ಮಕ್ಕಳಿಗೆ ಶಿಕ್ಷಣದೊಂದಿಗೆ ಸಂಸ್ಕಾರವೂ ಮುಖ್ಯ

| Published : Jun 17 2024, 01:32 AM IST

ಸಾರಾಂಶ

ಹೊಸಕೋಟೆ: ಜ್ಞಾನದ ಬೆಳಕನ್ನ ಚೆಲ್ಲುವಲ್ಲಿ ಶಿಕ್ಷಣ ಸಂಸ್ಥೆಗಳ ಹಾಗೂ ಶಿಕ್ಷಣ ಕ್ಷೇತ್ರದ ಪಾತ್ರ ಹೆಚ್ಚಾಗಿದೆ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ತಾಲೂಕು ಯೋಜನಾಧಿಕಾರಿ ಹರೀಶ್ ಕುಮಾರ್ ತಿಳಿಸಿದರು.

ಹೊಸಕೋಟೆ: ಜ್ಞಾನದ ಬೆಳಕನ್ನ ಚೆಲ್ಲುವಲ್ಲಿ ಶಿಕ್ಷಣ ಸಂಸ್ಥೆಗಳ ಹಾಗೂ ಶಿಕ್ಷಣ ಕ್ಷೇತ್ರದ ಪಾತ್ರ ಹೆಚ್ಚಾಗಿದೆ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ತಾಲೂಕು ಯೋಜನಾಧಿಕಾರಿ ಹರೀಶ್ ಕುಮಾರ್ ತಿಳಿಸಿದರು.

ತಾಲೂಕಿನ ಚೋಳಪ್ಪನಹಳ್ಳಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ವಿದ್ಯಾರ್ಥಿಗಳಿಗೆ ಶ್ರೀ ಧರ್ಮಸ್ಥಳ ಮಂಜುನಾಥ ಹೊಸಕೋಟೆ ಸೇವಾ ಬಳಗ ವತಿಯಿಂದ ಕಲಿಕಾ ಸಾಮಗ್ರಿಗಳನ್ನು ವಿತರಿಸಿ ಮಾತನಾಡಿ, ಶಾಲೆಗಳಲ್ಲಿ ಶಿಕ್ಷಣದ ಜೊತೆ ಸಂಸ್ಕೃತಿ, ಸಂಸ್ಕಾರ ಹಾಗೂ ಜ್ಞಾನದ ಬೆಳಕನ್ನ ಹರಿಸುವಲ್ಲಿ ಶಾಲೆಗಳಲ್ಲಿ ಶಿಕ್ಷಕರ ಪಾತ್ರ ಅನನ್ಯವಾಗಿದೆ. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆಯಿಂದ ಶ್ರೀ ವೀರೇಂದ್ರಹೆಗ್ಗಡೆಯವರ ನೇತೃತ್ವದಲ್ಲಿ ಶಿಕ್ಷಣ ಕ್ಷೇತ್ರದ ಅಭಿವೃದ್ಧಿಗೂ ಹಲವಾರು ರೀತಿಯಲ್ಲಿ ಶ್ರಮಿಸಲಾಗುತ್ತಿದೆ. ಪ್ರಮುಖವಾಗಿ ಶಾಲಾ ಕಟ್ಟಡಗಳ ದುರಸ್ತಿ, ಶೌಚಾಲಯ ನಿರ್ಮಾಣ, ಶುದ್ಧ ಕುಡಿಯುವ ನೀರಿನ ಘಟಕ ಸೇರಿದಂತೆ ಮಕ್ಕಳಿಗೆ ಸುಜ್ಞಾನ ನಿಧಿ ಯೋಜನೆ ಮೂಲಕ ವಿದ್ಯಾರ್ಥಿ ವೇತನ ನೀಡಲಾಗುತ್ತಿದೆ. ಆದ್ದರಿಂದ ವಿದ್ಯಾರ್ಥಿಗಳು ಕೂಡ ಸರ್ಕಾರಿ ಯೋಜನೆಗಳ ಜೊತೆಗೆ ದಾನಿಗಳು ನೀಡುವ ಸವಲತ್ತುಗಳನ್ನು ಸದುಪಯೋಗಪಡಿಸಿಕೊಂಡು ಶೈಕ್ಷಣಿಕವಾಗಿ ಅಭಿವೃದ್ಧಿ ಹೊಂದಬೇಕು ಎಂದರು.

ಧರ್ಮಸ್ಥಳ ಮಂಜುನಾಥ ಹೊಸಕೋಟೆ ಸೇವಾ ಬಳಗದ ಅಧ್ಯಕ್ಷ ಮಂಜುನಾಥ್, ಶಾಲಾ ಮುಖ್ಯ ಶಿಕ್ಷಕಿ ಸೋನು ಶೇಟ್, ಸಂಘದ ಎಲ್ಲಾ ಪದಾಧಿಕಾರಿಗಳು ಹಾಜರಿದ್ದರು.15 ಹೆಚ್‌ಎಸ್‌ಕೆ 1

ಹೊಸಕೋಟೆ ತಾಲೂಕಿನ ಚೋಳಪ್ಪನಹಳ್ಳಿ ಸರ್ಕಾರಿ ಕಿರಿಯ ಪ್ರಾಥಮಿಕ ಪಾಠಶಾಲೆ ಮಕ್ಕಳಿಗೆ ಶ್ರೀ ಧರ್ಮಸ್ಥಳ ಮಂಜುನಾಥ ಹೊಸಕೋಟೆ ಸೇವಾ ಬಳಗದ ವತಿಯಿಂದ ಕಲಿಕಾ ಸಾಮಗ್ರಿಗಳನ್ನ ವಿತರಿಸಲಾಯಿತು.