ವಿದ್ಯಾರ್ಥಿ ದಿಸೆಯಲ್ಲಿಯೇ ರಾಷ್ಟ್ರಪ್ರೇಮ ಬೆಳೆಸಿಕೊಳ್ಳಿ

| Published : Jul 27 2024, 12:45 AM IST

ವಿದ್ಯಾರ್ಥಿ ದಿಸೆಯಲ್ಲಿಯೇ ರಾಷ್ಟ್ರಪ್ರೇಮ ಬೆಳೆಸಿಕೊಳ್ಳಿ
Share this Article
  • FB
  • TW
  • Linkdin
  • Email

ಸಾರಾಂಶ

ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಕಾರ್ಗಿಲ್ ವಿಜಯ ದಿವಸ್

ಕನ್ನಡಪ್ರಭ ವಾರ್ತೆ ತಿಪಟೂರು

ವಿದ್ಯಾರ್ಥಿಗಳು ವಿದ್ಯಾರ್ಥಿ ದಿಸೆಯಲ್ಲಿಯೇ ರಾಷ್ಟ್ರಪ್ರೇಮವನ್ನು ಬೆಳೆಸಿಕೊಂಡು ದೇಶ ಸೇವೆ ಮಾಡಬೇಕೆಂದು ನಿವೃತ್ತ ಯೋಧ ಹಾಗೂ ಮತ್ತಿಹಳ್ಳಿ ಗ್ರಾಮ ಪಂಚಾಯಿತಿ ಅಭಿವೃದ್ದಿ ಅಧಿಕಾರಿ ಶಿವರಾಜ್ ಕರೆ ನೀಡಿದರು.ನಗರದ ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಕಾಲೇಜಿನ ಇತಿಹಾಸ ಕ್ಲಬ್‌ನಿಂದ ಆಯೋಜಿಸಿದ್ದ ಕಾರ್ಗಿಲ್ ವಿಜಯ ದಿವಸ ಕಾರ್ಯಕ್ರಮದಲ್ಲಿ ಮಾತನಾಡುತ್ತಾ, ವಿದ್ಯಾರ್ಥಿಗಳು ದೇಶಪ್ರೇಮ ಬೆಳೆಸಿಕೊಂಡು ದೇಶಸೇವೆಗೆ ಮುಂದಾಗಬೇಕೆಂದ ಅವರು ತಮ್ಮ ಸೇವಾವಧಿಯ ಅನುಭವಗಳನ್ನು ತಿಳಿಸುತ್ತಾ ಕಾರ್ಗಿಲ್ ಯುದ್ದದಲ್ಲಿ ವೀರ ಮರಣ ಹೊಂದಿದ ಯೋಧರಿಗೆ ನಮನಗಳನ್ನು ಸಲ್ಲಿಸಿದರು. ತಾಲೂಕು ಕಸಾಪ ಅಧ್ಯಕ್ಷರಾದ ಬಸವರಾಜಪ್ಪ ಮಾತನಾಡಿ ವಿದ್ಯಾರ್ಥಿಗಳು ರಕ್ಷಣಾ ಪಡೆಗಳಾದ ಭೂಸೇನೆ, ವಾಯುಪಡೆ ಹಾಗೂ ನೌಕರ ಪಡೆಗಳನ್ನು ಸೇರಿ ಭಾರತಾಂಬೆಯ ಸೇವೆ ಮಾಡಬೇಕೆಂದರು. ಪ್ರಾಂಶುಪಾಲ ಎಂ.ಡಿ. ಶಿವಕುಮಾರ್ ಮಾತನಾಡಿ 1999ರಲ್ಲಿ ಭಾರತದ ರಕ್ಷಣಾ ಪಡೆಗಳು ಪಾಕಿಸ್ತಾನದ ಸೈನ್ಯವನ್ನು ಸೋಲಿಸಿ ವಿಜಯ ಪತಾಕೆ ಹಾರಿಸಿ ಜುಲೈ26ಕ್ಕೆ 25 ವರ್ಷಗಳು ತುಂಬಿದ ಪ್ರಯುಕ್ತ ಈ ವಿಜಯ ದಿವಸವನ್ನು ರಜತ ಮಹೋತ್ಸವವಾಗಿ ಇಡೀ ದೇಶಾದ್ಯಂತ ಸಂಭ್ರಮದಿಂದ ಆಚರಿಸುತ್ತಿದ್ದಾರೆ. ಯುವಶಕ್ತಿ ದೇಶಾಭಿಮಾನ ಬೆಳೆಸಿಕೊಂಡು ದೇಶಸೇವೆ ಮಾಡುವ ಸಂಕಲ್ಪವನ್ನು ಕೈಗೊಳ್ಳುವಂತೆ ಕರೆ ನೀಡಿದರು.

ಈ ಸಂದರ್ಭದಲ್ಲಿ ನಿವೃತ್ತ ಯೋಧರಾದ ದೇವರಾಜ್, ಶಿವರಾಜ್‌ರನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ಉಪನ್ಯಾಸಕರಾದ ಪ್ರಕಾಶ್, ಪ್ರಶಾಂತ್, ಅಭಿಷೇಕ, ಷಡಕ್ಷರಿ ಮತ್ತಿತರಿದ್ದರು.