ಸಾರಾಂಶ
ಮಕ್ಕಳು ಶಾಲಾ ರಜೆ ಅವಧಿಯಲ್ಲಿ ಈಜಾಡಲು ಹೋಗಿ ನೀರಿನಲ್ಲಿ ಮುಳುಗಿ ಸಾವನ್ನಪ್ಪುತ್ತಿರುವ ಘಟನೆಗಳು ನಡೆಯುತ್ತಿವೆ. ಈ ಬಗ್ಗೆ ಪೋಷಕರು ಮಕ್ಕಳ ಬಗ್ಗೆ ಎಚ್ಚರ ವಹಿಸಬೇಕು. ಮಕ್ಕಳು ಮೊಬೈಲ್‌ಗಳಿಗೆ ದಾಸರಾಗಿ ಮಾನಸಿಕವಾಗಿ ಕಿನ್ನತೆಗೆ ಒಳಗಾಗುತ್ತಿದ್ದಾರೆ. ಮಕ್ಕಳ ಬಗ್ಗೆ ನಿಗಾವಹಿಸಬೇಕು.
ಕನ್ನಡಪ್ರಭ ವಾರ್ತೆ ಕೆ.ಎಂ.ದೊಡ್ಡಿ
ವಿದ್ಯಾರ್ಥಿಗಳಿಗೆ ಸರ್ಕಾರಿ ಶಾಲಾ ಶುಲ್ಕವನ್ನು ಪ್ರತಿ ವರ್ಷದಂತೆ ಈ ವರ್ಷವು ಕದಲೂರು ಉದಯ್ ಚಾರಿಟಬಲ್ ಟ್ರಸ್ಟ್ ವತಿಯಿಂದ ಪಾವತಿಸಲಾಗುವುದು ಎಂದು ಶಾಸಕ ಕೆ.ಎಂ.ಉದಯ್ ಭರವಸೆ ನೀಡಿದರು.ಸಮೀಪದ ಗುಡಿಗೆರೆ ಸರ್ಕಾರಿ ಶಾಲಾ ಆವರಣದಲ್ಲಿ ತಾಪಂ ಮತ್ತು ಜಿಪಂ ಮತ್ತು ಗ್ರಾಪಂನಿಂದ ಆಯೋಜಿಸಿದ್ದ ಮಕ್ಕಳ ಬೇಸಿಗೆ ಶಿಬಿರಕ್ಕೆ ಚಾಲನೆ ನೀಡಿ ಮಾತನಾಡಿ, ಸರ್ಕಾರಿ ಶಾಲೆಯಲ್ಲೂ ಸಹ ಗುಣ ಮಟ್ಟದ ಶಿಕ್ಷಣ ದೊರೆಯುತ್ತಿದೆ. ಶಾಲೆಗಳ ಬಲವರ್ಧನೆಗೆ ಅಗತ್ಯ ಕ್ರಮ ವಹಿಸಲಾಗುವುದು ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಟ್ರಸ್ಟ್‌ನಿಂದ ಪ್ರಸಕ್ತ ಸಾಲಿನಲ್ಲಿ ಶಾಲಾ ಮಕ್ಕಳಿಗೆ ಉಚಿತ ನೋಟ್ ಬುಕ್, ಬ್ಯಾಗ್ ಮತ್ತು ಪಠ್ಯೇತರ ಪರಿಕರಗಳನ್ನು ವಿತರಿಸಲಾಗುವುದು. ಜತೆಗೆ ವಿದ್ಯಾರ್ಥಿಗಳಿಗೆ ಗುಣ ಮಟ್ಟದ ಶಿಕ್ಷಣ ನೀಡಲು ಶಿಕ್ಷಕರಿಗೆ ವಿಶೇಷ ತರಬೇತಿ ನೀಡಲಾಗುತ್ತಿದೆ ಎಂದರು.ಮಕ್ಕಳು ಶಾಲಾ ರಜೆ ಅವಧಿಯಲ್ಲಿ ಈಜಾಡಲು ಹೋಗಿ ನೀರಿನಲ್ಲಿ ಮುಳುಗಿ ಸಾವನ್ನಪ್ಪುತ್ತಿರುವ ಘಟನೆಗಳು ನಡೆಯುತ್ತಿವೆ. ಈ ಬಗ್ಗೆ ಪೋಷಕರು ಮಕ್ಕಳ ಬಗ್ಗೆ ಎಚ್ಚರ ವಹಿಸಬೇಕು. ಮಕ್ಕಳು ಮೊಬೈಲ್‌ಗಳಿಗೆ ದಾಸರಾಗಿ ಮಾನಸಿಕವಾಗಿ ಕಿನ್ನತೆಗೆ ಒಳಗಾಗುತ್ತಿದ್ದಾರೆ. ಮಕ್ಕಳ ಬಗ್ಗೆ ನಿಗಾವಹಿಸಬೇಕು. ಟಿವಿ ಮೋಬೈಲ್‌ನಿಂದ ಮಕ್ಕಳನ್ನು ದೂರವಿಟ್ಟು ದಿನ ಪತ್ರಿಕೆಗಳನ್ನು ಓದಿಸುವತ್ತ ಗಮನ ಹರಿಸಬೇಕು ಎಂದು ಸಲಹೆ ನೀಡಿದರು.
ಕಾರ್ಯಕ್ರಮದಲ್ಲಿ ಸೌಭಾಗ್ಯ ರಾಮಣ್ಣ ಅಧ್ಯಕ್ಷತೆ ವಹಿಸಿದ್ದರು. ಈ ವೇಳೆ ಜಿಪಂ ಮಾಜಿ ಸದಸ್ಯ ಎ.ಎಸ್.ರಾಜೀವ್, ತಾಪಂ ಇಒ ರಾಮಲಿಂಗಯ್ಯ, ಸ್ಥಾಯಿ ಸಮಿತಿ ಸಹಾಯಕ ನಿರ್ದೇಶಕ ಮಂಜುನಾಥ್, ಪಿಡಿಒ ಸುಧಾ, ನೋಡಲ್ ಅಧಿಕಾರಿ ಭಾಗ್ಯಲಕ್ಷ್ಮಿ, ಮುಖ್ಯ ಶಿಕ್ಷಕಿ ಸುನೀತಾ, ಗ್ರಾಪಂ ಸದಸ್ಯರಾದ ಪುಟ್ಟರಾಮು, ಕೆ.ವಿ.ಶ್ರೀನಿವಾಸ್, ಮಂಜುನಾಥ್, ವಿಜಯ, ಸವಿತಾ, ಮಾಲಾ ಇದ್ದರು.