ಸಾರಾಂಶ
ಮಂಡಲಮಟ್ಟದ ಪ್ರತಿಭಾ ಪ್ರದರ್ಶನ ಹಾಗೂ ಕ್ರೀಡೋತ್ಸವದಲ್ಲಿ ಪಾಲ್ಗೊಂಡ ವಿದ್ಯಾರ್ಥಿಗಳಿಗೆ, ರಕ್ತದಾನ ಶಿಬಿರದಲ್ಲಿ ಭಾಗವಹಿಸಿ ರಕ್ತದಾನ ಮಾಡಿದ ಎಲ್ಲರಿಗೂ ಪ್ರಮಾಣಪತ್ರ ವಿತರಿಸಲಾಯಿತು.
ಕಾರವಾರ: ಗೋವಾದ ಮಡಗಾಂವ್‌ನಲ್ಲಿ ಇತ್ತೀಚೆಗೆ ರಾಮಚಂದ್ರಾಪುರ ಮಠದ ರಾಘವೇಶ್ವರ ಸ್ವಾಮಿ ಸ್ವರ್ಣ ಪಾದುಕಾ ಪೂಜೆ, ಗೋವಾ ಹವ್ಯಕ ವಲಯದ ವಾರ್ಷಿಕೋತ್ಸವ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ನಡೆಯಿತು.
ಅಧ್ಯಕ್ಷತೆ ವಹಿಸಿ ಮಾತನಾಡಿದ ಡಾ. ಜಯರಾಮ ಭಟ್, ಗೋಕರ್ಣದ ಅಶೋಕೆಯ ವಿಷ್ಣುಗುಪ್ತ ವಿವಿ ಮಕ್ಕಳ ಸರ್ವಾಂಗೀಣ ಅಭಿವೃದ್ಧಿಗೆ ಉತ್ತಮ ರೀತಿಯ ಕೊಡುಗೆಯನ್ನು ನೀಡುತ್ತಿದೆ. ಅಲ್ಲಿನ ಶಿಕ್ಷಕ ವರ್ಗ ಮಕ್ಕಳಿಗೆ ಮೌಲ್ಯಯುತ ಶಿಕ್ಷಣ ನೀಡುತ್ತಿದೆ ಎಂದರು.ಮುಖ್ಯ ಪುರೋಹಿತ ವಿನಾಯಕ ಶಾಸ್ತ್ರಿ ವಿಷ್ಣುಗುಪ್ತ ವಿವಿ ವೈಶಿಷ್ಟ್ಯವನ್ನು ವರ್ಣಿಸಿದರು. ಇದೇ ಸಂದರ್ಭದಲ್ಲಿ ಪ್ರಾಚಾರ್ಯರಾಗಿ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ ಈಶ್ವರ ಹೆಗಡೆ ದಂಪತಿಗಳನ್ನು ಸನ್ಮಾನಿಸಲಾಯಿತು. 10ನೇ ಹಾಗೂ 12ನೇ ತರಗತಿಗಳಲ್ಲಿ ಉತ್ತಮ ಅಂಕಗಳನ್ನು ಪಡೆದ ವಿದ್ಯಾರ್ಥಿಗಳಿಗೆ ಪುರಸ್ಕಾರ ನೀಡಲಾಯಿತು. ಮಂಡಲಮಟ್ಟದ ಪ್ರತಿಭಾ ಪ್ರದರ್ಶನ ಹಾಗೂ ಕ್ರೀಡೋತ್ಸವದಲ್ಲಿ ಪಾಲ್ಗೊಂಡ ವಿದ್ಯಾರ್ಥಿಗಳಿಗೆ, ರಕ್ತದಾನ ಶಿಬಿರದಲ್ಲಿ ಭಾಗವಹಿಸಿ ರಕ್ತದಾನ ಮಾಡಿದ ಎಲ್ಲರಿಗೂ ಪ್ರಮಾಣಪತ್ರ ವಿತರಿಸಲಾಯಿತು.
ವಲಯದ ಅಧ್ಯಕ್ಷ ಮಹಾಬಲ ಭಟ್ ಶ್ರೀಪಾದ ಭಟ್ಟ, ಗಂಗೂಬಾಯಿ ಭಟ್, ಶರ್ವಾಣಿ ಭಟ್ ಹಾಗೂ ವಾಣಿಶ್ರೀ ಭಟ್, ಕುಮಟಾ ಮಂಡಲದ ಅಧ್ಯಕ್ಷ ಸುಬ್ರಾಯ ಭಟ್ ಹಾಗೂ ಇತರರು ಇದ್ದರು.