ಸಾರಾಂಶ
ಪ್ರಶಸ್ತಿ ಪುರಸ್ಕಾರಗಳು ಕೇವಲ ಆಯ್ಕೆಗಾಗಿ ಮಾತ್ರ ಸೀಮಿತವಾಗಿರದೆ ವಿದ್ಯಾರ್ಥಿಗಳಿಗೆ ಉತ್ತಮ ಭವಿಷ್ಯ ನಿರ್ಮಿಸಲು ಸಹಕಾರಿಯಾಗುತ್ತವೆ.
ಅಂಕೋಲಾ ಅರ್ಬನ್ ಬ್ಯಾಂಕ್ ಅಧ್ಯಕ್ಷ ಹೇಳಿಕೆ
ಅಂಕೋಲಾ ತಾಲೂಕು ಮಟ್ಟದ ಪದವಿಪೂರ್ವ ಕಾಲೇಜುಗಳ ಸಾಂಸ್ಕೃತಿಕ ಕಾರ್ಯಕ್ರಮ ಉದ್ಘಾಟನೆಕನ್ನಡಪ್ರಭ ವಾರ್ತೆ ಅಂಕೋಲಾ
ಪ್ರಶಸ್ತಿ ಪುರಸ್ಕಾರಗಳು ಕೇವಲ ಆಯ್ಕೆಗಾಗಿ ಮಾತ್ರ ಸೀಮಿತವಾಗಿರದೆ ವಿದ್ಯಾರ್ಥಿಗಳಿಗೆ ಉತ್ತಮ ಭವಿಷ್ಯ ನಿರ್ಮಿಸಲು ಸಹಕಾರಿಯಾಗುತ್ತವೆ ಎಂದು ಅಂಕೋಲಾ ಅರ್ಬನ್ ಬ್ಯಾಂಕ್ ಅಧ್ಯಕ್ಷ ಭಾಸ್ಕರ ನಾರ್ವೇಕರ ಹೇಳಿದರು.ಶಾಲಾ ಶಿಕ್ಷಣ ಇಲಾಖೆ ಹಾಗೂ ಪೂರ್ಣಪ್ರಜ್ಞಾ ಕರುಣಾ ವಿಜ್ಞಾನ ಪದವಿ ಪೂರ್ವ ಕಾಲೇಜು ಇವುಗಳ ಸಂಯುಕ್ತ ಆಶ್ರಯದಲ್ಲಿ ಅಂಕೋಲಾ ತಾಲೂಕು ಮಟ್ಟದ ಪದವಿಪೂರ್ವ ಕಾಲೇಜುಗಳ ಸಾಂಸ್ಕೃತಿಕ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಶಿಕ್ಷಣ ಬೌದ್ದಿಕ ಬೆಳವಣಿಗೆಗೆ ಹಾಗೂ ಔದ್ಯೋಗಿಕ ಅವಕಾಶಗಳಿಗೆ ಸಹಕಾರಿಯಾದರೆ ಸಾಂಸ್ಕೃತಿಕ ಕಾರ್ಯಕ್ರಮಗಳು ವಿದ್ಯಾರ್ಥಿಗಳ ಸರ್ವತೋಮುಖ ಅಭಿವೃದ್ಧಿಗೆ ಸಹಕಾರಿಯಾಗುತ್ತವೆ. ಇಲ್ಲಿ ಪಡೆಯುವ ಪ್ರಶಸ್ತಿ ಪತ್ರಗಳು ಮುಂದಿನ ಸ್ಪರ್ಧೆಗಳಿಗೆ ಉತ್ತೇಜನ ನೀಡುವುದಲ್ಲದೆ ಮುಂದಿನ ಶಿಕ್ಷಣದಲ್ಲೂ ಉಪಯೋಗವಾಗುತ್ತದೆ ಎಂದರು.
ನಿವೃತ್ತ ಪ್ರಾಧ್ಯಾಪಕ ಸಂಜೀವ ನಾಯಕ ಮಾತನಾಡಿ, ಸ್ಪರ್ಧಾತ್ಮಕ ಮನೋಭಾವನೆ ಶೈಕ್ಷಣಿಕ ಪ್ರಗತಿಗೆ ಪೂರಕವಾಗುತ್ತದೆ. ವಿದ್ಯಾರ್ಥಿಗಳು ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ತೊಡಗಿಕೊಳ್ಳುವುದರಿಂದ ಕಾಲೇಜಿಗೂ ಉತ್ತಮ ಹೆಸರು ಬರುತ್ತದೆ ಎಂದರು.ಎಸ್.ವಿ.ಎಸ್.ಜಿ.ಎ.ಎಸ್ ಟ್ರಸ್ಟ್ ಅಧ್ಯಕ್ಷ ಪ್ರಶಾಂತ ನಾಯಕ ಮಾತನಾಡಿದರು.
ವೇದಿಕೆಯಲ್ಲಿ ಅಕಾಡೆಮಿ ಕೋ ಆರ್ಡಿನೇಟರ ಕೀರ್ತಿ ನಾಯಕ, ಪ್ರಾಚಾರ್ಯರಾದ ಫಾಲ್ಗುಣ ಗೌಡ, ವೇದಾವತಿ ನಾಯಕ ಉಪಸ್ಥಿತರಿದ್ದರು.ಸರಕಾರಿ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕ ಮಹೇಶ ನಾಯಕ ಪ್ರಾಸ್ತಾವಿಕ ಮಾತನಾಡಿದರು. ಪೂರ್ಣಪ್ರಜ್ಞಾ ಕಾಲೇಜಿನ ಪ್ರಾಚಾರ್ಯೆ ಮುಕ್ತಾ ಕಾಮತ ಸ್ವಾಗತಿಸಿದರು. ಉಪನ್ಯಾಸಕಿ ದೀಪ್ತಿ ನಾಯಕ ವಂದಿಸಿದರು. ಉಪನ್ಯಾಸಕಿ ಜ್ಯೋತಿ ಗೌಡ ಕಾರ್ಯಕ್ರಮ ನಿರ್ವಹಿಸಿದರು.
ನಂತರ ವಿದ್ಯಾರ್ಥಿಗಳಿಗಾಗಿ ವಿವಿಧ ಸಾಂಸ್ಕೃತಿಕ ಸ್ಪರ್ಧೆ ನಡೆಸಲಾಯಿತು. ಈ ಸಂದರ್ಭದಲ್ಲಿ ಕಾಲೇಜಿನ ಬೋಧಕ ಸಿಬ್ಬಂದಿ, ವಿವಿಧ ಕಾಲೇಜಿನ ವಿದ್ಯಾರ್ಥಿಗಳು ಇದ್ದರು.;Resize=(128,128))
;Resize=(128,128))
;Resize=(128,128))
;Resize=(128,128))
;Resize=(128,128))