ತದಲ್ಲಿ ಬಸವರಾಜ ಬೊಮ್ಮಾಯಿ ಅಭಿಮಾನಿ ಬಳಗದಿಂದ ಮಂಗಳವಾರ ಆಯೋಜಿಸಿದ್ದ ಸಂಸದ ಬಸವರಾಜ ಬೊಮ್ಮಾಯಿ ಅವರ 65ನೇ ಜನ್ಮ ದಿನದ ಪ್ರಯುಕ್ತ ಜಂಗಮ ವಟುಗಳಿಗೆ ಸನ್ಮಾನ ಸಮಾರಂಭ ಉದ್ಘಾಟಿಸಿ ಹಾಗೂ ನೂರಕ್ಕೂ ಹೆಚ್ಚು ವಟುಗಳನ್ನು ಸನ್ಮಾನಿಸಿ ಅವರು ಮಾತನಾಡಿದರು.ಹೊಸಮಠದ ಬಸವ ಶಾಂತಲಿಂಗ ಸ್ವಾಮೀಜಿ ಯುವ ಮುಖಂಡ ಭರತ್ ಬೊಮ್ಮಾಯಿ ಮಾತನಾಡಿದರು. ಇದಕ್ಕೂ ಮುನ್ನ ಇಜಾರಿಲಕಮಾಪೂರದಲ್ಲಿರುವ ಜ್ಯೋತಿ ಬುದ್ಧಿಮಾಂದ್ಯ ಮಕ್ಕಳ ಶಾಲೆಯ ಮಕ್ಕಳಿಗೆ ಸಮವಸ್ತ್ರ ವಿತರಿಸಲಾಯಿತು. ನಗರಸಭೆ ಅಧ್ಯಕ್ಷೆ ಶಶಿಕಲಾ ಮಾಳಗಿ, ಮಾಜಿ ಶಾಸಕ ವಿರೂಪಾಕ್ಷಪ್ಪ ಬಳ್ಳಾರಿ, ಡಿ.ಎಸ್. ಮಾಳಗಿ, ಸುರೇಶ ಹೊಸಮನಿ, ನಂಜುಂಡೇಶ ಕಳ್ಳೇರ, ಮುರಿಗೆಪ್ಪ ಶೆಟ್ಟರ್, ಪರಮೇಶಪ್ಪ ಮೇಗಳಮನಿ, ರಾಮು ಮಾಳಗಿ, ಜಗದೀಶ ಮಲಗೋಡ, ನವೀನ ಸವಣೂರ, ಗಿರೀಶ ತುಪ್ಪದ, ಪ್ರಭು ಹಿಟ್ನಳ್ಳಿ ಇತರರು ಇದ್ದರು.