ಸಾರಾಂಶ
ಕನ್ನಡಪ್ರಭ ವಾರ್ತೆ ವಿಜಯಪುರವ್ಯಕ್ತಿಯೋರ್ವನನ್ನು ಬರ್ಬರವಾಗಿ ಹತ್ಯೆ ಮಾಡಿ ಕಾರಿನಲ್ಲಿ ಬಿಟ್ಟು ದುಷ್ಕರ್ಮಿಗಳು ಪರಾರಿಯಾಗಿರುವ ಘಟನೆ ನಗರದ ಜಿಲ್ಲಾಸ್ಪತ್ರೆಯ ಆವರಣದಲ್ಲಿ ಮಂಗಳವಾರ ನಡೆದಿದೆ. ಬೆಳಗಾವಿ ಜಿಲ್ಲೆಯ ಐಗಳಿ ಪೊಲೀಸ್ ಸ್ಟೇಷನ್ ವ್ಯಾಪ್ತಿಯ ಕೋಹಳ್ಳಿ ಗ್ರಾಮದ ಸಂಗಪ್ಪ ರಾಮು ದೇವಕತೆ (58) ಹತ್ಯೆಯಾದವರು. ಮಹಾರಾಷ್ಟ್ರದ ಪರವಾನಗಿ ಹೊಂದಿರುವ ಕಾರಿನಲ್ಲಿ ಸಂಗಪ್ಪನ ಶವ ಪತ್ತೆಯಾಗಿದೆ.
ಕನ್ನಡಪ್ರಭ ವಾರ್ತೆ ವಿಜಯಪುರ
ವ್ಯಕ್ತಿಯೋರ್ವನನ್ನು ಬರ್ಬರವಾಗಿ ಹತ್ಯೆ ಮಾಡಿ ಕಾರಿನಲ್ಲಿ ಬಿಟ್ಟು ದುಷ್ಕರ್ಮಿಗಳು ಪರಾರಿಯಾಗಿರುವ ಘಟನೆ ನಗರದ ಜಿಲ್ಲಾಸ್ಪತ್ರೆಯ ಆವರಣದಲ್ಲಿ ಮಂಗಳವಾರ ನಡೆದಿದೆ. ಬೆಳಗಾವಿ ಜಿಲ್ಲೆಯ ಐಗಳಿ ಪೊಲೀಸ್ ಸ್ಟೇಷನ್ ವ್ಯಾಪ್ತಿಯ ಕೋಹಳ್ಳಿ ಗ್ರಾಮದ ಸಂಗಪ್ಪ ರಾಮು ದೇವಕತೆ (58) ಹತ್ಯೆಯಾದವರು. ಮಹಾರಾಷ್ಟ್ರದ ಪರವಾನಗಿ ಹೊಂದಿರುವ ಕಾರಿನಲ್ಲಿ ಸಂಗಪ್ಪನ ಶವ ಪತ್ತೆಯಾಗಿದೆ. ಸೋಮವಾರ ರಾತ್ರಿ ಹತ್ಯೆ ನಡೆದಿರಬಹುದು ಎಂದು ಅಂದಾಜಿಸಲಾಗಿದ್ದು, ಮಂಗಳವಾರ ಬೆಳಗ್ಗೆ ಪೊಲೀಸರಿಗೆ ವಿಷಯ ತಿಳಿದಿದೆ. ಬಳಿಕ ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಬಗ್ಗೆ ಗಾಂಧಿಚೌಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.