ಸಾರಾಂಶ
ಮೇಯರ್ ಪಿ.ಗಾದೆಪ್ಪ, ಶ್ರೀಶೈಲ ಭ್ರಮರಾಂಭ ಮಲ್ಲಿಕಾರ್ಜುನ ಸ್ವಾಮಿ ಸೇವಾ ಟ್ರಸ್ಟ್ ಅಧ್ಯಕ್ಷ ಕೆ.ರಾಜಶೇಖರ ಗೌಡ ಅವರು ಅತಿಥಿಗಳಾಗಿ ಭಾಗವಹಿಸಿದ್ದರು.
ಬಳ್ಳಾರಿ: ನಗರದ ಗುಗ್ಗರಹಟ್ಟಿಯ ಶ್ರೀ ಶ್ರೀಶೈಲ ಭ್ರಮರಾಂಭ ಮಲ್ಲಿಕಾರ್ಜುನ ಸ್ವಾಮಿ ಶಿವದೀಕ್ಷಾ ಮಂದಿರದಲ್ಲಿ ಶ್ರೀಹುಲಿಕುಂಟೆರಾಯ ತೊಗಲುಗೊಂಬೆ ಕಲಾ ತಂಡದಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ತೊಗಲುಗೊಂಬೆ ಕುರಿತು ವಿಶೇಷ ಉಪನ್ಯಾಸ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಸಮಾರಂಭಕ್ಕೆ ಚಾಲನೆ ನೀಡಿ ಮಾತನಾಡಿದ ವೀರಶೈವ ವಿದ್ಯಾವರ್ಧಕ ಸಂಘದ ಕಾರ್ಯಕಾರಿ ಸಮಿತಿ ಸದಸ್ಯ ಚೋರನೂರು ಕೊಟ್ರಪ್ಪ, ಪ್ರತಿಯೊಬ್ಬರಲ್ಲೂ ಕನ್ನಡ ಭಾಷಾ ಪ್ರೀತಿ ಮೈಗೂಡಿಸಿಕೊಳ್ಳಬೇಕು ಎಂದರು.ಬಳ್ಳಾರಿ ಜಿಲ್ಲಾ ಕೈಗಾರಿಕಾ ಸಂಘದ ಅಧ್ಯಕ್ಷ ವಿ.ರಾಮಚಂದ್ರ ಅಧ್ಯಕ್ಷತೆ ವಹಿಸಿದ್ದರು.ಮೇಯರ್ ಪಿ.ಗಾದೆಪ್ಪ, ಶ್ರೀಶೈಲ ಭ್ರಮರಾಂಭ ಮಲ್ಲಿಕಾರ್ಜುನ ಸ್ವಾಮಿ ಸೇವಾ ಟ್ರಸ್ಟ್ ಅಧ್ಯಕ್ಷ ಕೆ.ರಾಜಶೇಖರ ಗೌಡ ಅವರು ಅತಿಥಿಗಳಾಗಿ ಭಾಗವಹಿಸಿದ್ದರು.
ಸರಳಾದೇವಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ಸಹಾಯಕ ಪ್ರಾಧ್ಯಾಪಕ ಬಿ.ರಾಮಸ್ವಾಮಿ ಅವರು ತೊಗಲುಗೊಂಬೆ ಕುರಿತು ವಿಶೇಷ ಉಪನ್ಯಾಸ ನೀಡಿದರು. ಸಂಗೀತ ಗಾಯಕ ಕೆ.ವಸಂತಕುಮಾರ ಅವರು ಸುಗಮ ಸಂಗೀತ ಕಾರ್ಯಕ್ರಮ ನಡೆಸಿಕೊಟ್ಟರು.ಬಿ.ಅಮೃತ ಮತ್ತು ತಂಡದವರು ಸಮೂಹ ನೃತ್ಯ ಪ್ರದರ್ಶನ ನೀಡಿದರು.
ಹುಲಿಕುಂಟೆರಾಯ ತೊಗಲುಗೊಂಬೆ ಕಲಾ ತಂಡದ ಅಧ್ಯಕ್ಷ ಕೆ. ಹೊನ್ನೂರಸ್ವಾಮಿ ಪ್ರಾಸ್ತವಿಕವಾಗಿ ಮಾತನಾಡಿದರು. ವಿದ್ಯಾರ್ಥಿನಿ ನೇಹಾ, ಬಿ.ರಾಘವೇಂದ್ರ, ಸಾರಂಗ ಮಠದ ವಿಜಯಾನಂದ ಶಾಸ್ತ್ರಿ, ಎಂ.ಪುರುಷೋತ್ತಮ ಹಾಗೂ ಲಕ್ಷ್ಮೀದೇವಿ ಹೊನ್ನೂರಸ್ವಾಮಿ ಅವರು ಕಾರ್ಯಕ್ರಮ ನಿರ್ವಹಿಸಿದರು. ಕನ್ನಡ ರಾಜ್ಯೋತ್ಸವ ಹಿನ್ನಲೆಯಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು.ಬಳ್ಳಾರಿಯ ಗುಗ್ಗರಹಟ್ಟಿಯ ಶ್ರೀ ಶ್ರೀಶೈಲ ಭ್ರಮರಾಂಭ ಮಲ್ಲಿಕಾರ್ಜುನ ಸ್ವಾಮಿ ಶಿವದೀಕ್ಷಾ ಮಂದಿರದಲ್ಲಿ ಶ್ರೀಹುಲಿಕುಂಟೆರಾಯ ತೊಗಲುಗೊಂಬೆ ಕಲಾ ತಂಡದಿಂದ ಹಮ್ಮಿಕೊಂಡಿದ್ದ ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ತೊಗಲುಗೊಂಬೆ ಕುರಿತು ವಿಶೇಷ ಉಪನ್ಯಾಸ ಕಾರ್ಯಕ್ರಮಕ್ಕೆ ವೀವಿ ಸಂಘದ ಮಾಜಿ ಕಾರ್ಯದರ್ಶಿ ಚೋರನೂರು ಕೊಟ್ರಪ್ಪ ಚಾಲನೆ ನೀಡಿದರು.
;Resize=(128,128))
;Resize=(128,128))
;Resize=(128,128))
;Resize=(128,128))