ಕ್ರಿಕೆಟ್ ಪಂದ್ಯಾವಳಿ: ಗೆದ್ದು ಬೀಗಿದ ಆಯುರ್ವೇದ ಕಾಲೇಜು ತಂಡ
Author : KannadaprabhaNewsNetwork
Published : Apr 27 2026, 02:45 AM IST
ಕ್ರಿಕೆಟ್ ಪಂದ್ಯಾವಳಿಯಲ್ಲಿ ಗೆದ್ದು ಬೀಗಿದ ಬಿ.ಎಲ್.ಡಿ.ಇ ಸಂಸ್ಥೆಯ ಎ.ವಿ.ಎಸ್. ಆಯುರ್ವೇದ ಕಾಲೇಜು ತಂಡ | Kannada Prabha
Image Credit: KP
ಕನ್ನಡಪ್ರಭ ವಾರ್ತೆ ವಿಜಯಪುರ ಬಿ.ಎಲ್.ಡಿ.ಇ ಸಂಸ್ಥೆಯ ಎ.ಎಸ್.ಪಾಟೀಲ ಕಾಮರ್ಸ್ ಕಾಲೇಜಿನಲ್ಲಿ ನಡೆದ ಬಿ.ಎಲ್.ಡಿ.ಇ.ಎ ಕ್ರಿಕೆಟ್ ಕಪ್-2026 ಅಂತರ ಪದವಿ ಮಹಾವಿದ್ಯಾಲಯ ಪಂದ್ಯಾವಳಿಯನ್ನು ಬಿ.ಎಲ್.ಡಿ.ಇ ಸಂಸ್ಥೆಯ ಎ.ವಿ.ಎಸ್. ಆಯುರ್ವೇದ ಕಾಲೇಜು, ಆಸ್ಪತ್ರೆ ಮತ್ತು ಸಂಶೋಧನ ಕೇಂದ್ರ ತಂಡ ಗೆದ್ದುಕೊಂಡಿದೆ.
ಕನ್ನಡಪ್ರಭ ವಾರ್ತೆ ವಿಜಯಪುರ
ಬಿ.ಎಲ್.ಡಿ.ಇ ಸಂಸ್ಥೆಯ ಎ.ಎಸ್.ಪಾಟೀಲ ಕಾಮರ್ಸ್ ಕಾಲೇಜಿನಲ್ಲಿ ನಡೆದ ಬಿ.ಎಲ್.ಡಿ.ಇ.ಎ ಕ್ರಿಕೆಟ್ ಕಪ್-2026 ಅಂತರ ಪದವಿ ಮಹಾವಿದ್ಯಾಲಯ ಪಂದ್ಯಾವಳಿಯನ್ನು ಬಿ.ಎಲ್.ಡಿ.ಇ ಸಂಸ್ಥೆಯ ಎ.ವಿ.ಎಸ್. ಆಯುರ್ವೇದ ಕಾಲೇಜು, ಆಸ್ಪತ್ರೆ ಮತ್ತು ಸಂಶೋಧನ ಕೇಂದ್ರ ತಂಡ ಗೆದ್ದುಕೊಂಡಿದೆ.
ಏಳು ದಿನಗಳ ಕಾಲ ನಡೆದ ಈ ಕ್ರೀಡಾಕೂಟದಲ್ಲಿ ಒಟ್ಟು 14 ನಾನಾ ಕಾಲೇಜುಗಳ ತಂಡಗಳು ಭಾಗವಹಿಸಿದ್ದವು. ಫೈನಲ್ ಪಂದ್ಯದಲ್ಲಿ ಆಯುರ್ವೇದ ಕಾಲೇಜು ತಂಡ ಎಸ್.ಬಿ. ಆರ್ಟ್ಸ್ ಮತ್ತು ಮತ್ತು ಕೆ.ಸಿ.ಪಿ ಸೈಲೇನ್ಸ್ ಕಾಜು ತಂಡವನ್ನು 36 ರನ್ ಗಳಿಂದ ಸೋಲಿಸಿತು. ಅಲ್ಲದೇ, ಟ್ರೋಫಿಯ ಜೊತೆಗೆ ರೂ. 51,000 ನಗದು ಬಹುಮಾನ ಪಡೆದುಕೊಂಡಿತು. ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಮತ್ತು ಕೋಚ್ ಈರಪ್ಪ ಇಕ್ಕಳಕಿ ಮಾರ್ಗದರ್ಶನದಲ್ಲಿ ತಂಡವು ಸಾಧಿಸಿರುವುದಕ್ಕೆ ಕಾಲೇಜಿನ ಪ್ರಾಚಾರ್ಯ ಡಾ.ಅಶೋಕ ಪಾಟೀಲ, ಆಸ್ಪತ್ರೆಯ ಆಡಳಿತಾಧಿಕಾರಿ ಡಾ.ಸಂಜಯ ಕಡ್ಲಿಮಟ್ಟಿ, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಸಂತಸ ವ್ಯಕ್ತಪಡಿಸಿ, ಅಭಿನಂದನೆ ಸಲ್ಲಿಸಿದ್ದಾರೆ.
Latest Videos
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.