ಸಾರಾಂಶ
ಜಿಲ್ಲೆಯ ಬಸವನ ಬಾಗೇವಾಡಿಯ ಇಂಗಳೇಶ್ವರಲ್ಲಿ ಜನಿಸಿದ ಬಸವಣ್ಣರನ್ನು ಕರ್ನಾಟಕ ರಾಜ್ಯದ ಸಾಂಸ್ಕೃತಿಕ ನಾಯಕ ಎಂದು ಕ್ಯಾಬಿನೆಟ್‌ನಲ್ಲಿ ನಿರ್ಣಯ ಮಾಡುವ ಮೂಲಕ ಬಸವಣ್ಣನವರಿಗೆ ಗೌರವ ಸೂಚಿಸಲಾಗಿದೆ ಎಂದು ಸಚಿವ ಎಂ.ಬಿ.ಪಾಟೀಲ ಹೇಳಿದರು.
ವಿಜಯಪುರ: ವಿಶ್ವಕ್ಕೆ ಸಾಮಾಜಿಕ ನ್ಯಾಯದ ಪರಿಕಲ್ಪನೆ ನೀಡಿದ ಜಗಜ್ಯೋತಿ ಬಸವಣ್ಣರನ್ನ ಕರ್ನಾಟಕದ ಸಾಂಸ್ಕೃತಿಕ ನಾಯಕ ಎಂದು ಘೊಷಣೆ ಮಾಡಿದ ಮುಖ್ಯಮಂತ್ರಿ ಸಿದ್ಧರಾಮಯ್ಯಗೆ ಜಿಲ್ಲೆಯ ಜನರ ಪರವಾಗಿ ಧನ್ಯವಾದಗಳನ್ನು ಅರ್ಪಿಸುವುದಾಗಿ ಸಚಿವ ಡಾ.ಎಂ.ಬಿ.ಪಾಟೀಲ ಹೇಳಿದರು.
ನಗರದ ಜಿಪಂ ಕಚೇರಿಯಲ್ಲಿ ಬಸವೇಶ್ವರರನ್ನ "ಸಾಂಸ್ಕೃತಿಕ ನಾಯಕ'''''''' ಎಂದು ಘೋಷಣೆ ಮಾಡಿದ ಹಿನ್ನೆಲೆಯಲ್ಲಿ ಬಸವಣ್ಣನವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಭಾವಚಿತ್ರ ಅನಾವರಣಗೊಳಿಸಿದರು. ಇದೊಂದು ಐತಿಹಾಸಿಕ ಹಾಗೂ ಅರ್ಥ ಪೂರ್ಣ ಕಾರ್ಯಕ್ರಮ. ಅನುಭವ ಮಂಟಪವನ್ನು ಸ್ಥಾಪಿಸಿ ಮಹಿಳೆಯರಿಗೆ ಸಮಾನತೆ ನೀಡಿ ಪ್ರಜಾಪ್ರಭುತ್ವದ ಪರಿಕಲ್ಪನೆಯನ್ನು ಜಗತ್ತಿಗೆ ತೋರಿಸಿ ಕೊಟ್ಟಿದ್ದು ನಮ್ಮ ಬಸವಣ್ಣನವರು. ಅವರಿಗೆ ನಮ್ಮ ಸರ್ಕಾರ ಗೌರವ ನೀಡಿರುವುದು ಸಂತಸ ತಂದಿದೆ ಎಂದರು.ಕೋಟ್
ಸಾಮಾಜಿಕ ಸಮಾನತೆ ಹಾಗೂ ಕಾಯಕ, ದಾಸೋಹದ ಮಹತ್ವವನ್ನು12 ನೇ ಶತಮಾನದಲ್ಲಿಯೇ ಬಸವಣ್ಣನವರು ಜಗತ್ತಿಗೆ ತೋರಿಸಿಕೊಟ್ಟಿದ್ದಾರೆ. ಅದೇ ದಾಸೋಹ ಮಾರ್ಗದಲ್ಲಿಯೇ ಇಂದು ನಮ್ಮ ಸರ್ಕಾರ ಕೆಲಸ ಮಾಡುತ್ತಿದೆ. ನಮ್ಮ ಸರ್ಕಾರಕ್ಕೆ ಸಾಮಾಜಿಕ ಬದ್ಧತೆ ಇದೆ. ಕವಿ ಕುವೆಂಪು ಅವರ ಸರ್ವ ಜನಾಂಗದ ತೋಟ ಎನ್ನುವ ಸಾಲನ್ನು ನೆನಪಿನಲ್ಲಿಟ್ಟುಕೊಂಡು ಎಲ್ಲರನ್ನೂ ಒಗ್ಗೂಡಿಸುವ ಕೆಲಸ ಮಾಡುತ್ತಿದ್ದೇವೆ.ಎಂ ಬಿ ಪಾಟೀಲ್, ಜಿಲ್ಲಾ ಉಸ್ತುವಾರಿ ಸಚಿವ.ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಟಿ.ಭೂಬಾಲನ್, ಎಸ್ಪಿ ಋಷಿಕೇಶ ಸೋನಾವಣೆ, ಜಿಲ್ಲಾ ಪಂಚಾಯತಿ ಸಿಇಓ ರೀಷಿ ಆನಂದ, ಪಾಲಿಕೆ ಮಹಾಪೌರರಾದ ಮಹೇಜ್‌ಬಿನ್ ಹೊರ್ತಿ, ಆಯುಕ್ತ ಬದ್ರುದ್ದಿನ್ ಸೌದಾಗರ ಉಪಸ್ಥಿತರಿದ್ದರು.