ಕನ್ನಡಪ್ರಭ ವಾರ್ತೆ ಅರಸೀಕೆರೆ
ಗ್ರಾಹಕರ ವಿಶ್ವಾಸವನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ಗುಣಮಟ್ಟದ ಸೇವೆ ನೀಡುತ್ತಿರುವ ಬ್ಯಾಂಕುಗಳೇ ದೀರ್ಘಕಾಲ ಯಶಸ್ಸು ಸಾಧಿಸುತ್ತವೆ. ಗ್ರಾಹಕರ ಅಗತ್ಯಗಳಿಗೆ ಸ್ಪಂದಿಸುವ ಸೇವಾ ಮನೋಭಾವದಿಂದಲೇ ಭಾರತೀಯ ಸ್ಟೇಟ್ ಬ್ಯಾಂಕ್ (ಎಸ್‌ಬಿಐ) ದೇಶದ ಅತಿದೊಡ್ಡ ಬ್ಯಾಂಕ್ ಆಗಿ ಬೆಳೆಯಲು ಸಾಧ್ಯವಾಗಿದೆ ಎಂದು ನಿವೃತ್ತ ಸಹಾಯಕ ಶಿಕ್ಷಣಾಧಿಕಾರಿ ಹಾಗೂ ಹಿರಿಯ ಗ್ರಾಹಕ ರುದ್ರಮುನಿ ಸ್ವಾಮಿ ಹೇಳಿದರು.ನಗರದ ನಾಗಭೂಷಣ್ ಆಸ್ಪತ್ರೆ ಸಮೀಪದ ಎಸ್‌ಬಿಐ ಶಾಖೆಯಲ್ಲಿ ಸರಳವಾಗಿ ನಡೆದ ಬ್ಯಾಂಕಿನ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಬ್ಯಾಂಕಿನ ಸಿಬ್ಬಂದಿ ಗ್ರಾಹಕರೊಂದಿಗೆ ತಾಳ್ಮೆ ಮತ್ತು ಸೌಜನ್ಯದಿಂದ ವರ್ತಿಸುವುದು ಶ್ಲಾಘನೀಯವಾಗಿದೆ ಎಂದು ಹೇಳಿದರು. ಈ ಶಾಖೆಯಲ್ಲಿ ಗ್ರಾಹಕರಿಗೆ ಅನುಕೂಲವಾಗುವಂತೆ ವಿಶಾಲವಾದ ಆಸನ ವ್ಯವಸ್ಥೆ, ಸುಗಮ ಸೇವೆ ಹಾಗೂ ಅಗತ್ಯ ಮಾರ್ಗದರ್ಶನ ಒದಗಿಸಲಾಗುತ್ತಿದೆ. ಬ್ಯಾಂಕಿಂಗ್ ವ್ಯವಹಾರಗಳ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲದ ಗ್ರಾಹಕರಿಗೂ ಸಿಬ್ಬಂದಿ ಸೂಕ್ತ ಮಾರ್ಗದರ್ಶನ ನೀಡುತ್ತಿರುವುದು ಮೆಚ್ಚುವಂತಹ ಸಂಗತಿಯಾಗಿದೆ. ಶಾಖಾ ವ್ಯವಸ್ಥಾಪಕರು ಸೇರಿದಂತೆ ಸಿಬ್ಬಂದಿಯ ಸ್ಪಂದನಶೀಲ ಸೇವೆಯಿಂದ ಗ್ರಾಹಕರಲ್ಲಿ ವಿಶ್ವಾಸ ಹೆಚ್ಚುತ್ತಿದ್ದು, ಇದೇ ಬ್ಯಾಂಕಿನ ಬೆಳವಣಿಗೆಗೆ ಪ್ರಮುಖ ಕಾರಣವಾಗಿದೆ ಎಂದು ಅಭಿಪ್ರಾಯಪಟ್ಟರು.ಶಾಖಾ ವ್ಯವಸ್ಥಾಪಕಿ ಭವ್ಯಕುಮಾರಿ ಮಾತನಾಡಿ, ಡಿಜಿಟಲ್ ಬ್ಯಾಂಕಿಂಗ್ ಬಳಕೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಗ್ರಾಹಕರು ಸೈಬರ್ ವಂಚನೆಗಳ ಬಗ್ಗೆ ಹೆಚ್ಚಿನ ಎಚ್ಚರಿಕೆ ವಹಿಸಬೇಕು ಎಂದು ಸಲಹೆ ನೀಡಿದರು. ಬ್ಯಾಂಕ್ ಯಾವುದೇ ಸಂದರ್ಭದಲ್ಲೂ ಓಟಿಪಿ, ಎಟಿಎಂ ಪಿನ್ ಅಥವಾ ಪಾಸ್‌ವರ್ಡ್ ಮಾಹಿತಿಯನ್ನು ದೂರವಾಣಿ ಮೂಲಕ ಕೇಳುವುದಿಲ್ಲ. ಇಂತಹ ಮಾಹಿತಿಯನ್ನು ಯಾರೊಂದಿಗೂ ಹಂಚಿಕೊಳ್ಳಬಾರದು. ಅನುಮಾನಾಸ್ಪದ ಕರೆಗಳು ಅಥವಾ ಸಂದೇಶಗಳು ಬಂದರೆ ತಕ್ಷಣವೇ ಬ್ಯಾಂಕ್‌ಗೆ ಮಾಹಿತಿ ನೀಡಬೇಕು ಎಂದು ತಿಳಿಸಿದರು.ಬ್ಯಾಂಕ್‌ನಲ್ಲಿ ಲಭ್ಯವಿರುವ ವಿವಿಧ ಉಳಿತಾಯ ಮತ್ತು ಹೂಡಿಕೆ ಯೋಜನೆಗಳ ಸದುಪಯೋಗ ಪಡೆದುಕೊಳ್ಳುವಂತೆ ಕರೆ ನೀಡಿದ ಅವರು, ವಿಶೇಷವಾಗಿ ಮಕ್ಕಳ ಶಿಕ್ಷಣ ಹಾಗೂ ಭವಿಷ್ಯದ ಭದ್ರತೆಗಾಗಿ ದೀರ್ಘಾವಧಿಯ ಉಳಿತಾಯ ಯೋಜನೆಗಳನ್ನು ಆಯ್ಕೆ ಮಾಡಿಕೊಳ್ಳಬಹುದು ಎಂದು ಹೇಳಿದರು. ಸಂಸ್ಥಾಪನಾ ದಿನದ ಅಂಗವಾಗಿ ಶುಭಾಶಯ ಕೋರಿದ ಎಲ್ಲಾ ಗ್ರಾಹಕರಿಗೆ ಅವರು ಕೃತಜ್ಞತೆ ಸಲ್ಲಿಸಿದರು.ಕಾರ್ಯಕ್ರಮದಲ್ಲಿ ಬ್ಯಾಂಕಿನ ಸಿಬ್ಬಂದಿ, ಹಿರಿಯ ಗ್ರಾಹಕರು ಹಾಗೂ ಸಾರ್ವಜನಿಕರು ಭಾಗವಹಿಸಿ ಸಂಸ್ಥಾಪನಾ ದಿನದ ಸಂಭ್ರಮವನ್ನು ಹಂಚಿಕೊಂಡರು.ಗ್ರಾಹಕ ಸ್ನೇಹಿ ಸೇವೆಯೇ ಎಸ್‌ಬಿಐ ಯಶಸ್ಸಿನ ಗುಟ್ಟು
ಎಸ್‌ಬಿಐ ಶಾಖೆಯಲ್ಲಿ ಗ್ರಾಹಕರಿಗೆ ಅನುಕೂಲವಾಗುವಂತೆ ವಿಶಾಲವಾದ ಆಸನ ವ್ಯವಸ್ಥೆ, ಸುಗಮ ಸೇವೆ ಹಾಗೂ ಅಗತ್ಯ ಮಾರ್ಗದರ್ಶನ ಒದಗಿಸಲಾಗುತ್ತಿದೆ. ಬ್ಯಾಂಕಿಂಗ್ ವ್ಯವಹಾರಗಳ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲದ ಗ್ರಾಹಕರಿಗೂ ಸಿಬ್ಬಂದಿ ಸೂಕ್ತ ಮಾರ್ಗದರ್ಶನ ನೀಡುತ್ತಿರುವುದು ಮೆಚ್ಚುವಂತಹ ಸಂಗತಿಯಾಗಿದೆ. ಶಾಖಾ ವ್ಯವಸ್ಥಾಪಕರು ಸೇರಿದಂತೆ ಸಿಬ್ಬಂದಿಯ ಸ್ಪಂದನಶೀಲ ಸೇವೆಯಿಂದ ಗ್ರಾಹಕರಲ್ಲಿ ವಿಶ್ವಾಸ ಹೆಚ್ಚುತ್ತಿದ್ದು, ಇದೇ ಬ್ಯಾಂಕಿನ ಬೆಳವಣಿಗೆಗೆ ಪ್ರಮುಖ ಕಾರಣವಾಗಿದೆ ಎಂದು ಅಭಿಪ್ರಾಯಪಟ್ಟರು.
Latest Videos
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.