ಸಾರಾಂಶ
ಜಿಲ್ಲಾ ಮತ್ತು ತಾಲೂಕು ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ 69ನೇ ಕನ್ನಡ ರಾಜ್ಯೋತ್ಸವ ಅಂಗವಾಗಿ ಚನ್ನಬಸಪ್ಪ ಸಭಾಂಗಣದಲ್ಲಿ ಸೋಮವಾರ ‘ಸಾಹಿತ್ಸೋತ್ಸವ 2024’ ಕಾರ್ಯಕ್ರಮ ನಡೆಯಿತು.
ಕನ್ನಡಪ್ರಭ ವಾರ್ತೆ ಸೋಮವಾರಪೇಟೆ
ಜಿಲ್ಲಾ ಮತ್ತು ತಾಲೂಕು ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ 69ನೇ ಕನ್ನಡ ರಾಜ್ಯೋತ್ಸವ ಅಂಗವಾಗಿ ಚನ್ನಬಸಪ್ಪ ಸಭಾಂಗಣದಲ್ಲಿ ಸೋಮವಾರ ಆಯೋಜಿಸಿದ್ದ ‘ಸಾಹಿತ್ಸೋತ್ಸವ 2024’ ಅನ್ನು ಪರಿಷತ್‌ನ ತಾಲೂಕು ಅಧ್ಯಕ್ಷ ಎಸ್.ಡಿ. ವಿಜೇತ್ ಉದ್ಘಾಟಿಸಿದರು.ನಂತರ ಅವರು ಮಾತನಾಡಿ, ಬಾಲ್ಯದಲ್ಲೇ ಕನ್ನಡ ಸಾಹಿತ್ಯವನ್ನು ವಿದ್ಯಾರ್ಥಿಗಳು ಓದುವ ಹವ್ಯಾಸವನ್ನು ಬೆಳಸಿಕೊಳ್ಳಬೇಕು. ಕಥೆ, ಕವನಗಳನ್ನು ಬರೆಯಲು ಪ್ರಯತ್ನ ಮಾಡಿದರೆ, ಮುಂದೊಂದು ದಿನ ಸಾಹಿತಿ, ಕವಿಗಳು ಆಗಬಹುದು ಎಂದು ಹೇಳಿದರು. ಮಕ್ಕಳ ಪ್ರತಿಭೆಯನ್ನು ಗುರುತಿಸಿ, ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಕಸಾಪ ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ ಎಂದು ಹೇಳಿದರು.ವೇದಿಕೆಯಲ್ಲಿ ಪರಿಷತ್‌ನ ಮಾಜಿ ಅಧ್ಯಕ್ಷರಾದ ಜೆ.ಸಿ. ಶೇಖರ್, ಎಚ್.ಜೆ. ಜವರಪ್ಪ, ಮುಖ್ಯ ಶಿಕ್ಷಕಿ ಯಶೋದಮ್ಮ, ಪದಾಧಿಕಾರಿಗಳಾದ ಜಲಕಾಳಪ್ಪ, ನಂಗಾರು ಕೀರ್ತಿ ಪ್ರಸಾದ್, ವಸಂತಿ ರವೀಂದ್ರ ಇದ್ದರು. ಉಪನ್ಯಾಸಕರಾದ ಡಿ.ಪಿ. ಸತೀಶ್, ಚಿತ್ರಕಲಾ ಶಿಕ್ಷಕ ಎಚ್.ಆರ್. ಶೇಖರ್ ಇದ್ದರು. ಶಾಲಾ ಕಾಲೇಜು ವಿದ್ಯಾರ್ಥಿಗಳು ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿ ಸಂಭ್ರಮಿಸಿದರು.