ಸಾರಾಂಶ
ಹಿರಿಯೂರು: ವಿದ್ಯಾರ್ಥಿಗಳಲ್ಲಿ ಸೇವಾ ಮನೋಭಾವ ತುಂಬಾ ಮುಖ್ಯ. ವಿದ್ಯಾರ್ಥಿಗಳು ಶಿಕ್ಷಣದ ಜೊತೆಗೆ ಸೇವಾ ಮನೋಭಾವವನ್ನು ಬೆಳೆಸಿಕೊಳ್ಳಬೇಕು ಎಂದು ವೇದಾವತಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ಸಂಚಾಲಕ ಡಾ.ಎನ್.ಬಿ.ಗಟ್ಟಿ ಹೇಳಿದರು.

ನಗರದ ಹುಳಿಯಾರು ರಸ್ತೆ ಬಳಿಯಿರುವ ಶನೇಶ್ವರಸ್ವಾಮಿ ದೇವಾಲಯದ ಆವರಣದಲ್ಲಿ ವೇದಾ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ವತಿಯಿಂದ ಸ್ವಚ್ಛತೆಯೇ ಸೇವೆ ಎಂಬ ಕಾರ್ಯಕ್ರಮಡಿಯಲ್ಲಿ ಹಮ್ಮಿಕೊಂಡಿದ್ದ ಸ್ವಚ್ಛತಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.ವಿದ್ಯಾರ್ಥಿಗಳು ಶಿಕ್ಷಣದ ಜೊತೆಗೆ ವಿದ್ಯಾರ್ಥಿ ದೆಸೆಯಲ್ಲಿಯೇ ಸೇವಾ ಮನೋಭಾವ ಬೆಳೆಸಿಕೊಳ್ಳಬೇಕು. ಸೇವೆ ಎನ್ನುವುದು ಆತ್ಮ ತೃಪ್ತಿ ನೀಡುವ ಕಾರ್ಯವಾಗಿದ್ದು, ಮಕ್ಕಳು ವಿದ್ಯಾಭ್ಯಾಸದ ಅವಧಿಯಿಂದಲೇ ಸೇವೆಯ ಮಹತ್ವ ಅರಿತರೆ ಒಳ್ಳೆಯದು. ಅದರಲ್ಲೂ ಮುಖ್ಯವಾಗಿ ಸ್ವಚ್ಛತೆಗೆ ಆದ್ಯತೆ ನೀಡಬೇಕು. ಶಾಲೆ, ಕಾಲೇಜು ಸೇರಿದಂತೆ ಮನೆಗಳ ಬಳಿಯಲ್ಲಿ ವಿದ್ಯಾರ್ಥಿಗಳು ಸ್ವಚ್ಛತೆಯ ಬಗ್ಗೆ ಗಮನ ಹರಿಸಿ ಸ್ವಚ್ಛ ಹಾಗೂ ಸುಂದರ ಪರಿಸರಕ್ಕೆ ಆದ್ಯತೆ ನೀಡಬೇಕು ಎಂದರು.
ಇದೇ ವೇಳೆ ರಾಷ್ಟ್ರೀಯ ಸೇವಾ ಯೋಜನೆಯ ವಿದ್ಯಾರ್ಥಿಗಳು ಸಾರ್ವಜನಿಕರ ಜೊತೆಗೂಡಿ ಶನೇಶ್ವರ ದೇವಾಲಯದ ಸುತ್ತಮುತ್ತ ಬೆಳೆದಿದ್ದ ಗಿಡ ಗಂಟೆಗಳನ್ನು ತೆರವುಗೊಳಿಸಿ ಪ್ಲಾಸ್ಟಿಕ್ ಸಾಮಗ್ರಿಗಳನ್ನು, ಕಸ, ಕಡ್ಡಿಗಳನ್ನು ಆಯ್ದು ಸ್ವಚ್ಛತಾ ಕಾರ್ಯಕ್ರಮ ನಡೆಸಿದರು.ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಚಾರ್ಯ ಪ್ರೊ.ಡಿ.ಆರ್.ಹನುಮಂತರಾಯ, ಪ್ರಾಧ್ಯಾಪಕರಾದ ಡಾ.ಅಣ್ಣಪ್ಪ ಸ್ವಾಮಿ, ಡಾ.ಧನಂಜಯ ಹಾಗೂ ವಿದ್ಯಾರ್ಥಿಗಳು ಮತ್ತು ಬಡಾವಣೆಯ ಸಾರ್ವಜನಿಕರು ಉಪಸ್ಥಿತರಿದ್ದರು.