ಮಕ್ಕಳು ಉತ್ತಮ ಸಂಸ್ಕಾರದೊಂದಿಗೆ ಶಿಕ್ಷಣಪಡೆಯಬೇಕು ಆಗ ಮಾತ್ರ ಪ್ರಪಂಚದಲ್ಲಿ ಎಲ್ಲಾದರೂ ಸ್ವತಂತ್ರ್ಯವಾಗಿ ಬದುಕಬಹುದು ಎಂದು ಶಾಸಕ ಬಿ.ಕೆ.ಸಂಗಮೇಶ್ವರ್ ಹೇಳಿದರು.

ಭದ್ರಾವತಿ: ಮಕ್ಕಳು ಉತ್ತಮ ಸಂಸ್ಕಾರದೊಂದಿಗೆ ಶಿಕ್ಷಣಪಡೆಯಬೇಕು ಆಗ ಮಾತ್ರ ಪ್ರಪಂಚದಲ್ಲಿ ಎಲ್ಲಾದರೂ ಸ್ವತಂತ್ರ್ಯವಾಗಿ ಬದುಕಬಹುದು ಎಂದು ಶಾಸಕ ಬಿ.ಕೆ.ಸಂಗಮೇಶ್ವರ್ ಹೇಳಿದರು.

ನ್ಯೂಟೌನ್ ಶ್ರೀ ಸತ್ಯ ಸಾಯಿ ಸೇವಾ ಸಮಿತಿ, ಪ್ರಶಾಂತಿ ಸೇವಾ ಟ್ರಸ್ಟ್‌ನಿಂದ ವಿವಿಧ ಸೇವಾ ಕಾರ್ಯಗಳೊಂದಿಗೆ ಎರುಡು ದಿನಗಳ ಕಾಲ ಸಂಸ್ಥೆಯ ಶಾಲಾ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿರುವ ಭಗವಾನ್ ಶ್ರೀ ಸತ್ಯ ಸಾಯಿ ಬಾಬಾ ಜನ್ಮಶತಮಾನೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು. ಪ್ರಸ್ತುತ ದಿನಗಳಲ್ಲಿ ಮಕ್ಕಳಿಗೆ ಸಂಸ್ಕಾರಯುತ ಶಿಕ್ಷಣ ಬಹಳ ಮುಖ್ಯವಾಗಿದೆ. ಕೆಲವೇ ಕೆಲವು ವಿದ್ಯಾಸಂಸ್ಥೆಗಳು ಮಾತ್ರ ಸಂಸ್ಕಾರಯುತ ಶಿಕ್ಷಣ ನೀಡುತ್ತಿವೆ. ಇಂತಹ ಶಿಕ್ಷಣ ಸಂಸ್ಥೆಗಳು ಇನ್ನೂ ಹೆಚ್ಚಿನ ಅಭಿವೃದ್ಧಿಗೊಳ್ಳಬೇಕು ಎಂದರು. ಶ್ರೀ ಸತ್ಯ ಸಾಯಿ ಸೇವಾ ಸಂಸ್ಥೆ ಶಿಕ್ಷಣ, ಧಾರ್ಮಿಕ ಮತ್ತು ಸಾಮಾಜಿಕ ಕ್ಷೇತ್ರಗಳಲ್ಲಿ ನೀಡುತ್ತಿರುವ ಕೊಡುಗೆ ದೊಡ್ಡದಾಗಿದೆ. ಅದರಲ್ಲೂ ಕ್ಷೇತ್ರದಲ್ಲಿ ವಿಭಿನ್ನವಾಗಿ ಕಾರ್ಯನಿರ್ವಹಿಸುತ್ತಿದೆ. ಸೇವಾ ಕಾರ್ಯಗಳನ್ನು ಯಶಸ್ವಿಯಾಗಿ ಮುನ್ನಡೆಸಿಕೊಂಡು ಹೋಗುತ್ತಿರುವ ಡಿ.ಪ್ರಭಾಕರ ಬೀರಯ್ಯ ಹಾಗೂ ಸೇವಾಕರ್ತರು ಮತ್ತು ಭಕ್ತರಿಗೂ ಕ್ಷೇತ್ರದ ಜನರ ಪರವಾಗಿ ಕೃತಜ್ಞತೆ ಸಲ್ಲಿಸುತ್ತೇನೆ ಎಂದ ಅವರು, ಈ ಸಂಸ್ಥೆಗೆ ಸದಾ ಕಾಲ ಎಲ್ಲಾ ರೀತಿಯ ಸಹಕಾರ ನೀಡಲು ಬದ್ಧನಾಗಿದ್ದೇನೆ ಎಂದರು.

ಸನ್ಮಾನ ಸ್ವೀರಿಸಿ ಮಾತನಾಡಿದ ಕ್ಷೇತ್ರ ಶಿಕ್ಷಣಾಧಿಕಾರಿ ಎ.ಕೆ.ನಾಗೇಂದ್ರಪ್ಪ, ಶಿಕ್ಷಣ ಕ್ಷೇತ್ರದಲ್ಲಿ ಸಾಕಷ್ಟು ಬೆಳವಣಿಗೆ ಸಾಧಿಸಿರುವ ಸಂಸ್ಥೆ ಸಂಸ್ಕಾರಯುತ ಗುಣಮಟ್ಟದ ಶಿಕ್ಷಣ ನೀಡಲುವಲ್ಲಿ ಯಶಸ್ವಿಯಾಗಿದೆ. ಸೇವೆಯನ್ನು ಗುರಿಯಾಗಿಸಿಕೊಂಡಿರುವ ಈ ಸಂಸ್ಥೆ ಸಮಾಜಕ್ಕೆ ಮಾದರಿಯಾಗಿದೆ ಎಂದರು.

ದಂತ ವೈದ್ಯ ಡಾ.ರವಿ ದಬೀರ್ ಮಾತನಾಡಿ, ಸಂಸ್ಥೆಯ ಸೇವಾ ಕಾರ್ಯಗಳನ್ನು ಸ್ಮರಿಸಿದರು. ಶ್ರೀ ಸತ್ಯ ಸಾಯಿ ಸೇವಾ ಸಂಸ್ಥೆಗಳ ರಾಜ್ಯ ಸಂಯೋಜಕ(ಸೇವೆ) ಡಾ.ಡಿ.ಪ್ರಭಾಕರ ಬೀರಯ್ಯ ಅಧ್ಯಕ್ಷತೆ ವಹಿಸಿದ್ದರು.

ಇದೇ ವೇಳೆ ಅತಿ ಹೆಚ್ಚಿನ ಅಂಕಗಳನ್ನು ಪಡೆದ ಶ್ರೀ ಸತ್ಯಸಾಯಿ ಸಮಗ್ರ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳಿಗೆ ಅವರ ಇಷ್ಟದ ವಸ್ತುಗಳನ್ನು ಬಹುಮಾನಗಳಾಗಿ ವಿತರಿಸಲಾಯಿತು. ಮಾಜಿ ಸೈನಿಕರು ಮತ್ತು ರೈತ ದಂಪತಿಯನ್ನು ವಿಶೇಷವಾಗಿ ಸನ್ಮಾನಿಸಲಾಯಿತು. ಹರೀಣಿ ದಬೀರ್, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ತಾಲೂಕು ಅಧ್ಯಕ್ಷ ಬಿ.ಎಸ್.ಗಣೇಶ್, ಜಿಪಂ ಮಾಜಿ ಸದಸ್ಯ ಎಸ್.ಕುಮಾರ್, ಶ್ರೀ ಸತ್ಯ ಸಾಯಿ ಸೇವಾ ಸಂಸ್ಥೆಗಳ ರಾಜ್ಯ ಸಂಯೋಜಕಿ(ಶಿಕ್ಷಣ) ಕೆ.ಸೌಮ್ಯ ರೂಪ, ಈಶ್ವರಮ್ಮ ಆಂಗ್ಲ ಪ್ರೌಢಶಾಲೆ ಮತ್ತು ಪ್ರಶಾಂತಿ ಆಂಗ್ಲ ಹಿರಿಯ ಪ್ರಾಥಮಿಕ ಶಾಲೆ ಪ್ರಾಂಶುಪಾಲ ಎಸ್.ಎನ್.ಕೃಷ್ಣ, ಉಪ ಪ್ರಾಂಶುಪಾಲ ಎ.ಎನ್.ಜಯಕುಮಾರ್, ಕನ್ನಡ ಮಾಧ್ಯಮ ಮುಖ್ಯೋಪಾಧ್ಯಾಯ ಎಚ್.ಪಿ.ಪ್ರಸನ್ನ, ಟಿ.ವಿ.ಸುಜಾತ, ಜೆ.ಪಿ.ಪರಮೇಶ್ವರಪ್ಪ, ಶೀಲಮ್ಮ, ಮೃತ್ಯುಂಜಯ ಕಾನಿಟ್ಕರ್, ಎಸ್.ಎನ್ ಕೃಷ್ಣ, ಡಾ.ಎನ್.ಸತೀಶ್ಚಂದ್ರ, ದಿನೇಶ್, ಎಂ.ನಿತ್ಯಾ, ಆರ್.ವಿನಯ್, ಬಿ.ಚೀಲೂರಪ್ಪ, ಸಂತೋಷ್ ಜಿ.ವರ್ಣೇಕರ್, ಎಚ್.ಪಿ.ಶಿವಪ್ಪ, ರಾಮಕೃಷ್ಣಯ್ಯ, ಕೆ.ಗೋಪಾಲ್, ಸಿ.ಆರ್.ಚೇತನ್, ಡಾ.ವೀಣಾ ಭಟ್, ಡಾ.ಎಸ್.ಮಲ್ಲಿಕಾರ್ಜುನಪ್ಪ, ಸುರೇಶ್ ನಾಯರ್ ಮತ್ತಿತರರಿದ್ದರು.

ನಂತರ ಶಾಲಾ ಮಕ್ಕಳಿಂದ ನಡೆದ ಸಾಂಸ್ಕೃತಿಕ ಕಾರ್ಯಕ್ರಮಗಳು ಮನಸೂರೆಗೊಳಿಸಿದವು.