ಲೋಕಸಭಾ ಕ್ಷೇತ್ರಕ್ಕೆ ಕೂಡ್ಲೂರು ಶ್ರೀಧರಮೂರ್ತಿ ಬಿಜೆಪಿ ಟಿಕೆಟ್ ಆಕಾಂಕ್ಷಿ

| Published : Feb 12 2024, 01:34 AM IST

ಲೋಕಸಭಾ ಕ್ಷೇತ್ರಕ್ಕೆ ಕೂಡ್ಲೂರು ಶ್ರೀಧರಮೂರ್ತಿ ಬಿಜೆಪಿ ಟಿಕೆಟ್ ಆಕಾಂಕ್ಷಿ
Share this Article
  • FB
  • TW
  • Linkdin
  • Email

ಸಾರಾಂಶ

ಮುಂಬರುವ ಚಾಮರಾಜನಗರ ಮೀಸಲು ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಪಕ್ಷದಿಂದ ನಾನು ಕೂಡ ಪ್ರಬಲ ಆಕಾಂಕ್ಷಿಯಾಗಿದ್ದು, ಪ್ರಧಾನಿ ಮೋದಿ ಅವರ ಬಲದಿಂದ ಈ ಬಾರಿಯೂ ಕ್ಷೇತ್ರದಲ್ಲಿ ಬಿಜೆಪಿ ಜಯಭೇರಿ ಬಾರಿಸಲಿದೆ ಎಂದು ಬಿಜೆಪಿ ಎಸ್ಸಿ ಮೋರ್ಚಾ ರಾಜ್ಯ ಸಮಿತಿ ಸದಸ್ಯ ಕೂಡ್ಲೂರು ಶ್ರೀಧರಮೂರ್ತಿ ತಿಳಿಸಿದರು.

ಕನ್ನಡಪ್ರಭ ವಾರ್ತೆ ಚಾಮರಾಜನಗರಮುಂಬರುವ ಚಾಮರಾಜನಗರ ಮೀಸಲು ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಪಕ್ಷದಿಂದ ನಾನು ಕೂಡ ಪ್ರಬಲ ಆಕಾಂಕ್ಷಿಯಾಗಿದ್ದು, ಪ್ರಧಾನಿ ಮೋದಿ ಅವರ ಬಲದಿಂದ ಈ ಬಾರಿಯೂ ಕ್ಷೇತ್ರದಲ್ಲಿ ಬಿಜೆಪಿ ಜಯಭೇರಿ ಬಾರಿಸಲಿದೆ ಎಂದು ಬಿಜೆಪಿ ಎಸ್ಸಿ ಮೋರ್ಚಾ ರಾಜ್ಯ ಸಮಿತಿ ಸದಸ್ಯ ಕೂಡ್ಲೂರು ಶ್ರೀಧರಮೂರ್ತಿ ತಿಳಿಸಿದರು. ನಗರದ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಭವನದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, 2004ರಲ್ಲಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡು ತಾಲೂಕು ಅಧ್ಯಕ್ಷನಾಗಿ, ಬಿಜೆಪಿಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳುವ ಜೊತೆಗೆ ಅತ್ಯಂತ ಹಿರಿಯ ಕಾರ್ಯಕರ್ತನಾಗಿದ್ದೇನೆ. ಪ್ರತಿ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸಿದ್ದೇನೆ. ಜೊತೆಗೆ ಪಕ್ಷ ವಹಿಸಿದ್ದ ತಾಲೂಕು ಅಧ್ಯಕ್ಷ, ಜಿಲ್ಲಾ ಕಾರ್ಯಕಾರಣಿ ಸದಸ್ಯ, ರಾಜ್ಯ ಕಾರ್ಯಕಾರಣಿ ಸದಸ್ಯನಾಗಿ ಉತ್ತಮ ಸೇವೆ ಸಲ್ಲಿಸಿದ್ದೇನೆ. ಪಕ್ಷದ ಶಿಸ್ತಿನ ಸಿಪಾಯಿಯಂತೆ ದುಡಿಯುತ್ತಿದ್ದು, ಈ ಬಾರಿ ವರಿಷ್ಠರು ನನಗೊಂದು ಅವಕಾಶ ಮಾಡಿಕೊಡುವಂತೆ ಮನವಿ ಮಾಡಿದರು. ಸಂಸದ ವಿ. ಶ್ರೀನಿವಾಸಪ್ರಸಾದ್ ರಾಜಕೀಯ ನಿವೃತ್ತಿ ಘೋಷಣೆ ಮಾಡಿದ್ದಾರೆ. ಅವರ ನಂತರ ನಾನು ಪಕ್ಷದಲ್ಲಿ ಹಿರಿತನ ಹೊಂದಿದ್ದು, ತಾಪಂ. ಮಾಜಿ ಸದಸ್ಯನಾಗಿ ರಾಜಕೀಯ ಅನುಭವವನ್ನು ಎಲ್ಲಾ ಜನಾಂಗದ ಪ್ರೀತಿ ವಿಶ್ವಾಸವನ್ನು ಗಳಿಸಿದ್ದೇನೆ. ಈಗ ಪಕ್ಷಕ್ಕೆ ಬಂದಿರುವ ಕೆಲವರು ನಮಗೆ ಟಿಕೆಟ್ ನೀಡಿ ಎನ್ನುತ್ತಿದ್ದಾರೆ. ಆದರೆ ನಾನು ಎಲ್ಲರಿಗಿಂತಲೂ ಮೊದಲು ಪಕ್ಷಕ್ಕೆ ಸೇರಿ ಹಿರಿತನವನ್ನು ಹೊಂದಿದ್ದೇನೆ. ಹೀಗಾಗಿ ಪಕ್ಷದ ವರಿಷ್ಠರು ಹಾಗೂ ಜಿಲ್ಲಾ ಸಮಿತಿ ನನ್ನ ಹೆಸರನ್ನು ಶಿಫಾರಸ್ಸು ಮಾಡುವ ಮೂಲಕ ಸ್ಥಳೀಯರಿಗೆ ಅವಕಾಶ ನೀಡಬೇಕು ಎಂದು ಮನವಿ ಮಾಡಿದರು. ಮೋದಿ ಸಾಧನೆ ಕರ ಪತ್ರ ಮನೆಮನೆಗೆ ಹಂಚಿಕೆ: ಪ್ರಧಾನಿ ಮೋದಿ ಅವರು ಕಳೆದ 10 ವರ್ಷಗಳ ಆಡಳಿತದ ಸಾಧನೆ ಹೊಂದಿರುವ ಕರಪತ್ರವನ್ನು ಕೂಡ್ಲೂರು ಶ್ರೀಧರಮೂರ್ತಿ ಬಿಡುಗಡೆ ಮಾಡಿದರು. ವಿಶ್ವನಾಯಕ ಮೋದಿ ಪ್ರಧಾನಿಯಾಗಿರುವುದು ನಮ್ಮ ಪುಣ್ಯ. 2024ರ ಚುನಾವಣೆಯಲ್ಲಿ ಹೆಚ್ಚಿನ ಬಹುಮತ ಪಡೆದು ಮೋದಿ ಮತ್ತೊಮ್ಮೆ ಪ್ರಧಾನಿಯಾಗಲಿದ್ದಾರೆ. ರಾಜ್ಯ 28 ಕ್ಷೇತ್ರಗಳಲ್ಲಿ ಗೆಲುವು ಸಾಧಿಸುವ ಮೂಲಕ ಮೋದಿ ಅವರಿಗೆ ಕೊಡುಗೆ ನೀಡಬೇಕು. ಚಾಮರಾಜನಗರ ಕ್ಷೇತ್ರದಲ್ಲಿ ಬಿಜೆಪಿ ಜಯಗಳಿಸಲಿದೆ. ಅವರ ಸಾಧನೆಯನ್ನು ಪ್ರತಿ ಮನೆ ಮನೆಗೆ ತಲುಪಿಸುವ ಮೂಲಕ ನಾವೆಲ್ಲರೂ ಒಗ್ಗಟ್ಟಿನಿಂದ ಶ್ರಮಿಸೋಣ. ಈಗಾಗಲೇ ಅವರ ಸಾಧನೆಯ ಅಂಶಗಳ ಕರಪತ್ರವನ್ನು ಮನೆ ಮನೆಗೆ ತಲುಪಿಸಲು ಶ್ರಮಿಸುತ್ತಿರುವುದಾಗಿ ಶ್ರೀಧರಮೂರ್ತಿ ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಮುಖಂಡರಾದ ಮಹದೇವಯ್ಯ ಹೊಂಗನೂರು, ನಲ್ಲೂರು ಶ್ರೀನಾಥ್, ಸಿ. ಚಂದ್ರಶೇಖರ್, ಜಯಶಂಕರ್, ಶ್ರೀನಿವಾಸ್ ಅಗ್ರಹಾರ ಇದ್ದರು.