ರೈತರಿಗೆ ಬೆಳೆ ಹಾನಿ ಪರಿಹಾರ ಬಿಡುಗಡೆ ಮಾಡಿ

| Published : Dec 06 2024, 09:00 AM IST

ರೈತರಿಗೆ ಬೆಳೆ ಹಾನಿ ಪರಿಹಾರ ಬಿಡುಗಡೆ ಮಾಡಿ
Share this Article
  • FB
  • TW
  • Linkdin
  • Email

ಸಾರಾಂಶ

ಅಕ್ಟೋಬರ್‌ನಲ್ಲಿ ಬಿಟ್ಟು ಬಿಡದೇ ಸುರಿದ ಮಳೆಗೆ ಅತೀವೃಷ್ಟಿ ಸಂಭವಿಸಿ ಕಟಾವಿಗೆ ಬಂದು ಫಸಲು ಜಮೀನಗಳಲ್ಲಿ ಕೊಳೆತು ಹೋಗಿ ರೈತರು ಅಪಾರ ಪ್ರಮಾಣದಲ್ಲಿ ಬೆಳೆ ಹಾನಿ ಮಾಡಿಕೊಂಡಿದ್ದಾರೆ

ನರಗುಂದ: ಅಕ್ಟೋಬರ್‌ ತಿಂಗಳಲ್ಲಿ ಅತೀವೃಷ್ಟಿಯಿಂದ ಬೆಳೆ ಹಾನಿ ಮಾಡಿಕೊಂಡ ರೈತರಿಗೆ ಸರ್ಕಾರ ಬೆಳೆ ಹಾನಿ ಪರಿಹಾರ ಬಿಡುಗಡೆ ಮಾಡಬೇಕೆಂದು ರಾಜ್ಯ ರೈತ ಸಂಘ ಅಧ್ಯಕ್ಷ ವೀರೇಶ ಸೊಬರದಮಠ ಆಗ್ರಹಿಸಿದರು.

ಅವರು 3427ನೇ ದಿನದ ಮಹದಾಯಿ ಹಾಗೂ ಕಳಸಾ ಬಂಡೂರಿ ನಾಲಾ ಯೋಜನೆಯ ನಿರಂತರ ಹೋರಾಟ ವೇದಿಕೆಯಲ್ಲಿ ಮಾತನಾಡಿ, ಮುಂಗಾರು ಹಂಗಾಮಿನಲ್ಲಿ ಉತ್ತಮ ಮಳೆ ಆಗಿದ್ದರಿಂದ ರೈತ ಸಮುದಾಯ ಈ ವರ್ಷ ಉತ್ತಮ ಬೆಳೆ ತೆಗೆಯಬಹುದು ಎಂದು ಗೋವಿನ ಜೋಳ, ಈರಳ್ಳಿ, ಮೆಣಸಿನಕಾಯಿ, ಬಿ.ಟಿ.ಹತ್ತಿ, ಸೂರ್ಯಕಾಂತಿ, ತೊಗರಿ ಸೇರಿದಂತೆ ಇತರ ಬೆಳೆಗಳನ್ನು ಬಿತ್ತನೆ ಮಾಡಿದ್ದರು. ಆದರೆ ಅಕ್ಟೋಬರ್‌ನಲ್ಲಿ ಬಿಟ್ಟು ಬಿಡದೇ ಸುರಿದ ಮಳೆಗೆ ಅತೀವೃಷ್ಟಿ ಸಂಭವಿಸಿ ಕಟಾವಿಗೆ ಬಂದು ಫಸಲು ಜಮೀನಗಳಲ್ಲಿ ಕೊಳೆತು ಹೋಗಿ ರೈತರು ಅಪಾರ ಪ್ರಮಾಣದಲ್ಲಿ ಬೆಳೆ ಹಾನಿ ಮಾಡಿಕೊಂಡಿದ್ದಾರೆ. ಆದ್ದರಿಂದ ಸರ್ಕಾರ ಅತೀವೃಷ್ಟಿಯಿಂದ ಬೆಳೆ ಹಾನಿ ಮಾಡಿಕೊಂಡ ಎಲ್ಲ ರೈತರಿಗೆ ಪ್ರತಿ 1ಎಕರಗೆ ₹ 50ಸಾವಿರ ಪರಿಹಾರವನ್ನು ವಾರದೊಳಗೆ ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿದರು.

ಈ ಸಂದರ್ಭದಲ್ಲಿ ವೀರಬಸಪ್ಪ ಹೂಗಾರ,ಪರಶುರಾಮ ಜಂಬಗಿ,ಎಸ್.ಬಿ. ಜೋಗಣ್ಣವರ, ಸುಭಾಸ ಗಿರಿಯಣ್ಣವರ, ಹನಮಂತ ಸರನಾಯ್ಕರ, ಸಿ.ಎಸ್. ಪಾಟೀಲ, ಮಲ್ಲೇಶ ಅಣ್ಣಿಗೇರಿ, ಶಿವಪ್ಪ ಸಾತಣ್ಣವರ, ಅರ್ಜುನ ಮಾನೆ,ಯಲ್ಲಪ್ಪ ಚಲವಣ್ಣವರ, ಸೋಮಲಿಂಗಪ್ಪ ಆಯಿಟ್ಟಿ, ಶಂಕ್ರಪ್ಪ ಜಾಧವ, ಅನಸವ್ವ ಶಿಂದೆ, ನಾಗರತ್ನ ಸವಳಭಾವಿ, ವಾಸು ಚವ್ಹಾಣ,ವಿಜಯಕುಮಾರ ಹೂಗಾರ ಸೇರಿದಂತೆ ಇದ್ದರು.