ಮುಂಗಾರು ಹಂಗಾಮಿನಲ್ಲಿ ಈಗಾಗಲೇ ಶೇ.೮೦ರಷ್ಟು ಪ್ರಯೋಗಗಳು ಪೂರ್ಣಗೊಂಡಿದ್ದು, ಬಾಕಿ ಇರುವ ಎಲ್ಲಾ ಬೆಳೆಕಟಾವು ಪ್ರಯೋಗಗಳನ್ನು ಯಾವುದೇ ವ್ಯತ್ಯಾಸವಿಲ್ಲದೆ ಶೇ.100ರಷ್ಟು ನಿಗಧಿತ ಸರ್ವೆ ಸಂಖ್ಯೆಗಳಲ್ಲೇ ನಿಯಮಾನುಸಾರ ಕೈಗೊಳ್ಳುವಂತೆ ಅಪರ ಜಿಲ್ಲಾಧಿಕಾರಿ ಡಾ: ಎನ್. ತಿಪ್ಪೇಸ್ವಾಮಿ ಕಟ್ಟುನಿಟ್ಟಾಗಿ ಸೂಚಿಸಿದರು.
ಕನ್ನಡಪ್ರಭ ವಾರ್ತೆ, ತುಮಕೂರುಮುಂಗಾರು ಹಂಗಾಮಿನಲ್ಲಿ ಈಗಾಗಲೇ ಶೇ.೮೦ರಷ್ಟು ಪ್ರಯೋಗಗಳು ಪೂರ್ಣಗೊಂಡಿದ್ದು, ಬಾಕಿ ಇರುವ ಎಲ್ಲಾ ಬೆಳೆಕಟಾವು ಪ್ರಯೋಗಗಳನ್ನು ಯಾವುದೇ ವ್ಯತ್ಯಾಸವಿಲ್ಲದೆ ಶೇ.100ರಷ್ಟು ನಿಗಧಿತ ಸರ್ವೆ ಸಂಖ್ಯೆಗಳಲ್ಲೇ ನಿಯಮಾನುಸಾರ ಕೈಗೊಳ್ಳುವಂತೆ ಅಪರ ಜಿಲ್ಲಾಧಿಕಾರಿ ಡಾ: ಎನ್. ತಿಪ್ಪೇಸ್ವಾಮಿ ಕಟ್ಟುನಿಟ್ಟಾಗಿ ಸೂಚಿಸಿದರು.ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗುರುವಾರ ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಭಿಮಾ ಯೋಜನೆಯಡಿ ಕೈಗೊಳ್ಳುವ ಬೆಳೆಕಟಾವು ಪ್ರಯೋಗಗಳ ಪರಿಣಾಮಕಾರಿ ಅನುಷ್ಠಾನ, ಕೃಷಿ ಅಂಕಿ-ಅಂಶಗಳು ಹಾಗೂ ನಾಗರಿಕ ನೋಂದಣಿ ವಿಷಯಗಳ ಕುರಿತು ನಡೆದ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಜಿಲ್ಲೆಯಲ್ಲಿ 2025–26ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬೀಮಾ ಯೋಜನೆಯಡಿ 5,650 ಹಾಗೂ ಹಿಂಗಾರು ಹಂಗಾಮಿನಲ್ಲಿ 200 ಬೆಳೆಕಟಾವು ಪ್ರಯೋಗಗಳು ಹಂಚಿಕೆಯಾಗಿವೆ. ರೈತರು, ವಿಮಾ ಪ್ರತಿನಿಧಿಗಳು ಹಾಗೂ ಹಂಚಿಕೆಯಾಗಿದ್ದಲ್ಲಿ ಮೇಲ್ವಿಚಾರಕರ ಸಮ್ಮುಖದಲ್ಲಿ ಪ್ರಯೋಗಗಳನ್ನು ನಡೆಸಿ, ನಿಖರವಾದ ಇಳುವರಿ ಮಾಹಿತಿಯನ್ನು ನಮೂದಿಸಬೇಕು. ತಪ್ಪು ಅಥವಾ ಲೋಪ ಕಂಡುಬಂದಲ್ಲಿ ಸಂಬಂಧಿಸಿದ ಮೂಲ ಕಾರ್ಯಕರ್ತರನ್ನು ಹೊಣೆಗಾರರನ್ನಾಗಿ ಮಾಡಿ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.ಜನನ–ಮರಣ ನೋಂದಣಿಯನ್ನೂ ಕಡ್ಡಾಯವಾಗಿ ನಿಗಧಿತ ಅವಧಿಯಲ್ಲಿ ಕೈಗೊಳ್ಳುವಂತೆ ಸೂಚಿಸಿದರು. ಜನನ–ಮರಣ ಘಟನೆಗಳು ಸಂಭವಿಸಿದ 21 ದಿನಗಳೊಳಗೆ ನೋಂದಣಿ ಪೂರ್ಣಗೊಳಿಸಬೇಕು ಹಾಗೂ ಆಸ್ಪತ್ರೆಗಳಲ್ಲಿ ಜನಿಸುವ ಮಕ್ಕಳಿಗೆ ತಾಯಿ ಆಸ್ಪತ್ರೆಯಿಂದ ಬಿಡುಗಡೆಯಾಗುವ ವೇಳೆಯಲ್ಲೇ ಜನನ ಪ್ರಮಾಣ ಪತ್ರ ವಿತರಿಸಲು ಅಗತ್ಯ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಸಭೆಯಲ್ಲಿ ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿ ಡಿ. ರಂಗಸ್ವಾಮಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಣಧಿಕಾರಿ ಡಾ. ಚಂದ್ರಶೇಖರ್, ಜಿಲ್ಲಾ ವಿಮಾ ಪ್ರತಿನಿಧಿ ಮಂಜುನಾಥ್, ಸಹಾಯಕ ಸಾಂಖಿಕ ಅಧಿಕಾರಿ ಹನುಮಂತರಾಯ ಎಚ್. ಸೇರಿದಂತೆ ವಿವಿಧ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.