ಕಾಂಗ್ರೆಸ್ ಕಾರ್ಯಕರ್ತರಿಂದ ಸಿಎಸ್ ಆರ್ ಹುಟ್ಟುಹಬ್ಬ ಆಚರಣೆ

| Published : Jun 02 2024, 01:46 AM IST

ಸಾರಾಂಶ

ಚಲುವರಾಯಸ್ವಾಮಿ ಸಚಿವರಾಗಿದ್ದರೂ ಸರಳತೆಯನ್ನು ಮೈಗೂಡಿಸಿಕೊಂಡಿರುವ ರಾಜಕಾರಣಿ. ಸದಾ ಜನಪರ ತುಡಿತ ಹೊಂದಿದ್ದಾರೆ. ಕೃಷಿ ಸಚಿವರಾಗಿ ರೈತಪರ ಕಾಳಜಿ ಹೊಂದಿದ್ದಾರೆ.

ಕೆ.ಆರ್.ಪೇಟೆ: ಪಟ್ಟಣದ ದುಂಡುಶೆಟ್ಟಿ ಲಕ್ಷ್ಮಮ್ಮ ಸ್ಮಾರಕ ಸಾರ್ವಜನಿಕ ಆಸ್ಪತ್ರೆಯ ಒಳ ರೋಗಿಗಳಿಗೆ ಹಣ್ಣು- ಹಂಪಲು ವಿತರಿಸುವ ಮೂಲಕ ತಾಲೂಕು ಕಾಂಗ್ರೆಸ್ ಕಾರ್ಯಕರ್ತರು ರಾಜ್ಯ ಕೃಷಿ ಸಚಿವ ಎನ್.ಚಲುವರಾಯಸ್ವಾಮಿಯವರ ಹುಟ್ಟುಹಬ್ಬ ಆಚರಿಸಿ ಸಚಿವರಿಗೆ ಶುಭ ಕೋರಿದರು. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ.ನಾಗೇಂದ್ರಕುಮಾರ್ ನೇತೃತ್ವದಲ್ಲಿ ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ಆಗಮಿಸಿದ ಕಾಂಗ್ರೆಸ್ ಕಾರ್ಯಕರ್ತರು, ಸಚಿವ ಎನ್.ಚಲುವರಾಯಸ್ವಾಮಿ ಅವರ ಹುಟ್ಟುಹಬ್ಬಕ್ಕೆ ಶುಭ ಹಾರೈಸಿ ರೋಗಿಗಳಿಗೆ ಹಣ್ಣು ಹಂಪಲು ವಿತರಿಸಿದರು. ಮುಖಂಡ ವಿಜಯ ರಾಮೇಗೌಡ ಮಾತನಾಡಿ, ಸಚಿವ ಎನ್.ಚಲುವರಾಯಸ್ವಾಮಿ ಅವರು ರಾಜಕೀಯವಾಗಿ ನಡೆದು ಬಂದ ದಾರಿಯನ್ನು ಸ್ಮರಿಸಿದರು. ಚಲುವರಾಯಸ್ವಾಮಿ ಸಚಿವರಾಗಿದ್ದರೂ ಸರಳತೆಯನ್ನು ಮೈಗೂಡಿಸಿಕೊಂಡಿರುವ ರಾಜಕಾರಣಿ. ಸದಾ ಜನಪರ ತುಡಿತ ಹೊಂದಿದ್ದಾರೆ. ಕೃಷಿ ಸಚಿವರಾಗಿ ರೈತಪರ ಕಾಳಜಿ ಹೊಂದಿದ್ದಾರೆ.ಭಗವಂತ ಸಚಿವ ಎನ್.ಚಲುವರಾಯಸ್ವಾಮಿ ಅವರಿಗೆ ಮತ್ತಷ್ಟು ಹೆಚ್ಚಿನ ಅಧಿಕಾರ, ಆಯಸ್ಸು ಮತ್ತು ಆರೋಗ್ಯ ನೀಡಲಿ ಎಂದು ಆಶಿಸಿದರು. ತಾಲೂಕು ಕಾಂಗ್ರೆಸ್ ಮುಖಂಡ ಬಿ.ಎಲ್.ದೇವರಾಜು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ.ನಾಗೇಂದ್ರ ಕುಮಾರ್, ಮುಖಂಡರಾದ ಕಿಕ್ಕೇರಿ ಸುರೇಶ್, ಎಂ.ಡಿ.ಕೃಷ್ಣಮೂರ್ತಿ, ರಾಜಯ್ಯ, ಇಲಿಯಾಸ್, ಲಕ್ಷ್ಮೀಪುರ ಚಂದ್ರೇಗೌಡ ಟಿ.ಎನ್.ದಿವಾಕರ್, ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ.ಶಶಿಧರ್ ಸೇರಿ ಹಲವು ಮುಖಂಡರು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.