ಸಾರಾಂಶ
ಕ್ರಿಯೇಟಿವ್ ಪದವಿ ಪೂರ್ವ ಕಾಲೇಜಿನ ಎನ್.ಎಸ್.ಎಸ್ ಘಟಕದ ವಿದ್ಯಾರ್ಥಿಗಳು ಹಾಗೂ ಸ್ವಯಂಸೇವಕರು ಪರಿಸರ ಸಂರಕ್ಷಣೆ ಮತ್ತು ಸಾರ್ವಜನಿಕ ಸ್ಥಳಗಳ ಸ್ವಚ್ಛತೆಯ ಸಂದೇಶವನ್ನು ಸಾರುವ ಉದ್ದೇಶದಿಂದ ಕಾರ್ಕಳದ ಸುತ್ತಮುತ್ತಲಿನ ಪ್ರೇಕ್ಷಣೀಯ ಸ್ಥಳಗಳಲ್ಲಿ ಸ್ವಚ್ಛತಾ ಕಾರ್ಯಕ್ರಮ ಹಮ್ಮಿಕೊಂಡರು.
ಕನ್ನಡಪ್ರಭ ವಾರ್ತೆ ಕಾರ್ಕಳ
ಇಲ್ಲಿನ ಕ್ರಿಯೇಟಿವ್ ಪದವಿ ಪೂರ್ವ ಕಾಲೇಜಿನ ಎನ್.ಎಸ್.ಎಸ್ ಘಟಕದ ವಿದ್ಯಾರ್ಥಿಗಳು ಹಾಗೂ ಸ್ವಯಂಸೇವಕರು ಪರಿಸರ ಸಂರಕ್ಷಣೆ ಮತ್ತು ಸಾರ್ವಜನಿಕ ಸ್ಥಳಗಳ ಸ್ವಚ್ಛತೆಯ ಸಂದೇಶವನ್ನು ಸಾರುವ ಉದ್ದೇಶದಿಂದ ಕಾರ್ಕಳದ ಸುತ್ತಮುತ್ತಲಿನ ಪ್ರೇಕ್ಷಣೀಯ ಸ್ಥಳಗಳಲ್ಲಿ ಸ್ವಚ್ಛತಾ ಕಾರ್ಯಕ್ರಮ ಹಮ್ಮಿಕೊಂಡರು.ಪ್ಲಾಸ್ಟಿಕ್ ಕಸದ ಸಂಗ್ರಹ, ಕಸ ವಿಂಗಡಣೆ, ಪರಿಸರ ಶುದ್ಧೀಕರಣ ಮತ್ತು ಸಾರ್ವಜನಿಕರಲ್ಲಿ ಸ್ವಚ್ಛತೆಯ ಜಾಗೃತಿ ಮೂಡಿಸುವ ಅಭಿಯಾನ ನಡೆಯಿತು.ಸ್ವಚ್ಛ ಕಾರ್ಕಳ ನಗರದ ಸ್ವಚ್ಛತಾ ರಾಯಭಾರಿ ಫೆಲಿಕ್ಸ್ ಜೋಸೆಫ್ ವಾಜ್ ಉದ್ಘಾಟಿಸಿದರು. ಪುರಸಭಾ ಅಧ್ಯಕ್ಷ ಯೋಗೀಶ್ ದೇವಾಡಿಗ ಮಾತನಾಡಿ, ಸ್ವಚ್ಛತೆ ದೈಹಿಕ ಶುದ್ಧತೆಗೆ ಸೀಮಿತವಲ್ಲ, ಅದು ಮನಸ್ಸಿನ ಮತ್ತು ಸಂಸ್ಕೃತಿಯ ಪ್ರತೀಕ ಎಂದರು.
ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನದ ಸಹ ಸಂಸ್ಥಾಪಕ ಡಾ. ಬಿ. ಗಣನಾಥ ಶೆಟ್ಟಿ, ಸ್ವಚ್ಛತೆ ಜೀವನಶೈಲಿಯಾಗಿ ಬೆಳೆದುಕೊಳ್ಳಬೇಕು. ಯುವಕರು ಇಂತಹ ಸಾಮಾಜಿಕ ಜವಾಬ್ದಾರಿಗಳಲ್ಲಿ ತೊಡಗಿದಾಗ ಸಮಾಜದ ಬೆಳವಣಿಗೆ ಖಚಿತ ಎಂದು ಅಭಿಪ್ರಾಯಪಟ್ಟರು.ಅಶ್ವತ್ ಎಸ್.ಎಲ್., ಎನ್.ಎಸ್.ಎಸ್ ಶಿಬಿರಾಧಿಕಾರಿ ಉಮೇಶ್, ಉಪನ್ಯಾಸಕ-ಉಪನ್ಯಾಸಕೇತರ ವರ್ಗದವರು ಹಾಗೂ 150ಕ್ಕೂ ಹೆಚ್ಚು ವಿದ್ಯಾರ್ಥಿಗಳು ಪಾಲ್ಗೊಂಡರು.
ಜೀವಶಾಸ್ತ್ರ ಉಪನ್ಯಾಸಕ ಲೋಹಿತ್ ಎಸ್.ಕೆ. ನಿರೂಪಿಸಿದರು. ಪುರಸಭೆಯ ಸಹಕಾರದೊಂದಿಗೆ ಕಾರ್ಯಕ್ರಮ ಯಶಸ್ವಿಯಾಗಿ ನೆರವೇರಿತು.