ಸಾರಾಂಶ
ಸಿ.ಟಿ. ರವಿ ಅವರನ್ನು ಬೆಂಗಳೂರಿಗೆ ಪೊಲೀಸರು ಕರೆದೊಯ್ಯುತ್ತಿರುವ ಮಾಹಿತಿ ಪಡೆದ ಬಿಜೆಪಿಯ ನೂರಾರು ಕಾರ್ಯಕರ್ತರು ಬಂಕಾಪುರ ಟೋಲ್ ಬಳಿ ಜಮಾಯಿಸಿದ್ದರು. ಸಿ.ಟಿ. ರವಿ ಅವರಿದ್ದ ವಾಹನ ಬರುತ್ತಿದ್ದಂತೆ ಕಾರ್ಯಕರ್ತರು ಅವರಿಗೆ ಜೈಕಾರ ಹಾಕಿದರು.
ಹಾವೇರಿ: ರಾಜ್ಯ ಸರ್ಕಾರ ಸಿ.ಟಿ. ರವಿ ಅವರನ್ನು ಉಗ್ರಗಾಮಿಯಂತೆ ನಡೆಸಿಕೊಂಡಿದೆ. ಪೊಲೀಸರ ಮೇಲೆ ಒತ್ತಡ ಹಾಕಿ ಕೆಲಸ ಮಾಡಿಸಿಕೊಂಡಿದ್ದಾರೆ. ಅವರ ಮೇಲೆ ಹಲ್ಲೆ ಮಾಡಿದ್ದು, ಊಟ, ನಿದ್ದೆ ಮಾಡಲು ಬಿಡದೆ ಚಿತ್ರಹಿಂಸೆ ನೀಡಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಆರೋಪಿಸಿದರು.
ರಾಣಿಬೆನ್ನೂರು ತಾಲೂಕಿನ ಚಳಗೇರಿ ಟೋಲ್ ಬಳಿ ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ ಅವರು, ಪೊಲೀಸರು, ಸರ್ಕಾರದ ಈ ಕೃತ್ಯವನ್ನು ಬಿಜೆಪಿ ತೀವ್ರವಾಗಿ ಖಂಡಿಸುತ್ತೇವೆ. ಸಿ.ಟಿ. ರವಿ ಜತೆಗೆ ನಾವೆಲ್ಲರೂ ಇದ್ದೇವೆ ಎಂದು ಹೇಳಿದರು.ಮಾಜಿ ಸಚಿವ, ವಿಪ ಸದಸ್ಯ ಸಿ.ಟಿ. ರವಿ ಅವರಿಗೆ ಹೈಕೋರ್ಟ್‌ನಲ್ಲಿ ರಿಲೀಫ್ ಸಿಕ್ಕಿದೆ. ಸದ್ಯದಲ್ಲಿ ಬಿಡುಗಡೆಯಾಗುತ್ತಾರೆ ಎಂದು ಹೇಳಿದರು.
ಕಾರ್ಯಕರ್ತರಿಂದ ಜೈಕಾರ: ಸಿ.ಟಿ. ರವಿ ಅವರನ್ನು ಬೆಂಗಳೂರಿಗೆ ಪೊಲೀಸರು ಕರೆದೊಯ್ಯುತ್ತಿರುವ ಮಾಹಿತಿ ಪಡೆದ ಬಿಜೆಪಿಯ ನೂರಾರು ಕಾರ್ಯಕರ್ತರು ಬಂಕಾಪುರ ಟೋಲ್ ಬಳಿ ಜಮಾಯಿಸಿದ್ದರು. ಸಿ.ಟಿ. ರವಿ ಅವರಿದ್ದ ವಾಹನ ಬರುತ್ತಿದ್ದಂತೆ ಕಾರ್ಯಕರ್ತರು ಅವರಿಗೆ ಜೈಕಾರ ಹಾಕಿದರು. ಅಲ್ಲದೇ ಸರ್ಕಾರದ ನಡೆಯನ್ನು ಖಂಡಿಸಿದರು.