ಸಿ.ಟಿ.ಶಂಕರ್ ಹುಟ್ಟುಹಬ್ಬ: ಬೆಳ್ಳಿ ಕಿರೀಟ, ಬೆಳ್ಳಿ ಗದೆ ನೀಡಿ ಅಭಿನಂದನೆ

| Published : Jan 16 2025, 12:47 AM IST

ಸಿ.ಟಿ.ಶಂಕರ್ ಹುಟ್ಟುಹಬ್ಬ: ಬೆಳ್ಳಿ ಕಿರೀಟ, ಬೆಳ್ಳಿ ಗದೆ ನೀಡಿ ಅಭಿನಂದನೆ
Share this Article
  • FB
  • TW
  • Linkdin
  • Email

ಸಾರಾಂಶ

ಸಾರ್ವಜನಿಕ ಬದುಕಿನಲ್ಲಿ ಸಮಾಜ ಸೇವೆ ಮಾಡುತ್ತಿರುವ ಸಿ.ಟಿ.ಶಂಕರ್ ಅವರ ಭವಿಷ್ಯ ಮತ್ತಷ್ಟು ಉಜ್ವಲವಾಗಲಿ. ಮನುಷ್ಯ ಜೀವನದಲ್ಲಿ ಸಮಾಜಮುಖಿ ಕಾರ್ಯಗಳನ್ನು ಮಾಡುವ ವೇಳೆ ಕೆಲವರು ಅದಕ್ಕೆ ರಾಜಕೀಯ ಬಣ್ಣ ನೀಡುವುದು ಸರ್ವೇ ಸಾಮಾನ್ಯವಾಗಿದೆ. ಇದಕ್ಕೆ ಅವರು ಎದೆ ಗುಂದುವ ಅವಶ್ಯಕತೆ ಇಲ್ಲ.

ಕನ್ನಡಪ್ರಭ ವಾರ್ತೆ ಮದ್ದೂರು

ತಿಮ್ಮದಾಸ್ ಗ್ರೂಪ್ ಮಾಲೀಕ, ಸಮಾಜ ಸೇವಕ ಸಿ.ಟಿ.ಶಂಕರ್ ಅವರ ಹುಟ್ಟುಹಬ್ಬದ ಅಂಗವಾಗಿ ಬುಧವಾರ ಅಭಿಮಾನಿಗಳು ಬೆಳ್ಳಿ ಕಿರೀಟ ಜೋಡಿಸಿ, ಬೆಳ್ಳಿ ಗದೆ ನೀಡಿ ಅಭಿನಂದಿಸಿದರು.

ತಾಲೂಕಿನ ಕೆಸ್ತೂರು ಜಿಪಂ ವ್ಯಾಪ್ತಿಯ ಈಡಿಗರ ದೊಡ್ಡಿ ಗ್ರಾಮದಲ್ಲಿ ಶಾಸಕ ಕೆ.ಎಂ.ಉದಯ್, ಸಿ.ಟಿ.ಶಂಕರ್ ಅಭಿಮಾನಿ ಬಳಗ ಹಾಗೂ ಮುಗಿಲು ಸೇವಾ ಟ್ರಸ್ಟ್ ವತಿಯಿಂದ ನಡೆದ ಸಮಾರಂಭದಲ್ಲಿ ಮಾಜಿ ಸಂಸದ ಡಿ.ಕೆ.ಸುರೇಶ್, ಚನ್ನಪಟ್ಟಣ ಕ್ಷೇತ್ರದ ಶಾಸಕ ಸಿ.ಪಿ.ಯೋಗೇಶ್ವರ್, ಕುಣಿಗಲ್ ಶಾಸಕ ಡಾ.ರಂಗನಾಥ್ ಹಾಗೂ ಜನಪ್ರತಿನಿಧಿಗಳ ಸಮ್ಮುಖದಲ್ಲಿ ಸಿ.ಟಿ.ಶಂಕರ್ ಅವರಿಗೆ ಬೆಳ್ಳಿ ಕಿರೀಟ ತೊಡಿಸಿ ಬೆಳ್ಳಿ ಗದೆ ನೀಡಿ ಅದ್ಧೂರಿಯಾಗಿ ಸನ್ಮಾನಿಸಿ ಶುಭ ಹಾರೈಸಿದರು.

ಮಾಜಿ ಸಂಸದ ಡಿ.ಕೆ.ಸುರೇಶ್ ಮಾತನಾಡಿ, ಸಾರ್ವಜನಿಕ ಬದುಕಿನಲ್ಲಿ ಸಮಾಜ ಸೇವೆ ಮಾಡುತ್ತಿರುವ ಸಿ.ಟಿ.ಶಂಕರ್ ಅವರ ಭವಿಷ್ಯ ಮತ್ತಷ್ಟು ಉಜ್ವಲವಾಗಲಿ. ಮನುಷ್ಯ ಜೀವನದಲ್ಲಿ ಸಮಾಜಮುಖಿ ಕಾರ್ಯಗಳನ್ನು ಮಾಡುವ ವೇಳೆ ಕೆಲವರು ಅದಕ್ಕೆ ರಾಜಕೀಯ ಬಣ್ಣ ನೀಡುವುದು ಸರ್ವೇ ಸಾಮಾನ್ಯವಾಗಿದೆ. ಇದಕ್ಕೆ ಅವರು ಎದೆ ಗುಂದುವ ಅವಶ್ಯಕತೆ ಇಲ್ಲ ಎಂದರು. ಶಂಕರ್ ಅವರು ಕಾಂಗ್ರೆಸ್ ಪಕ್ಷದಲ್ಲಿ ಗುರುತಿಸಿಕೊಂಡಿದ್ದರೂ ಸಹ ಅವರ ಹುಟ್ಟುಹಬ್ಬಕ್ಕೆ ಜನರು ಪಕ್ಷಾತೀತವಾಗಿ ಆಗಮಿಸಿದ್ದಾರೆ. ಹೀಗಾಗಿ ಇದಕ್ಕೆ ರಾಜಕೀಯ ಬಣ್ಣ ಬೇಕಾಗಿಲ್ಲ ಎಂದರು.

ಚನ್ನಪಟ್ಟಣ ಕ್ಷೇತ್ರದ ಶಾಸಕ ಸಿ.ಪಿ.ಯೋಗೇಶ್ವರ್ ಮಾತನಾಡಿ, ಚನ್ನಪಟ್ಟಣ ಕ್ಷೇತ್ರದ ಉಪಚುನಾವಣೆಯಲ್ಲಿ ಮದ್ದೂರು ಕ್ಷೇತ್ರದ ಕಾಂಗ್ರೆಸ್ ನಾಯಕರು ಮತ್ತು ಕಾರ್ಯಕರ್ತರು ನನ್ನ ನೀರಾವರಿ ಯೋಜನೆಗಳನ್ನು ಮೆಚ್ಚಿ ಉಪಚುನಾವಣೆಯಲ್ಲಿ ಅಭೂರ್ತಪೂರ್ವಕ ಬೆಂಬಲ ನೀಡಿದ್ದಾರೆ ಎಂದು ಕೃತಜ್ಞತೆ ಸಲ್ಲಿಸಿದರು.

ಸಮಾರಂಭದಲ್ಲಿ ಶಾಸಕ ಕೆ.ಎಂ.ಉದಯ್ ಅಧ್ಯಕ್ಷತೆ ವಹಿಸಿದ್ದರು. ಮಂಡ್ಯ ಕ್ಷೇತ್ರದ ಶಾಸಕ ಪಿ.ರವಿಕುಮಾರ್, ವಿಧಾನ ಪರಿಷತ್ ಸದಸ್ಯ ದಿನೇಶ್ ಗೂಳಿಗೌಡ, ಕಾಂಗ್ರೆಸ್ ಮುಖಂಡ ಸ್ಟಾರ್ ಚಂದ್ರು, ಮದ್ದೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಿ. ಚೆಲುವರಾಜು, ಭಾರತಿನಗರ ಬ್ಲಾಕ್ ಅಧ್ಯಕ್ಷ ಅಣ್ಣೂರು ರಾಜೀವ್, ಮನ್ಮುಲ್ ಮಾಜಿ ಅಧ್ಯಕ್ಷ ಕದಲೂರು ರಾಮಕೃಷ್ಣ, ಕಾಂಗ್ರೆಸ್ ಅಭ್ಯರ್ಥಿ ಹರೀಶ್ ಬಾಬು, ಎಪಿಎಂಸಿ ಮಾಜಿ ಅಧ್ಯಕ್ಷ ಕೆ.ದಾಸೇಗೌಡ, ನಿವೃತ್ತ ಯೋಧ ಸಿಪಾಯಿ ಶ್ರೀನಿವಾಸ್, ಮುಖಂಡರಾದ ಕೆ.ಎಂ.ರವಿ, ಶಂಕರಲಿಂಗೇಗೌಡ, ಮುಗಿಲು ಸೇವಾ ಟ್ರಸ್ಟ್ ಕಾರ್ಯದರ್ಶಿ ಕದಲೂರು ಲೋಕೇಶ್, ಗ್ರಾಮ ಪಂಚಾಯಿತಿ ಅಧ್ಯಕ್ಷ ತಿಮ್ಮೇಗೌಡ ಮತ್ತಿತರರಿದ್ದರು.