ಮಾದಪ್ಪನ ಸನ್ನಿಧಿಗೆ ಹರಿದು ಬಂದ ಭಕ್ತರ ದಂಡು

| Published : Oct 03 2024, 01:29 AM IST

ಸಾರಾಂಶ

ಹನೂರು: ಮಲೆ ಮಹದೇಶ್ವರ ಬೆಟ್ಟದಲ್ಲಿ ಮಹಾಲಯ ಅಮಾವಾಸ್ಯೆ ಪೂಜಾ ಕಾರ್ಯಕ್ರಮಗಳು ಧಾರ್ಮಿಕವಾಗಿ ವಿಧಿ ವಿಧಾನಗಳೊಂದಿಗೆ ಸಂಭ್ರಮ ಸಡಗರದಿಂದ ಜರುಗಿತು.

ಹನೂರು: ಮಲೆ ಮಹದೇಶ್ವರ ಬೆಟ್ಟದಲ್ಲಿ ಮಹಾಲಯ ಅಮಾವಾಸ್ಯೆ ಪೂಜಾ ಕಾರ್ಯಕ್ರಮಗಳು ಧಾರ್ಮಿಕವಾಗಿ ವಿಧಿ ವಿಧಾನಗಳೊಂದಿಗೆ ಸಂಭ್ರಮ ಸಡಗರದಿಂದ ಜರುಗಿತು.

ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದ ವತಿಯಿಂದ ಕಳೆದ ಮೂರು ದಿನಗಳಿಂದ ಮಹಾಲಯ ಅಮಾವಾಸ್ಯೆ ಪ್ರಯುಕ್ತ ವಿಶೇಷ ಪೂಜಾ ಕಾರ್ಯಕ್ರಮಗಳು ಸಾಲೂರು ಮಠದ ಶಾಂತ ಮಲ್ಲಿಕಾರ್ಜುನ ಸ್ವಾಮೀಜಿ ನೇತೃತ್ವದಲ್ಲಿ ಸರದಿ ಬೇಡಗಂಪಣ ಅರ್ಚಕ ತಂಡದವರಿಂದ ಮಾದಪ್ಪನಿಗೆ ವಿಶೇಷ ಅಭಿಷೇಕ ದೂಪದ ಅಭಿಷೇಕ ಮಹಾ ಮಂಗಳಾರತಿ ಪೂಜಾ ಕಾರ್ಯಕ್ರಮಗಳು ಧಾರ್ಮಿಕವಾಗಿ ವಿಧಿ ವಿಧಾನಗಳೊಂದಿಗೆ ಜರುಗಿದವು.

ಹರಕೆ ಹೊತ್ತ ಭಕ್ತರಿಂದ ವಿಶೇಷ ಉತ್ಸವಗಳು ಜರುಗಿದವು. ಮಲೆ ಮಹದೇಶ್ವರ ಬೆಟ್ಟದಲ್ಲಿ ಮಹಾಲಯ ಅಮಾವಾಸ್ಯೆ ಪ್ರಯುಕ್ತ ರಾಜ್ಯದ ನಾನಾ ಭಾಗಗಳಿಂದ ಬಂದಿದ್ದ ಹರಕೆ ಹೊತ್ತ ಭಕ್ತರಿಂದ ಚಿನ್ನದ ರಥೋತ್ಸವ, ಬೆಳ್ಳಿ ರಥೋತ್ಸವ ಹಾಗೂ ಮಲೆ ಮಹದೇಶ್ವರ ಉತ್ಸವ ಮೂರ್ತಿ ಮೆರವಣಿಗೆ, ಹುಲಿ ವಾಹನ ಉತ್ಸವ, ರುದ್ರಾಕ್ಷಿ ಮಂಟಪೋತ್ಸವ, ಉರುಳು ಸೇವೆ, ಪಂಜಿನ ಸೇವೆ, ಮುಡಿಸೇವೆ ಹಾಗೂ ಹಲವು ಉತ್ಸವಗಳು ಧಾರ್ಮಿಕವಾಗಿ ಸಂಭ್ರಮ ಸಡಗರದಿಂದ ನಡೆಯಿತು..

ವಿಶೇಷ ದರ್ಶನ ಭಾಗ್ಯ: ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ 60 ವರ್ಷ ಮೇಲ್ಪಟ್ಟ ವಿಶೇಷ ಮತ್ತು 500 ಹಾಗೂ 250 ರು. ಟಿಕೆಟ್ ಕೌಂಟರ್‌ಗಳನ್ನು ಸಹ ವ್ಯವಸ್ಥಿತವಾಗಿ ಕಲ್ಪಿಸಲಾಗಿತ್ತು. ಉಚಿತ ಸರತಿ ಸಾಲಿನಲ್ಲಿ ನಿಂತು ಭಕ್ತರು ಮಾದಪ್ಪನ ದರ್ಶನ ಪಡೆದರು.

ವಿಶೇಷ ದಾಸೋಹ: ರಾಜ್ಯದ ನಾನಾ ಭಾಗಗಳಿಂದ ಬರುವ ಮಾದಪ್ಪನ ಪಂಚಾಯಿತಿ ವಿಶೇಷ ದಾಸೋಹ ಬೆಳಿಗ್ಗೆ 8 ರಿಂದ 11 ರವರೆಗೆ ತಿಂಡಿ ಹಾಗೂ ನಂತರ ಊಟದ ವ್ಯವಸ್ಥೆ, ವಿಶೇಷ ದಾಸೋಹವನ್ನು ಸಹ ಕಲ್ಪಿಸಲಾಗಿತ್ತು. ಕಳೆದ ಮೂರು ದಿನಗಳಿಂದ ಲಾಡು ಪ್ರಸಾದ, ಒಂದು ಲಕ್ಷ ಮೂವತ್ತು ಸಾವಿರ ಮಾರಾಟವಾಗಿದೆ. ಜತೆಗೆ ಇನ್ನೂ ಒಂದು ಲಕ್ಷ ದಾಸ್ತಾನು ಮಾಡಲಾಗಿದೆ. ಬರುವ ಭಕ್ತಾದಿಗಳಿಗೆ ವಿಶೇಷವಾಗಿ ಕುಡಿಯುವ ನೀರು ಮತ್ತು ಶೌಚಾಲಯ ವ್ಯವಸ್ಥೆ ಕಲ್ಪಿಸಲಾಗಿದೆ.

ಮಾದಪ್ಪನ ಸನ್ನಿಧಿಯಲ್ಲಿ ಭಾರಿ ಜನಸ್ತೋಮ: ಮಹಾಲಯ ಅಮಾವಾಸ್ಯೆ ಪ್ರಯುಕ್ತ ಕಳೆದ ಮೂರು ದಿನಗಳಿಂದ ಅಮಾವಾಸ್ಯೆ ಪೂಜೆಗೆ ಲಕ್ಷಾಂತರ ಭಕ್ತರು ರಾಜ್ಯದ ಬೆಂಗಳೂರು ಮೈಸೂರು ಮಂಡ್ಯ ಹಾಗೂ ಚಾಮರಾಜನಗರ ತಾಲೂಕು ಕೇಂದ್ರದ ಹೋಬಳಿಗಳಿಂದಲೂ ಹಾಗೂ ತಮಿಳುನಾಡಿನಿಂದಲೂ ಅಪಾರ ಸಂಖ್ಯೆಯ ಭಕ್ತಾದಿಗಳು ಭೇಟಿ ನೀಡಿ ಮಾದಪ್ಪನ ದರ್ಶನ ಪಡೆದರು.

ಬಿಗಿ ಬಂದೋಬಸ್ತ್: ಮಲೆ ಮಾದೇಶ್ವರ ಬೆಟ್ಟದಲ್ಲಿ ನಡೆಯುತ್ತಿರುವ ಮಹಾಲಯ ಅಮಾವಾಸ್ಯೆ ಪೂಜಾ ಕಾರ್ಯಕ್ರಮಕ್ಕೆ ಬರುವ ಭಕ್ತಾದಿಗಳಿಗೆ ಯಾವುದೇ ಅಹಿತಕರ ಘಟನೆಗಳು ಜರುಗದಂತೆ ಕ್ರಮ ವಹಿಸುವ ನೆಟ್ಟಿನಲ್ಲಿ ಪೊಲೀಸ್ ಇಲಾಖೆ ಜಿಲ್ಲಾ ಪೊಲೀಸ್ ವರಿಷ್ಠ ಇದ್ದಾರೆ ಭೇಟಿ ಕವಿತಾ ಅವರ ಮಾರ್ಗದರ್ಶನದಲ್ಲಿ ಕೊಳ್ಳೇಗಾಲ ಉಪ ವಿಭಾಗ ಡಿ ವೈ ಎಸ್ ಪಿ ಧರ್ಮೇಂದರ್ ಮಲೆಯ ಮಹದೇಶ್ವರ ಬೆಟ್ಟದಲ್ಲಿ ಜಾತ್ರೆಯಲ್ಲಿ ಅವರ ಅಧ್ಯಕ್ಷತೆಯಲ್ಲಿ ಇನ್ಸ್ಪೆಕ್ಟರ್ ಜಗದೀಶ್ ಮಹಾ ಬೆಟ್ಟ ವ್ಯಾಪ್ತಿಯ ದೇವಾಲಯದ ಸಮೀಪ ಹಾಗೂ ಸಾಲೂರು ಮಠಕ್ಕೆ ತೆರಳುವ ರಸ್ತೆ ಬಸ್ ನಿಲ್ದಾಣ ಹಾಗೂ ಹಿಡಿದ ಆಯಕಟ್ಟಿನ ಸ್ಥಳಗಳಲ್ಲಿ ಹೆಚ್ಚಿನ ಪೊಲೀಸ್ ಬಂದೋಬಸ್ತ್ ಮಾಡಲಾಗಿತ್ತು.

ಮಹಾಲಯ ಅಮಾವಾಸ್ಯೆಗೆ ಬರುವ ಮಾದಪ್ಪನ ಭಕ್ತರಿಗೆ ಯಾವುದೇ ಲೋಪದೋಷಗಳು ಬರದಂತೆ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ಹಿರಿಯ ನಾಗರಿಕರಿಗೆ ಪ್ರತ್ಯೇಕ ವ್ಯವಸ್ಧೆ, ಭಕ್ತಾಧಿಗಳಿಗೆ ಕುಡಿಯವ ನೀರಿನ ವ್ಯವಸ್ಥೆ ಮತ್ತು ವಿಶೇಷ ದಾಸೋಹ ವ್ಯವಸ್ಥೆಯನ್ನು ಅಚ್ಚುಕಟ್ಟಾಗಿ ಮಾಡಲಾಗಿದೆ.

ರಘು, ಕಾರ್ಯದರ್ಶಿ, ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ, ಮಲೆ ಮಹದೇಶ್ವರ ಬೆಟ್ಟ.