ಸಾರಾಂಶ
ಕೊಪ್ಪಳ: ನಗರದ ಹೇಮರೆಡ್ಡಿ ಮಲ್ಲಮ್ಮ ದೇವಸ್ಥಾನದಲ್ಲಿ ಶಿವರಾತ್ರಿ ಪ್ರಯುಕ್ತ ದೇವಸ್ಥಾನದ ಹೇಮರಡ್ಡಿ ಮಲ್ಲಮ್ಮ ಕ್ಷೇಮಾಭಿವೃದ್ಧಿ ಸಂಘದಿಂದ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು. ಸಂಗೀತ ಕಾರ್ಯಕ್ರಮ ದೇವಸ್ಥಾನಕ್ಕೆ ಆಗಮಿಸಿದ ಭಕ್ತರನ್ನು ತಲೆದೂಗುವಂತೆ ಮಾಡಿತು.ಬೆಳಗ್ಗೆ ದೇವಸ್ಥಾನದಲ್ಲಿ ಹೇಮರಡ್ಡಿ ಮಲ್ಲಮ್ಮ ದೇವಿಗೆ ಪೂಜೆ, ಅಭಿಷೇಕ ಸಲ್ಲಿಸಲಾಯಿತು. ಸಂಜೆ ಆಗುತ್ತಿದ್ದಂತೆ ದೇವಸ್ಥಾನಕ್ಕೆ ಅಪಾರ ಸಂಖ್ಯೆಯಲ್ಲಿ ಭಕ್ತರು ಆಗಮಿಸಿದರು. ಸಂಜೆ ವೇಳೆಗೆ ದೇವಸ್ಥಾನದ ಭಕ್ತರಿಂದ ಕಿಕ್ಕಿರಿದು ತುಂಬಿತ್ತು. ಭಕ್ತರು ದೇವಿಗೆ ನೈವೇದ್ಯ ಸಮರ್ಪಿಸಿ ಪ್ರಸಾದ ಸ್ವೀಕರಿಸಿದರು. ಸಾಲು ಗಟ್ಟಿ ನಿಂತು ದೇವಿಯ ದರ್ಶನ ಪಡೆದರು.ಗಮನ ಸೆಳೆದ ಸಾಂಸ್ಕೃತಿಕ ಕಾರ್ಯಕ್ರಮ:ಶಿವರಾತ್ರಿ ಪ್ರಯುಕ್ತ ದೇವಸ್ಥಾನದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ಜರುಗಿದವು. ಸಂಗೀತ, ಶಿವ ಭಜನೆ ಪದಗಳು ಭಕ್ತರನ್ನು ತಣಿಸಿದವು.ಕೊಪ್ಪಳ ಕಾವ್ಯಾನಂದ ಪಾರ್ಕಿನಲ್ಲಿ ಇರುವ ಈಶ್ವರ ದೇವಸ್ಥಾನದಲ್ಲಿ ಈಶ್ವರ ದರ್ಶನಕ್ಕೆ ಭಕ್ತರು ಸರತಿಯಲ್ಲಿ ನಿಂತು ದರ್ಶನ ಪಡೆದರು. ಅಪಾರ ಸಂಖ್ಯೆಯಲ್ಲಿ ಭಕ್ತರು ಆಗಮಿಸಿ ದರ್ಶನ ಪಡೆದರು.