Crop insurance compensation for 59,000 farmers soon
-ಶೇಂಗಾ ಬೆಳೆಗಾರರಿಗೆ ಹೆಕ್ಟೇರ್ಗೆ ₹6,500 ರಂತೆ ಮುಂಗಡ ಪರಿಹಾರ । ಶೀಘ್ರ್ರ ಖಾತೆಗೆ ಹಣ
ಕನ್ನಡಪ್ರಭ ವಾರ್ತೆ ಚಳ್ಳಕೆರೆತಾಲೂಕಿನಲ್ಲಿ ಮಳೆ- ಬೆಳೆ ಇಲ್ಲದೆ ಬರಗಾಲದ ಸಂಕಷ್ಟ ಎದುರಿಸುತ್ತಿರುವ ರೈತರಿಗೆ ಸರ್ಕಾರ ನೆರವಿನ ಹಸ್ತ ಚಾಚಿದೆ.
ತಾಲೂಕಿನ 59 ಸಾವಿರ ರೈತರಿಗೆ ಶೇಂಗಾ ಬಿತ್ತನೆ ಪೂರ್ವ ಬೆಳೆವಿಮೆಯ ಶೇ.25ರಷ್ಟು ಮುಂಗಡ ಪರಿಹಾರವಾಗಿ ಪ್ರತಿ ಹೆಕ್ಟೇರ್ಗೆ ₹ 6,500ರಂತೆ ಶೀಘ್ರ ಹಣ ವಿತರಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಹಾಗೂ ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆ ಸಚಿವ ಟಿ.ರಘುಮೂರ್ತಿ ತಿಳಿಸಿದರು.ತಾಲೂಕಿನ ಪರಶುರಾಂಪುರ ಹೋಬಳಿಯ ಸಿದ್ದೇಶ್ವರನದುರ್ಗ ಗ್ರಾಮ ಪಂಚಾಯಿತಿ ಆವರಣದಲ್ಲಿ ಆಯೋಜಿಸಿದ್ದ ಪ್ರಜಾಸೇವಾ ಆಂದೋಲನವನ್ನು ಗಿಡಕ್ಕೆ ನೀರು ಹಾಕುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು.
ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಈ ಹಿಂದೆ ₹2,500 ಇದ್ದ ಪರಿಹಾರ ಮೊತ್ತವನ್ನು ₹5,000ಕ್ಕೆ ಹೆಚ್ಚಿಸಿದ್ದು, ಶೀಘ್ರದಲ್ಲೇ ರೈತರ ಖಾತೆಗಳಿಗೆ ಹಣ ಜಮೆಯಾಗಲಿದೆ. ರೈತ ಸಮುದಾಯದ ಸಂಕಷ್ಟಕ್ಕೆ ಸ್ಪಂದಿಸಲು ಸರ್ಕಾರ ಹಲವು ಸೌಲಭ್ಯಗಳನ್ನು ಕಲ್ಪಿಸುತ್ತಿದೆ ಎಂದರು.ಮಹಾತ್ಮ ಗಾಂಧೀಜಿಯವರ ಆಡಳಿತ ವಿಕೇಂದ್ರೀಕರಣದ ಆಶಯದಂತೆ ಗ್ರಾಮೀಣ ಪ್ರದೇಶಗಳಲ್ಲಿಯೇ ಸರ್ಕಾರಿ ಸೇವೆಗಳನ್ನು ಒದಗಿಸಿ, ಜನರ ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರ ಕಲ್ಪಿಸುವ ಉದ್ದೇಶದಿಂದ ಪ್ರಜಾಸೇವಾ ಆಂದೋಲನ ಆರಂಭಿಸಲಾಗಿದೆ.
ಪ್ರತಿ ಶನಿವಾರ ಹೋಬಳಿ ಮಟ್ಟದಲ್ಲಿ ಕಾರ್ಯಕ್ರಮ ಆಯೋಜಿಸಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿ ಪರಿಹಾರ ಒದಗಿಸಲಾಗುತ್ತಿದೆ. ಇದರಿಂದ ಆಡಳಿತ ಯಂತ್ರ ಚುರುಕುಗೊಂಡಿದೆ ಎಂದು ಹೇಳಿದರು.ಉಪವಿಭಾಗಾಧಿಕಾರಿ ಕಾಂತರಾಜ್ ಮಾತನಾಡಿ, ಸಚಿವರ ಮಾರ್ಗದರ್ಶನ ಹಾಗೂ ಸರ್ಕಾರದ ಸೂಚನೆಯಂತೆ ಜಿಲ್ಲೆಯ ಎಲ್ಲಾ ವಿಧಾನಸಭಾ ಕ್ಷೇತ್ರಗಳಲ್ಲಿ ಆಂದೋಲನ ನಡೆಸಲಾಗುತ್ತಿದೆ. ಈ ತಿಂಗಳ ಎರಡನೇ ಸಭೆಯನ್ನು ಸಿದ್ದೇಶ್ವರನದುರ್ಗದಲ್ಲಿ ಆಯೋಜಿಸಿದ್ದು, ಒಟ್ಟು 65 ಅರ್ಜಿಗಳು ಸಲ್ಲಿಕೆಯಾಗಿವೆ. ತಾ.ಪಂ ಮತ್ತು ಕಂದಾಯ ಇಲಾಖೆಗೆ ಹೆಚ್ಚಿನ ಅರ್ಜಿಗಳು ಬಂದಿದ್ದು, ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದರು.
ಸಭೆಯಲ್ಲಿ ಡಿಡಿಪಿಐ ಮಂಜುನಾಥ, ಬಿಇಒ ಕೆ.ಎಸ್.ಸುರೇಶ್, ಇಒ ಎಚ್.ಶಶಿಧರ, ತಹಸೀಲ್ದಾರ್ ರೇಹಾನ್ ಪಾಷ, ಗ್ಯಾರಂಟಿ ಸಮಿತಿ ಅಧ್ಯಕ್ಷ ಗದ್ದಿಗೆತಿಪ್ಪೇಸ್ವಾಮಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.ಪೋಟೋ
ತಾಲೂಕಿನ ಪರಶುರಾಂಪುರ ಹೋಬಳಿಯ ಸಿದ್ದೇಶ್ವರನದುರ್ಗದಲ್ಲಿ ನಡೆದ ಪ್ರಜಾಸೇವಾ ಆಂದೋಲನದಲ್ಲಿ ಸಾರ್ವಜನಿಕರ ಅಹವಾಲು ಆಲಿಸಿದ ಸಚಿವ ಟಿ.ರಘುಮೂರ್ತಿ.