ವಿದ್ಯಾರ್ಥಿಗಳಲ್ಲಿ ಓದುವ ಹವ್ಯಾಸ ಬೆಳೆಸುವ ಹಾಗೂ ಜ್ಞಾನದ ದಾಹವನ್ನು ಹೆಚ್ಚಿಸುವ ಉದ್ದೇಶದಿಂದ ನಿರ್ಮಿಸಲಾಹಿಗೆ, ಗ್ರಂಥಾಲಯವು ಶಾಲೆಯ ಶೈಕ್ಷಣಿಕ ಬೆಳವಣಿಗೆಗೆ ಮಹತ್ವವಾಗಿದೆ. ವಿದ್ಯಾರ್ಥಿಗಳು ಓದುವ ಅಭ್ಯಾಸ ಬೆಳೆಸಿಕೊಳ್ಳುವ ಜೊತೆಗೆ ನಾಯಕತ್ವ ಗುಣಗಳನ್ನು ರೂಢಿಸಿಕೊಳ್ಳಬೇಕು.
ಕನ್ನಡಪ್ರಭ ವಾರ್ತೆ ಶ್ರೀರಂಗಪಟ್ಟಣ
ಪುಸ್ತಕಗಳು ಜ್ಞಾನದ ಭಂಡಾರ. ಪ್ರತಿಯೊಬ್ಬ ವಿದ್ಯಾರ್ಥಿಯೂ ಗ್ರಂಥಾಲಯದ ಪುಸ್ತಕಗಳನ್ನು ಓದುವ ಅಭ್ಯಾಸವನ್ನು ಬೆಳೆಸಿಕೊಳ್ಳಬೇಕು ಎಂದು ಕಲಿಸು ಫೌಂಡೇಶನ್ ಕಾರ್ಯಕರ್ತ ಮನೋಜ್ ಹೇಳಿದರು.ಪಟ್ಟಣದ ಬಾಲಕಿಯರ ಶಾಲೆಗೆ ಕಲಿಸು ಫೌಂಡೇಶನ್ ಹಾಗೂ ಕ್ಯೂಬರ್ ಲೂಬ್ರಿಕೇಷನ್ ಸಂಸ್ಥೆಗಳ ಸಹಯೋಗದಲ್ಲಿ ಉಚಿತವಾಗಿ ನಿರ್ಮಿಸಿರುವ ನೂತನ ಗ್ರಂಥಾಲಯವನ್ನು ಉದ್ಘಾಟಿಸಿ ಮಾತನಾಡಿದರು.
ವಿದ್ಯಾರ್ಥಿಗಳಲ್ಲಿ ಓದುವ ಹವ್ಯಾಸ ಬೆಳೆಸುವ ಹಾಗೂ ಜ್ಞಾನದ ದಾಹವನ್ನು ಹೆಚ್ಚಿಸುವ ಉದ್ದೇಶದಿಂದ ನಿರ್ಮಿಸಲಾಹಿಗೆ, ಗ್ರಂಥಾಲಯವು ಶಾಲೆಯ ಶೈಕ್ಷಣಿಕ ಬೆಳವಣಿಗೆಗೆ ಮಹತ್ವವಾಗಿದೆ. ವಿದ್ಯಾರ್ಥಿಗಳು ಓದುವ ಅಭ್ಯಾಸ ಬೆಳೆಸಿಕೊಳ್ಳುವ ಜೊತೆಗೆ ನಾಯಕತ್ವ ಗುಣಗಳನ್ನು ರೂಢಿಸಿಕೊಂಡು ತಾವು ಪಡೆದ ಜ್ಞಾನವನ್ನು ಇತರರೊಂದಿಗೆ ಹಂಚಿಕೊಳ್ಳುವ ಮನೋಭಾವ ಹೊಂದಬೇಕು ಎಂದರು.ಮುಖ್ಯ ಶಿಕ್ಷಕ ನಾಗಣ್ಣ ಮಾತನಾಡಿ, ಶಿಕ್ಷಣದ ಜೊತೆಗೆ ಉತ್ತಮ ವ್ಯಕ್ತಿತ್ವ ರೂಪಿಸಿಕೊಳ್ಳಲು ಪುಸ್ತಕಗಳ ಓದುವ ಹವ್ಯಾಸ ಅತ್ಯಗತ್ಯ. ಗ್ರಂಥಾಲಯವು ವಿದ್ಯಾರ್ಥಿಗಳ ಭವಿಷ್ಯ ರೂಪಿಸುವ ಜ್ಞಾನ ಮಂದಿರವಾಗಿದೆ. ಪ್ರತಿಯೊಬ್ಬ ವಿದ್ಯಾರ್ಥಿಯೂ ಜ್ಞಾನ ಪಡೆದುಕೊಳ್ಳಬೇಕು ಎಂದರು.
ಕಾರ್ಯಕ್ರಮದಲ್ಲಿ ಕ್ಯೂಬರ್ ಲೂಬ್ರಿಕೇಷನ್ ಸಂಸ್ಥೆಯ ಅಕ್ಷಯ್ ಕುಮಾರ್, ಶಿಕ್ಷಕರು ಹಾಗೂ ತಾಲೂಕು ನೌಕರರ ಸಂಘದ ಅಧ್ಯಕ್ಷರಾದ ಸಿ.ಜೆ.ಶ್ರೀನಿವಾಸ್, ಪ್ರತಿಮಾ, ಶಾಲೆಯ ಹಿರಿಯ ವಿದ್ಯಾರ್ಥಿ ಶಂಕರ್, ಲಕ್ಷ್ಮಿ ಶ್ರೀ ಸೇರಿದಂತೆ ಶಾಲಾ ವಿದ್ಯಾರ್ಥಿಗಳು ಭಾಗವಹಿಸಿದ್ದರು.ಶ್ರೀಮಹಾಲಕ್ಷ್ಮೀ ದೇವಾಲಯದಲ್ಲಿ ಆ.21ಕ್ಕೆ ವರಮಹಾಲಕ್ಷ್ಮಿ ಪೂಜೆ
ಕನ್ನಡಪ್ರಭ ವಾರ್ತೆ ಮಂಡ್ಯನಗರದ ಪೇಟೆ ಬೀದಿ ಶ್ರೀನಿವಾಸಸ್ವಾಮಿ ದೇವಸ್ಥಾನದ ರಸ್ತೆಯಲ್ಲಿರುವ ಶ್ರೀಮಹಾಲಕ್ಷ್ಮಿದೇವಿ ದೇವಾಲಯದಲ್ಲಿ ಆ.21ರಂದು ವರಮಹಾಲಕ್ಷ್ಮಿ ಹಬ್ಬದ ಅಂಗವಾಗಿ ವಿಶೇಷ ಪೂಜಾ ಕಾರ್ಯಕ್ರಮಗಳನ್ನು ಏರ್ಪಡಿಸಲಾಗಿದೆ.ಆ.21ರ ಶುಕ್ರವಾರ ಬೆಳಿಗ್ಗೆ 6 ಗಂಟೆಗೆ ಪಂಚಾಮೃತಾಭಿಷೇಕ, ಹೂ ತೋಮಾಲೆ ಅಲಂಕಾರ ಪೂಜೆ, ತೀರ್ಥ ಪ್ರಸಾದ ವಿನಿಯೋಗ ಏರ್ಪಡಿಸಲಾಗಿದೆ. ಬಳಿಕ ಎಂ.ವೈ.ಕುಮಾರ್ ತಂಡದಿಂದ ಸ್ಯಾಕ್ಸೋಫೋನ್ ವಾದನ, ನಂತರ ಎಂ.ಎನ್.ಯೋಗೇಶ್, ನಂದೀಶ್ ಮತ್ತು ತಂಡದವರಿಂದ ಸ್ಯಾಕ್ಸೋಫೋನ್ ವಾದನ ಕಾರ್ಯಕ್ರಮ ನಡೆಯಲಿದೆ.ಸಂಜೆ 6.30ಕ್ಕೆ ದಾಸವಾಣಿ ಸಿ.ಕೆ.ಮಂಜುನಾಥ್, ಪಿಟೀಲು ಗುರುಮೂರ್ತಿ ತಂಡದಿಂದ ಸಂಗೀತ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ ಎಂದು ಶ್ರೀಮಹಾಲಕ್ಷ್ಮಿದೇವಿ ದೇವಸ್ಥಾನ ಟ್ರಸ್ಟ್ ಪ್ರಕಟಣೆ ತಿಳಿಸಿದೆ.