ಸಾರಾಂಶ
ಭಾನುವಾರ ಉಡುಪಿಯ ಯಕ್ಷಗಾನ ಕಲಾರಂಗದ ಐವೈಸಿ ಸಭಾಂಗಣದಲ್ಲಿ ಪ್ರಥಮ ಪಿಯುಸಿ ಮುಗಿಸಿದ ವಿದ್ಯಾಪೋಷಕ್ ವಿದ್ಯಾರ್ಥಿಗಳ ಐದು ದಿನಗಳ ಶೈಕ್ಷಣಿಕ ಸನಿವಾಸ ಶಿಬಿರದ ಸಮಾರೋಪ ಸಮಾರಂಭ ನಡೆಯಿತು. ಶಿಬಿರದಲ್ಲಿ ೨೨೦ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು
ಕನ್ನಡಪ್ರಭ ವಾರ್ತೆ ಉಡುಪಿ
ಶಿಕ್ಷಣ ಸಂಸ್ಕಾರವನ್ನು ಕೊಡಬೇಕು. ಕೇವಲ ಉದ್ಯೋಗಕ್ಕಾಗಿ ಮಾತ್ರ ಶಿಕ್ಷಣವಾಗಬಾರದು, ಅದು ನಮ್ಮ ವ್ಯಕ್ತಿತ್ವವನ್ನು ರೂಪಿಸಿ ತನ್ಮೂಲಕ ರಾಷ್ಟ್ರದ ಒಳಿತಿಗೆ ಕಾರಣವಾದರೆ ಅರ್ಥಪೂರ್ಣವಾಗುತ್ತದೆ ಎಂದು ಹಾದಿಗಲ್ಲು ಅಭಯಲಕ್ಷ್ಮೀನೃಸಿಂಹ ದೇವಳದ ಧರ್ಮದರ್ಶಿ ಶ್ರೀ ಹಾದಿಗಲ್ಲು ಲಕ್ಷ್ಮೀನಾರಾಯಣ ಹೇಳಿದರು.ಅವರು ಭಾನುವಾರ ಉಡುಪಿಯ ಯಕ್ಷಗಾನ ಕಲಾರಂಗದ ಐವೈಸಿ ಸಭಾಂಗಣದಲ್ಲಿ ಜರುಗಿದ ಪ್ರಥಮ ಪಿಯುಸಿ ಮುಗಿಸಿದ ವಿದ್ಯಾಪೋಷಕ್ ವಿದ್ಯಾರ್ಥಿಗಳ ಐದು ದಿನಗಳ ಶೈಕ್ಷಣಿಕ ಸನಿವಾಸ ಶಿಬಿರದ ಸಮಾರೋಪ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು.
ಟಿ. ವಾಸುದೇವ ಮೂರ್ತಿ, ಡಾ. ಪ್ರಶಾಂತ್ ಭಟ್, ಸಿಎ ಶ್ರೀಕೃಷ್ಣ ಆಚಾರ್ಯ ಸಂಪನ್ಮೂಲ ವ್ಯಕ್ತಿಗಳಾಗಿ ವಿದ್ಯಾರ್ಥಿಗಳಿಗೆ ಉಪಯುಕ್ತ ಮಾಹಿತಿ ನೀಡಿದರು. ವೇದಿಕೆಯಲ್ಲಿ ಸದಾನಂದ ಶೆಣೈ ಪಿ., ಸಹನಾ ಎಸ್. ಶೆಣೈ ಮತ್ತು ಯು. ಶ್ರೀಧರ್ ಮುಖ್ಯ ಅಭ್ಯಾಗತರಾಗಿ ಭಾಗವಹಿಸಿದ್ದರು. ಸಂಸ್ಥೆಯ ಉಪಾಧ್ಯಕ್ಷ ವಿ. ಜಿ. ಶೆಟ್ಟಿ ಉಪಸ್ಥಿತರಿದ್ದರು.ಶಿಬಿರದ ನಿರ್ದೇಶಕರಾದ ಪ್ರವೀಣ್ ಗುಡಿ ಹಾಗೂ ಬಳಗದವರನ್ನು ಗೌರವಿಸಲಾಯಿತು. ಹತ್ತು ಜನ ವಿದ್ಯಾರ್ಥಿಗಳು ಶಿಬಿರದ ತಮ್ಮ ಅನುಭವ ಹಂಚಿಕೊಂಡರು.
ವಿದ್ಯಾರ್ಥಿಗಳಿಗೆ ಪ್ರಮಾಣಪತ್ರ ಮತ್ತು ಕು.ಗೋ., ಹಾದಿಗಲ್ಲು ಲಕ್ಷ್ಮೀನಾರಾಯಣ, ಯು. ಶ್ರೀಧರ್, ಸುಬ್ರಹ್ಮಣ್ಯ ಬೈಪಡಿತ್ತಾಯ ಅವರು ನೀಡಿದ ಪುಸ್ತಕಗಳನ್ನು ತಲಾ ನಾಲ್ಕರಂತೆ ವಿತರಿಸಲಾಯಿತು.ಸಂಸ್ಥೆಯ ಉಪಾಧ್ಯಕ್ಷ ಎಸ್. ವಿ. ಭಟ್ ಸ್ವಾಗತಿಸಿದರು. ಕಾರ್ಯದರ್ಶಿ ಮುರಲಿ ಕಡೆಕಾರ್ ಕಾರ್ಯಕ್ರಮ ನಿರೂಪಿಸಿದರು. ನಾರಾಯಣ ಎಂ. ಹೆಗಡೆ ವಂದಿಸಿದರು. ಎಚ್. ಎನ್. ಶೃಂಗೇಶ್ವರ ಸಹಕರಿಸಿದರು. ಶಿಬಿರದಲ್ಲಿ ೨೨೦ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು