ಕನ್ನಡಪ್ರಭ ವಾರ್ತೆ ಗುರುಮಠಕಲ್

ಈ ಬಾರಿ ಮುಂಗಾರು ಮಳೆ ತೀವ್ರ ಕೊರತೆಯಾಗಿರುವ ಹಿನ್ನೆಲೆಯಲ್ಲಿ ಬರಗಾಲ ಘೋಷಣೆಯಾಗುವ ಸಾಧ್ಯತೆ ಇರುವುದರಿಂದ ಬೆಳೆ ಕಟಾವು ಕುರಿತು ಮಾಹಿತಿ ಸಂಗ್ರಹಿಸುವುದು ಅತ್ಯವಶ್ಯಕ ಎಂದು ತಾಲೂಕು ಪಂಚಾಯಿತಿ ಯೋಜನಾಧಿಕಾರಿ ಭಾರತಿ ಸಜ್ಜನ್ ಹೇಳಿದರು.

ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಜಿಲ್ಲಾಡಳಿತ ಯಾದಗಿರಿ, ಜಿಲ್ಲಾ ಸಂಖ್ಯಾ ಸಂಗ್ರಹಣ ಇಲಾಖೆ ಹಾಗೂ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸಹಯೋಗದಲ್ಲಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಹಾಗೂ ಕಾರ್ಯದರ್ಶಿಗಳಿಗೆ 2026-27ನೇ ಸಾಲಿನ ಬೆಳೆ ಕಟಾವು ತರಬೇತಿ ಆಯೋಜಿಸಲಾಗಿತ್ತು.

ಕಾರ್ಯನಿರ್ವಾಹಕ ಅಧಿಕಾರಿ ಅಂಬ್ರೀಶ ಪಾಟೀಲ ಮಾತನಾಡಿ, ಬೆಳೆ ಕಟಾವು ಯಾವಾಗ ಆರಂಭಿಸಬೇಕು, ಎಷ್ಟು ದಿನಗಳಲ್ಲಿ ಪೂರ್ಣಗೊಳಿಸಬೇಕು ಸಹಿತ ಅಗತ್ಯ ಮಾಹಿತಿಯನ್ನು ಒದಗಿಸುವ ಉದ್ದೇಶದಿಂದ ಪ್ರತಿವರ್ಷದಂತೆ ಈ ವರ್ಷವೂ ಸಾಂಖ್ಯಿಕ ಇಲಾಖೆಯಿಂದ ತರಬೇತಿ ಆಯೋಜಿಸಲಾಗಿದೆ. ಅಧಿಕಾರಿಗಳು ತರಬೇತಿಯ ಸದುಪಯೋಗ ಪಡೆದುಕೊಳ್ಳಬೇಕು ಎಂದರು.

ಜಿಲ್ಲಾ ಸಂಖ್ಯಾ ಸಂಗ್ರಹಣ ಇಲಾಖೆಯ ತರಬೇತುದಾರ ಶಬ್ಬೀರ್ ಪಟೇಲ್ ಮಾತನಾಡಿ, ಬೆಳೆ ಕಟಾವು ಕುರಿತು ಮಾಹಿತಿ ಸಂಗ್ರಹಿಸುವ ವಿಧಾನ, ಆ್ಯಪ್ ಬಳಕೆ ಹಾಗೂ ತಾಂತ್ರಿಕ ಸಮಸ್ಯೆಗಳ ಕುರಿತು ತರಬೇತಿ ನೀಡಿದರು. ಸಹಾಯಕ ನಿರ್ದೇಶಕ ಶ್ರೀರಾಮಚಂದ್ರ ಬಸೂದೆ, ಜಿಲ್ಲಾ ಸಂಖ್ಯಾ ಸಂಗ್ರಹಣ ಕಚೇರಿ ಸಹಾಯಕ ನಿರ್ದೇಶಕಿ ಚೇತನಾ, ಸಿದ್ದಣಗೌಡ ಪಾಟೀಲ್, ಗಣತಿದಾರ ಮಂಜುನಾಥ ಹೇರೂರು, ಐಇಸಿ ತಾಲೂಕು ಸಂಯೋಜಕ ರಾಘವೇಂದ್ರ ಸೇರಿದಂತೆ ವಿಮಾ ಕಂಪನಿಗಳ ಪ್ರತಿನಿಧಿಗಳು ಹಾಗೂ ತಾಲೂಕು ಪಂಚಾಯಿತಿ ಸಿಬ್ಬಂದಿ ಉಪಸ್ಥಿತರಿದ್ದರು.


-------

26ವೈಡಿಆರ್10 :

ಗುರುಮಠಕಲ್‌ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಜಿಲ್ಲಾಡಳಿತ ಯಾದಗಿರಿ, ಜಿಲ್ಲಾ ಸಂಖ್ಯಾ ಸಂಗ್ರಹಣ ಇಲಾಖೆ ಹಾಗೂ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸಹಯೋಗದಲ್ಲಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಹಾಗೂ ಕಾರ್ಯದರ್ಶಿಗಳಿಗೆ 2026-27ನೇ ಸಾಲಿನ ಬೆಳೆ ಕಟಾವು ತರಬೇತಿ ಆಯೋಜಿಸಲಾಗಿತ್ತು