ಸಾರಾಂಶ
ಬೆಳೆ ಸಮೀಕ್ಷೆ ದತ್ತಾಂಶ, ಪ್ರೂಟ್ ಐಡಿ ಹೊಂದಿರುವ ರೈತರಿಗೆ ಮತ್ತು ಬೆಳೆಹಾನಿ ಅಂತಿಮ ಜಂಟಿ ಸಮೀಕ್ಷೆ ವರದಿಯ ಆಧಾರದ ಮೇಲೆ ಭೂಮಿ ಪರಿಹಾರ ತಂತ್ರಾಂಶದ ಮೂಲಕ ಪರಿಹಾರ ವಿತರಿಸಲಾಗುತ್ತಿದೆ.
ಧಾರವಾಡ:
2025-26ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಜಿಲ್ಲೆಯಲ್ಲಿ ನೈಸರ್ಗಿಕ ವಿಕೋಪಗಳಾದ ಪ್ರವಾಹ, ಅತಿವೃಷ್ಟಿಯಿಂದ ಉಂಟಾದ ಬೆಳೆಹಾನಿ ಪರಿಹಾರ ಪಾವತಿಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ದಿವ್ಯಪ್ರಭು ತಿಳಿಸಿದ್ದಾರೆ.ಈ ಕುರಿತು ಬೆಳೆ ಸಮೀಕ್ಷೆ ದತ್ತಾಂಶ, ಪ್ರೂಟ್ ಐಡಿ ಹೊಂದಿರುವ ರೈತರಿಗೆ ಮತ್ತು ಬೆಳೆಹಾನಿ ಅಂತಿಮ ಜಂಟಿ ಸಮೀಕ್ಷೆ ವರದಿಯ ಆಧಾರದ ಮೇಲೆ ಭೂಮಿ ಪರಿಹಾರ ತಂತ್ರಾಂಶದ ಮೂಲಕ ಪರಿಹಾರ ವಿತರಿಸಲಾಗುತ್ತಿದೆ. ಈ ಕುರಿತು ಪ್ರಕಟಣೆ ನೀಡಿರುವ ಅವರು, ಧಾರವಾಡ ತಾಲೂಕಿನಲ್ಲಿ 11,981 ರೈತರ 12,462.49 ಹೆಕ್ಟೇರ್ ಪ್ರದೇಶಕ್ಕೆ ₹ 10,59,97,343 ನವಲಗುಂದ ತಾಲೂಕಿನಲ್ಲಿ 18,433 ರೈತರ 20,685.16 ಹೆಕ್ಟೇರ್ ಪ್ರದೇಶಕ್ಕೆ ₹ 18,74,89,876, ಹುಬ್ಬಳ್ಳಿ ತಾಲೂಕಿನಲ್ಲಿ 11,058 ರೈತರ 13,856.43 ಹೆಕ್ಟೇರ್ ಪ್ರದೇಶಕ್ಕೆ ₹ 11,78,05,212, ಕುಂದಗೋಳ ತಾಲೂಕಿನಲ್ಲಿ 10,912 ರೈತರ 11,261.02 ಹೆಕ್ಟೇರ್ ಪ್ರದೇಶಕ್ಕೆ ₹ 9,58,22,368, ಹುಬ್ಬಳ್ಳಿ ನಗರ ತಾಲೂಕಿನಲ್ಲಿ 839 ರೈತರ 769.12 ಹೆಕ್ಟೇರ್ ಪ್ರದೇಶಕ್ಕೆ ₹ 65,51,452, ಅಣ್ಣಿಗೇರಿ ತಾಲೂಕಿನಲ್ಲಿ 11,994 ರೈತರ 13,875.13 ಹೆಕ್ಟೇರ್ ಪ್ರದೇಶಕ್ಕೆ ₹ 11,79,64,677 ಪರಿಹಾರ ಮೊತ್ತ ವಿತರಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ.
ಜಿಲ್ಲೆಯ ಆರು ತಾಲೂಕಿನ ಬೆಳೆ ಪರಿಹಾರವನ್ನು ಎನ್‌ಡಿಆರ್‌ಎಫ್, ಎಸ್‌ಡಿಆರ್‌ಎಫ್ ಮಾರ್ಗಸೂಚಿಯಂತೆ 65,271 ರೈತರಿಗೆ 72,909.36 ಹೆಕ್ಟೇರ್ ಪ್ರದೇಶಕ್ಕೆ ₹ 63.16 ಕೋಟಿ ಪರಿಹಾರ ಮೊತ್ತ ವಿತರಣೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.;Resize=(128,128))
;Resize=(128,128))
;Resize=(128,128))