ಮಂಗಳೂರು: ಭಾರತೀಯ ವೈದ್ಯಕೀಯ ಸಂಘ ಮಂಗಳೂರು ಶಾಖೆ ಹಾಗೂ ವೈದ್ಯಕೀಯ ತಜ್ಞರ ಸಂಘ ಮಂಗಳೂರು ಶಾಖೆಯ ಆಶ್ರಯದಲ್ಲಿ ‘ಐಎಂಎ-ಎಎಂಸಿ ಪ್ರೀಮಿಯರ್ ಲೀಗ್- ೨೦೨೬’ ವಾರ್ಷಿಕ ಕ್ರಿಕೆಟ್ ಪಂದ್ಯಾಟ ಜನವರಿ ೩ರಂದು ನಗರದ ಸಹ್ಯಾದ್ರಿ ಎಂಜಿನಿಯರಿಂಗ್ ಕಾಲೇಜು ಮೈದಾನದಲ್ಲಿ ನಡೆಸಲಾಗಿದೆ.

ಮಂಗಳೂರು: ಭಾರತೀಯ ವೈದ್ಯಕೀಯ ಸಂಘ ಮಂಗಳೂರು ಶಾಖೆ ಹಾಗೂ ವೈದ್ಯಕೀಯ ತಜ್ಞರ ಸಂಘ ಮಂಗಳೂರು ಶಾಖೆಯ ಆಶ್ರಯದಲ್ಲಿ ‘ಐಎಂಎ-ಎಎಂಸಿ ಪ್ರೀಮಿಯರ್ ಲೀಗ್- ೨೦೨೬’ ವಾರ್ಷಿಕ ಕ್ರಿಕೆಟ್ ಪಂದ್ಯಾಟ ಜನವರಿ ೩ರಂದು ನಗರದ ಸಹ್ಯಾದ್ರಿ ಎಂಜಿನಿಯರಿಂಗ್ ಕಾಲೇಜು ಮೈದಾನದಲ್ಲಿ ನಡೆಸಲಾಗಿದೆ. ಮಾಜಿ ಅಂತಾರಾಷ್ಟ್ರೀಯ ಕ್ರಿಕೆಟ್ ಪಟು ಹಾಗೂ ಅಂತಾರಾಷ್ಟ್ರೀಯ ಕ್ರಿಕೆಟ್ ಸಮಿತಿ ಆಯೋಜಿಸುವ ಪಂದ್ಯಾಟಗಳ ತೀರ್ಪುಗಾರರಾದ ಜಾವಗಲ್ ಶ್ರೀನಾಥ್ ಅವರು ಈ ಪಂದ್ಯಾವಳಿಯನ್ನು ಸಂಜೆ ೪ ಗಂಟೆಗೆ ಉದ್ಘಾಟಿಸಲಿದ್ದಾರೆ.

ನಿಟ್ಟೆ ವಿಶ್ವವಿದ್ಯಾನಿಲಯದ ಪ್ರೊ ಚಾನ್ಸಲರ್ ಹಾಗೂ ತೇಜಸ್ವಿನಿ ಆಸ್ಪತ್ರೆಯ ಆಡಳಿತ ನಿರ್ದೇಶಕ ಡಾ. ಎಂ. ಶಾಂತಾರಾಮ ಶೆಟ್ಟಿ, ಭಾರತೀಯ ವೈದ್ಯಕೀಯ ಸಂಘದ ರಾಜ್ಯ ಶಾಖೆಯ ರಾಜ್ಯಾಧ್ಯಕ್ಷ ಡಾ. ಟಿ. ಎ. ವೀರಭದ್ರಯ್ಯ, ವಿಧಾನ ಪರಿಷತ್ ಸದಸ್ಯರು ಮತ್ತು ಸಹ್ಯಾದ್ರಿ ಎಂಜಿನಿಯರಿಂಗ್ ಕಾಲೇಜಿನ ಆಡಳಿತ ನಿರ್ದೇಶಕದ ಡಾ. ಮಂಜುನಾಥ್ ಭಂಡಾರಿ ಗೌರವ ಅತಿಥಿಯಾಗಿ ಭಾಗವಹಿಸಲಿದ್ದಾರೆ.ಭಾರತೀಯ ವೈದ್ಯಕೀಯ ಸಂಘ ಮಂಗಳೂರು ಶಾಖೆಯ ಅಧ್ಯಕ್ಷ ಡಾ. ಸದಾನಂದ ಪೂಜಾರಿ, ಕಾರ್ಯದರ್ಶಿ ಡಾ. ಪ್ರಕಾಶ್ ಹರಿಶ್ಚಂದ್ರ, ಕೋಶಾಧಿಕಾರಿ ಡಾ. ಜ್ಯೂಲಿಯನ್ ಸಲ್ಡಾನ ಹಾಗೂ ವೈದ್ಯಕೀಯ ತಜ್ಞರ ಸಂಘದ ಮಂಗಳೂರು ಶಾಖೆ ಅಧ್ಯಕ್ಷ ಡಾ. ಆನಂದ ಬಂಗೇರ, ಕಾರ್ಯದರ್ಶಿ ಡಾ. ಉಲ್ಲಾಸ ಶೆಟ್ಟಿ, ಕೋಶಾಧಿಕಾರಿ ಡಾ. ಗೋವಿಂದರಾಜ್ ಭಟ್ ಇದ್ದರು.ಮನರಂಜನಾ ಕಾರ್ಯಕ್ರಮದ ಅಂಗವಾಗಿ ಸಂಗೀತ, ಗಾಯನ ಮತ್ತು ಹುಲಿವೇಶ ಕುಣಿತವನ್ನು ಆಯೋಜಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.