ಸಾರಾಂಶ
ಸೂರ್ಯಕುಮಾರ್ ಯಾದವ್ ದಂಪತಿಗಳು ಶ್ರೀ ಸಂಪುಟ ನರಸಿಂಹ ಸ್ವಾಮಿ ಸುಬ್ರಹ್ಮಣ್ಯ ಮಠಕ್ಕೆ ಭೇಟಿ ನೀಡಿ ಶ್ರೀ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿಗಳ ಆಶೀರ್ವಾದ ಪಡೆದರು.
ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಮಂಗಳವಾರ ಭಾರತ ಕ್ರಿಕೆಟ್ ತಂಡದ ಸೂರ್ಯ ಕುಮಾರ್ ಯಾದವ್ ದಂಪತಿ ಸಮೇತ ಭೇಟಿ ನೀಡಿದರು.
ಕ್ಷೇತ್ರಕ್ಕೆ ಭೇಟಿ ನೀಡಿದ ಯಾದವ್ ದಂಪತಿ ಮುಂಜಾನೆ ಸುಬ್ರಹ್ಮಣ್ಯ ದೇವರ ದರ್ಶನ ಮಾಡಿದರು. ಬಳಿಕ ಶ್ರೀ ಸಂಪುಟ ನರಸಿಂಹ ಸ್ವಾಮಿ ಸುಬ್ರಹ್ಮಣ್ಯ ಮಠದಲ್ಲಿ ಆಶ್ಲೇಷ ಬಲಿ ಹಾಗೂ ನಾಗಾಪ್ರತಿಷ್ಠೆ ಪೂಜೆ ನೆರವೇರಿಸಿದರು. ನಂತರ ಸುಬ್ರಹ್ಮಣ್ಯ ದೇವರಿಗೆ ಮುಂಜಾನೆಯ ಮಹಾಭಿಷೇಕ ಸೇವೆ ಸಲ್ಲಿಸಿ ಮಹಾಪೂಜೆಯಲ್ಲಿ ಪಾಲ್ಗೊಂಡರು. ಪೂಜೆಯ ಬಳಿಕ ಅರ್ಚಕರು ಶಾಲು ಹೊದಿಸಿ ದೇವರ ಪ್ರಸಾದ ನೀಡಿ ಆಶೀರ್ವದಿಸಿದರು.ಕ್ಷೇತ್ರಕ್ಕೆ ಆಗಮಿಸಿದ ಯಾದವ್ ದಂಪತಿಯನ್ನು ದೇವಳದ ಕಾರ್ಯನಿರ್ವಾಹಣಾಧಿಕಾರಿ ಅರವಿಂದ ಅಯ್ಯಪ್ಪ ಸುತಗುಂಡಿ ದೇವಳದ ವತಿಯಿಂದ ಸನ್ಮಾನಿಸಿ ಗೌರವಿಸಿದರು. ಸೂರ್ಯಕುಮಾರ್ ಯಾದವ್ ದಂಪತಿ ಸೋಮವಾರ ರಾತ್ರಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಆಗಮಿಸಿ ಖಾಸಗಿ ವಸತಿ ಗೃಹದಲ್ಲಿ ವಾಸ್ತವ್ಯ ಹೂಡಿದ್ದರು. ಈ ಸಂದರ್ಭದಲ್ಲಿ ದೇವಳದ ಸಹಾಯಕ ಕಾರ್ಯನಿರ್ವಾಹಣಾಹಾಧಿಕಾರಿ ಯೇಸುರಾಜ್, ಮಾಸ್ಟರ್ ಪ್ಲಾನ್ ಸದಸ್ಯ ಲೋಲಾಕ್ಷ ಕೈಕಂಬ, ಶಿಷ್ಟಾಚಾರ ವಿಭಾಗದ ಪ್ರಮೋದ್ ಕುಮಾರ್, ನವೀನ್, ಜಯರಾಮ್ ರಾವ್ ಮೊದಲದವರು ಉಪಸ್ಥಿತರಿದ್ದರು.