ವಾಣಿಜ್ಯ ಸಂಕೀರ್ಣ ನಿರ್ಮಾಣಕ್ಕೆ ₹೧ ಕೋಟಿ ಭರವಸೆ

| Published : Aug 25 2024, 02:02 AM IST

ಸಾರಾಂಶ

ಯಳಂದೂರು ಸಮೀಪದ ಸಂತೇಮರಹಳ್ಳಿ ಗ್ರಾಮದ ಡಾ.ಬಿ.ಆರ್.ಅಂಬೇಡ್ಕರ್ ಸಮುದಾಯ ಭವನದಲ್ಲಿ ಮಹಾನಾಯಕ ಡಾ.ಬಿ.ಆರ್.ಅಂಬೇಡ್ಕರ್ ಸೇವಾ ಟ್ರಸ್ಟ್ ವತಿಯಿಂದ ಹಮ್ಮಿಕೊಂಡಿದ್ದ ಡಾ.ಬಿ.ಆರ್.ಅಂಬೇಡ್ಕರ್ ಸೇವಾ ಟ್ರಸ್ಟ್ ಉದ್ಘಾಟನೆ ಕಾರ್ಯಕ್ರಮದಲ್ಲಿ ಸಚಿವ ಎಚ್.ಸಿ.ಮಹದೇವಪ್ಪ ಮಾತನಾಡಿದರು.

ಕನ್ನಡಪ್ರಭ ವಾರ್ತೆ ಯಳಂದೂರು

ಅಂಬೇಡ್ಕರ್ ಅವರ ವಿಚಾರಧಾರೆಗಳನ್ನು ಪ್ರತಿಯೊಬ್ಬರು ಜೀವನದಲ್ಲಿ ಅಳವಡಿಸಿಕೊಂಡು ಶಿಕ್ಷಣ, ಹೋರಾಟ ಹಾಗೂ ಸಂಘಟನೆಯನ್ನು ಮಾಡುವ ಮೂಲಕ ಸಮಾಜದ ಅಭಿವೃದ್ಧಿಗೆ ಶ್ರಮಿಸಬೇಕೆಂದು ಸಮಾಜ ಕಲ್ಯಾಣ ಸಚಿವ ಎಚ್.ಸಿ.ಮಹದೇವಪ್ಪ ತಿಳಿಸಿದರು.ಸಂತೇಮರಹಳ್ಳಿ ಡಾ.ಬಿ.ಆರ್.ಅಂಬೇಡ್ಕರ್ ಸಮುದಾಯ ಭವನದಲ್ಲಿ ಶನಿವಾರ ಡಾ.ಅಂಬೇಡ್ಕರ್ ಸೇವಾ ಟ್ರಸ್ಟ್ ವತಿಯಿಂದ ಹಮ್ಮಿಕೊಂಡಿದ್ದ ನೂತನ ಸಂಸದರಿಗೆ ಅಭಿನಂದನಾ ಹಾಗೂ ಮಹಾನಾಯಕ ಡಾ.ಬಿ.ಆರ್.ಅಂಬೇಡ್ಕರ್ ಸೇವಾ ಟ್ರಸ್ಟ್ ಉದ್ಘಾಟನೆ ಮಾಡಿ ಮಾತನಾಡಿ, ಚಾಮರಾಜನಗರ ಜಿಲ್ಲೆಯಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ ವರ್ಗ, ಅಲ್ಪಸಂಖ್ಯಾತರು ಹೆಚ್ಚಿನ ಸಂಖ್ಯೆಯಲ್ಲಿ ವಾಸಿಸುತ್ತಿರುವ ಜಿಲ್ಲೆಯಲ್ಲಿದ್ದು, ಆರೋಗ್ಯದ ದೃಷ್ಟಿಯಿಂದ ಆರೋಗ್ಯ ಮೇಳ, ಯುವಕರಿಗೆ ಉದ್ಯೋಗ ಮೇಳ ಆಯೋಜನೆಗಳನ್ನು ಮಾಡುವ ಮೂಲಕ ಜಿಲ್ಲೆಯಲ್ಲಿ ರೈಲು, ರಸ್ತೆ, ಕುಡಿಯುವ ನೀರು ಸೇರಿದಂತೆ ಮೂಲಭೂತ ಸೌಕರ್ಯಗಳನ್ನು ಕಲ್ಪಿಸುವ ನಿಟ್ಟಿನಲ್ಲಿ ಹೆಚ್ಚಿನ ಆದ್ಯತೆ ನೀಡಿ ಕೆಲಸವನ್ನು ಮಾಡುವ ಯೋಜನೆಗಳನ್ನು ಸಂಸದರು ಮಾಡಲಿದ್ದಾರೆ.

ಸೆ.೧೫ ರಂದು ರಾಜ್ಯಾದ್ಯಂತ್ಯ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಪ್ರಯುಕ್ತ ರಾಜ್ಯದ ಬೀದರ್‌ನಿಂದ ಚಾಮರಾಜನಗರ ವರೆಗಿನ ಮಾನವ ಸರಪಳಿ ಮಾಡುವ ಮೂಲಕ ವಿಶೇಷ ಕಾರ್ಯಕ್ರಮವನ್ನು ಮಾಡಲು ರಾಜ್ಯ ಸರ್ಕಾರ ಅಗತ್ಯ ಸಿದ್ದತೆಗಳನ್ನು ಮಾಡಲಾಗುತ್ತದೆ. ಆದರಿಂದ ಸಂವಿಧಾನ ಬಗ್ಗೆ ಪ್ರತಿಯೊಬ್ಬರಿಗೂ ಜಾಗೃತಿ ಮೂಡಿಸುವ ಮೂಲಕ ಕೆಲಸಗಳು ಮತ್ತಷ್ಟು ನಡೆಯಬೇಕಾಗಿದೆ ಎಂದು ತಿಳಿಸಿದರು. ಜತೆಗೆ ಸಂತೇಮರಹಳ್ಳಿ ಡಾ.ಬಿ.ಆರ್.ಅಂಬೇಡ್ಕರ್ ಸಮುದಾಯ ಭವನದ ಮುಂಭಾಗದಲ್ಲಿ ಖಾಲಿ ನಿವೇಶನದಲ್ಲಿ ವಾಣಿಜ್ಯ ಸಂಕೀರ್ಣ ಅಂಗಡಿ ಮಳಿಗೆಗಳನ್ನು ಸೇರಿರದಂತೆ ಇತರೆ ಅಭಿವೃದ್ದಿ ಕೆಲಸಗಳ ನಿರ್ಮಾಣ ಮಾಡಲು ₹೧ ಕೋಟಿ ವೆಚ್ಚವನ್ನು ನೀಡುವ ಭರವಸೆ ನೀಡಿದರು.

ಸಂಸದರ ಅಭಿನಂದನೆ ಕಾರ್ಯಕ್ರಮಕ್ಕೆ ಸಂಸದರೇ ಗೈರು:

ಶನಿವಾರ ಸಂತೇಮರಹಳ್ಳಿ ಡಾ.ಅಂಬೇಡ್ಕರ್ ಸಮುದಾಯ ಭವನದಲ್ಲಿ ಅಂಬೇಡ್ಕರ್ ಸೇವಾ ಟ್ರಸ್ಟ್ ವತಿಯಿಂದ ಹಮ್ಮಿಕೊಂಡಿದ್ದ ಚಾಮರಾಜನಗರ ಲೋಕಸಭಾ ಕ್ಷೇತ್ರ ನೂತನ ಸಂಸದ ಸುನೀಲ್ ಬೋಸ್ ಅವರನ್ನು ಜಿಲ್ಲೆಯಲ್ಲಿ ಲಕ್ಷಕ್ಕೂ ಹೆಚ್ಚಿನ ಮತಗಳ ಅಂತರದಿಂದ ಗೆಲ್ಲಿಸುವಲ್ಲಿ ಮೂಲಕ ಮತದಾರರು ಇತಿಹಾಸ ನಿರ್ಮಿಸಿದರು, ಈ ಹಿನ್ನೆಲೆಯಲ್ಲಿ ಅವರಿಗೆ ಅಭಿನಂದನೆ ಸಲ್ಲಿಸಲು ಹಮ್ಮಿಕೊಂಡ ಸಮಾರಂಭದಲ್ಲಿ ಅವರೇ ಕೇಂದ್ರ ಬಿಂದುವಾಗಿರುವ ಕಾರ್ಯಕ್ರಮಕ್ಕೆ ಗೈರಾಗಿರುವುದು ಕಂಡುಬಂದಿದೆ. ಈ ಸಂದರ್ಭದಲ್ಲಿ ಶಾಸಕ ಎ.ಆರ್.ಕೃಷ್ಣಮೂರ್ತಿ, ಜಿಪಂ ಮಾಜಿ ಉಪಾಧ್ಯಕ್ಷ ಜೆ.ಯೋಗೇಶ್, ಮೈಸೂರಿನ ಉರಿಲಿಂಗಿಪೆದ್ದಿಮಠದ ಜ್ಞಾನ ಪ್ರಕಾಶ ಸ್ವಾಮೀಜಿ , ಮುಖಂಡರಾದ ಕಿನಕಹಳ್ಳಿ ರಾಚಯ್ಯ ಸೇರಿದಂತೆ ಸಂಘದ ಸದಸ್ಯರು ಸೇರಿದಂತೆ ಇತರರು ಹಾಜರಿದ್ದರು.