ಸಾರಾಂಶ
ಉಡುಪಿಯ ನೇತ್ರ ಜ್ಯೋತಿ ಕಾಲೇಜಿನಲ್ಲಿ ಉಡುಪಿ ಜಿಲ್ಲಾಮಟ್ಟದ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳ ಸಾಂಸ್ಕೃತಿಕ ಸ್ಪರ್ಧೆ ನಡೆಯಿತು.
ಕನ್ನಡಪ್ರಭ ವಾರ್ತೆ ಉಡುಪಿ
ಸಾಂಸ್ಕೃತಿಕ ಸ್ಪರ್ಧೆಗಳು ವಿದ್ಯಾರ್ಥಿಗಳ ಸೃಜನಶೀಲತೆಯನ್ನು ಹೆಚ್ಚಿಸುತ್ತದೆ ಮಾತ್ರವಲ್ಲದೇ ವ್ಯಕ್ತಿಯ ಒತ್ತಡವನ್ನು ಕಡಿಮೆ ಮಾಡುತ್ತದೆ ಎಂದು ವಿದ್ವಾನ್ ಮಧೂರು ಬಾಲಸುಬ್ರಹ್ಮಣ್ಯಂ ಹೇಳಿದರು.ಅವರು ಉಡುಪಿಯ ನೇತ್ರ ಜ್ಯೋತಿ ಕಾಲೇಜಿನಲ್ಲಿ ನಡೆದ ಉಡುಪಿ ಜಿಲ್ಲಾಮಟ್ಟದ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳ ಸಾಂಸ್ಕೃತಿಕ ಸ್ಪರ್ಧೆಗಳನ್ನು ಉದ್ಘಾಟಿಸಿ ಮಾತನಾಡಿದರು.ಮುಖ್ಯ ಅತಿಥಿ, ಕಾಂತರಾ ಸಿನಿಮಾ ನಟಿ ಮಾನಸಿ ಸುಧೀರ್ ಮಾತನಾಡಿ, ಇಂತಹ ಸ್ಪರ್ಧೆಗಳು ನಡೆಯುತ್ತಿದ್ದರೆ ವಿದ್ಯಾರ್ಥಿಗಲ್ಲಿ ಸುಪ್ತವಾಗಿ ಅಡಗಿರುವ ಪ್ರತಿಭೆಗಳನ್ನು ಹೊರತೆಗೆಯಲು ಸಾಧ್ಯ ಎಂದರು.ಕಾಲೇಜಿನ ಅಧ್ಯಕ್ಷೆ ರಶ್ಮೀ ಕೃಷ್ಣಪ್ರಸಾದ್ ಅಧ್ಯಕ್ಷತೆ ವಹಿಸಿ ಮಾತನಾಡಿ, ಓದಿನ ಜೊತೆಗೆ ವಿದ್ಯಾರ್ಥಿಗಳು ಸಾಂಸ್ಕೃತಿಕ ಚಟುವಟಿಕೆಗಲ್ಲಿ ಭಾಗವಹಿಸಬೇಕು. ಆ ಮೂಲಕ ಪರಿಪೂರ್ಣ ವ್ಯಕ್ತಿಯಾಗಲು ಸಾಧ್ಯ ಎಂದು ಹೇಳಿದರು.ವೇದಿಕೆಯಲ್ಲಿ ಕಾಲೇಜಿನ ಸಿಓಓ ಡಾ.ಗೌರಿ ಪ್ರಭು ಉಪಸ್ಥಿತರಿದ್ದರು. ಮಾಧವ ಪೂಜಾರಿ ಸ್ವಾಗತಿಸಿದರು. ಐಶ್ವರ್ಯ ವಂದಿಸಿದರು. ಐಶ್ವರ್ಯ ಕಾರ್ಯಕ್ರಮ ನಿರೂಪಿಸಿದರು.