ಈ ರಥವು ಹಳ್ಳಿ ಹಳ್ಳಿಗಳಲ್ಲಿ ಸಂಚರಿಸಿ ಕಾನೂನಿನ ಜಾಗೃತಿ ಮೂಡಿಸುವುದರ ಜತೆಗೆ ಕಾನೂನು ನೆರವು ಹಾಗೂ ಜನತಾ ನ್ಯಾಯಾಲಯಗಳ ಮೂಲಕ ಪ್ರಕರಣ ಇತ್ಯರ್ಥಪಡಿಸುತ್ತಿದೆ.

ಡಂಬಳ: ಕಾನೂನಿನ ಅರಿವಿಲ್ಲದ ಪರಿಣಾಮ ಕೆಲವರು ಶೋಷಣೆಗೆ ಒಳಗಾಗುತ್ತಿದ್ದಾರೆ. ಹೀಗಾಗಿ ಶೋಷಣೆಮುಕ್ತ ಸಮಾಜ ನಿರ್ಮಿಸಲು ಕಾನೂನು ಸಾಕ್ಷರತಾ ರಥ ಸಂಚರಿಸುತ್ತಿದ್ದು, ಪ್ರತಿಯೊಬ್ಬರಿಗೆ ಕಾನೂನಿನ ಅರಿವು ಮೂಡಿಸುತ್ತಿದೆ ಎಂದು ಪ್ರಧಾನ ಜಿಲ್ಲಾ ಸತ್ರ ನ್ಯಾಯಾಧೀಶರು, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಅಧ್ಯಕ್ಷರಾದ ನಾಗವೇಣಿ ತಿಳಿಸಿದರು.

ಡಂಬಳ ಗ್ರಾಮದಲ್ಲಿ ಮಂಗಳವಾರ ನಾಡ ಕಾರ್ಯಾಲಯದ ಆವರಣದಲ್ಲಿ ಗ್ರಾಮದ ಆರಾಧ್ಯದೈವ ತೋಂಟದಾರ್ಯ ಮದರ್ಧನಾರೀಶ್ವರ ಜಾತ್ರಾ ಮಹೋತ್ಸವದ ನಿಮಿತ್ತ ಕಾನೂನು ಸಾಕ್ಷರತಾ ರಥ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಈ ರಥವು ಹಳ್ಳಿ ಹಳ್ಳಿಗಳಲ್ಲಿ ಸಂಚರಿಸಿ ಕಾನೂನಿನ ಜಾಗೃತಿ ಮೂಡಿಸುವುದರ ಜತೆಗೆ ಕಾನೂನು ನೆರವು ಹಾಗೂ ಜನತಾ ನ್ಯಾಯಾಲಯಗಳ ಮೂಲಕ ಪ್ರಕರಣ ಇತ್ಯರ್ಥಪಡಿಸುತ್ತಿದೆ ಎಂದರು.

ಕಾನೂನು ಸೇವಾ ಪ್ರಾಧಿಕಾರದ ಮೂಲಕ ದೇಶದ ಶೇ. 80ರಷ್ಟು ಜನತೆ ಉಚಿತ ಕಾನೂನು ನೆರವು ಪಡೆಯಬಹುದಾಗಿದ್ದು, ಈ ಕುರಿತು ಸೂಕ್ತ ಅರಿವು ಇಲ್ಲದ ಕಾರಣ ಸಾರ್ವಜನಿಕರು ಕಾನೂನು ತೊಡಕುಗಳಿಗೆ ಸಿಲುಕಿ ತೊಂದರೆ ಪಡುತ್ತಿದ್ದಾರೆ. ಈ ಬಗ್ಗೆ ಕಾನೂನು ಸಾಕ್ಷರತಾ ರಥ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರಗಳ ಮೂಲಕ ಹೆಚ್ಚಿನ ಜಾಗೃತಿ ಮೂಡಿಸಲಾಗುತ್ತಿದೆ ಎಂದರು.

ಡಾ. ತೋಂಟದ ಸಿದ್ದರಾಮ ಸ್ವಾಮೀಜಿ ಸಾನಿಧ್ಯ ವಹಿಸಿ ಮಾತನಾಡಿ, ಜಾತ್ರಾ ಮಹೋತ್ಸವದಲ್ಲಿ 4 ದಿನಗಳ ಕಾಲ ಕಾನೂನಿನ ಕುರಿತು ತಿಳಿವಳಿಕೆ ನೀಡುವುದಲ್ಲದೆ ಸರ್ಕಾರಿ ಸೌಲಭ್ಯ ವಂಚಿತರ ಸಮಸ್ಯೆಗಳಿಗೆ ಸ್ಪಂದಿಸಿ ನ್ಯಾಯ ನೀಡುತ್ತಿರುವುದು ಪ್ರಶಂಸನೀಯ ಎಂದರು.

ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಕಾರ್ಯದರ್ಶಿ ಸಿ.ಎಸ್. ಶಿವನಗೌಡ್ರ ಮಾತನಾಡಿ, ಕಾನೂನು ಸೇವಾ ಪ್ರಾಧಿಕಾರವು ಜನಸಾಮಾನ್ಯರಿಗೆ ಕಾನೂನು ಕುರಿತು ಹೆಚ್ಚಿನ ತಿಳಿವಳಿಕೆ ನೀಡಬೇಕು. ಕಾನೂನು ತೊಡಕುಗಳಿಗೆ ಸಿಲುಕಿದವರಿಗೆ ಉಚಿತ ನೆರವು ನೀಡಬೇಕು ಎಂದರು.

ಕಾರ್ಯಕ್ರಮದಲ್ಲಿ ಮುಂಡರಗಿ ಜೆಎಂಎಫ್‌ಸಿ ನ್ಯಾಯಧೀಶೆ ಜ್ಯೋತಿ ಬ ಕಾಗಿನಕನ, ಜಿಪಂ ಉಪಕಾರ್ಯದರ್ಶಿ ಸಿ.ಆರ್. ಮುಂಡರಗಿ, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಆರ್.ಜಿ. ಕಲ್ಲೂರ, ಮುಖ್ಯ ಕಾನೂನು ನೆರವು ಅಭಿರಕ್ಷಕ ಎಸ್.ವಿ. ಗ್ರಾಮಪೂರೋಹಿತ, ಪಿಡಿಒ ಪಾರ್ವತಿ ಹೊಂಬಳ, ಡಿವೈಎಸ್ಪಿ ಪ್ರಭುಗೌಡ ಕಿರದಳ್ಳಿ, ಉಪತಹಸೀಲ್ದಾರ್ ಎಸ್.ಎಸ್. ಬಿಚಾಲಿ, ಸಿಪಿಐ ಯಶವಂತ ಬಿಸನಳ್ಳಿ, ಮಹಿಳಾ ಮಕ್ಕಳ ಉಪನಿರ್ದೇಶಕಿ ಪದ್ಮಾವತಿ ಜಿ., ಗ್ರಾಮ ಪಂಚಾಯಿತಿ ಅಧ್ಯಕ್ಷೆ ಶಿವಲೀಲಾ ದೇವಪ್ಪ ಬಂಡಿಹಾಳ, ಉಪಾಧ್ಯಕ್ಷೆ ಲಕ್ಷ್ಮವ್ವ ಕಾಶಭೋವಿ, ಜಾತ್ರಾ ಸಮಿತಿ ಅಧ್ಯಕ್ಷ ಯಲ್ಲಪ್ಪ ದಂಡಿನ, ಉರೂಸ್ ಕಮಿಟಿ ಅಧ್ಯಕ್ಷ ಅಲ್ಲಿಸಾಬ ಮೂಲಿಮನಿ, ನ್ಯಾಯವಾದಿ ಗುರುರಾಜ ಗೌರಿ, ಪಿಡಿಒ ಪಾರ್ವತಿ ಹೊಂಬಳ, ಕಂದಾಯ ಅಧಿಕಾರಿ ಪ್ರಭು ಬಾಗಲಿ, ಉಪತಹಸೀಲ್ದಾರ್ ಎಸ್.ಎಸ್. ಬಿಚಾಲಿ ನಿರೂಪಿಸಿ, ಸ್ವಾಗತಿಸಿದರು. ಗವಿಸಿದ್ದಪ್ಪ ಮೆಟ್ಟಿನ ವಂದಿಸಿದರು.