ಕೇಂದ್ರ ಸರ್ಕಾದಿಂದ ರಾಜ್ಯಕ್ಕೆ ಬರಬೇಕಾದ ತೆರಿಗೆ ಹಣ ಕಡಿತವಾಗುತ್ತಿದೆ. ಈ ಬಗ್ಗೆ ನಾವೆಲ್ಲರೂ ಹೋರಾಟ ಮಾಡಬೇಕಾದ ಅನಿವಾರ್ಯತೆ ಇದೆ ಎಂದು ದಾವಣಗೆರೆ ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ ಹೇಳಿದರು.
ಹರಪನಹಳ್ಳಿ: ಸಾಮಾಜಿಕ ನ್ಯಾಯದ ಪರ ಕಾಂಗ್ರೆಸ್ ಬದ್ಧವಾಗಿದೆ. ನುಡಿದಂತೆ ನಡೆಯುವ ಸರ್ಕಾರ ನಮ್ಮದು ಎಂದು ದಾವಣಗೆರೆ ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ ಹೇಳಿದರು.
ಪಟ್ಟಣದ ಬಾಬು ಜಗಜೀವನ್ ರಾಂ ಭವನದಲ್ಲಿ ಹೊಸಪೇಟೆಯಲ್ಲಿ ಮೇ 20ರಂದು ನಡೆಯುವ ಸರ್ಕಾರದ ಎರಡು ವರ್ಷದ ಸಾಧನೆ ಸಮಾವೇಶದ ಪೂರ್ವಭಾವಿ ಸಭೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಕೇಂದ್ರ ಸರ್ಕಾದಿಂದ ರಾಜ್ಯಕ್ಕೆ ಬರಬೇಕಾದ ತೆರಿಗೆ ಹಣ ಕಡಿತವಾಗುತ್ತಿದೆ. ಈ ಬಗ್ಗೆ ನಾವೆಲ್ಲರೂ ಹೋರಾಟ ಮಾಡಬೇಕಾದ ಅನಿವಾರ್ಯತೆ ಇದೆ. ₹೧ ತೆರಿಗೆಯಲ್ಲಿ ಕೇಂದ್ರದಿಂದ ನಮಗೆ ಕೇವಲ ೧೩ ಪೈಸೆ ಬರುತ್ತಿದೆ ಎಂದು ಆರೋಪಿಸಿದರು.ಹೊಸಪೇಟೆ ಮರಿಯಮ್ಮನಹಳ್ಳಿ ಹಾಗೂ ಶಿವಮೊಗ್ಗಕ್ಕೆ ಸಂಪರ್ಕಿಸುವ ರಾಜ್ಯ ಹೆದ್ದಾರಿ ಕಾಮಗಾರಿ ಶೀಘ್ರದಲ್ಲೇ ಪ್ರಾರಂಭವಾಗಲಿದೆ ಎಂದರು.
ಶಾಸಕಿ ಎಂ.ಪಿ. ಲತಾ ಮಲ್ಲಿಕಾರ್ಜುನ ಮಾತನಾಡಿ, ಮೇ 20ರಂದು ಹೊಸಪೇಟೆಯಲ್ಲಿ ನಡೆಯುವ ಕಾಂಗ್ರೆಸ್ ಸರ್ಕಾರದ ಎರಡು ವರ್ಷದ ಸಾಧನೆ ಸಮಾವೇಶಕ್ಕೆ ಹರಪನಹಳ್ಳಿ ತಾಲೂಕಿನಿಂದ ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕರ್ತರು ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕು ಎಂದು ಹೇಳಿದರು.ಎರಡು ವರ್ಷದ ಸಾಧನೆ ಸಮಾವೇಶದಲ್ಲಿ ರಾಜ್ಯದ ಒಂದು ಲಕ್ಷದ ಫಲಾನುಭವಿಗಳಿಗೆ ವಿವಿಧ ಹಕ್ಕುಪತ್ರಗಳನ್ನು ನೀಡಲಾಗುತ್ತಿದ್ದು, ಇದರಲ್ಲಿ ಅಖಂಡ ಬಳ್ಳಾರಿ ಜಿಲ್ಲೆಯಲ್ಲಿಯೇ 26 ಸಾವಿರ ಫಲಾನುವಿಗಳಿದ್ದಾರೆ ಎಂದು ಹೇಳಿದರು.
ಅತಿ ಹೆಚ್ಚು ಹಕ್ಕುಪತ್ರ ಪಡೆಯುವ ಅಖಂಡ ಬಳ್ಳಾರಿ ಜಿಲ್ಲೆಯಲ್ಲಿ ಹರಪನಹಳ್ಳಿ ಮೊದಲ ಸ್ಥಾನದಲ್ಲಿದೆ ಎಂದು ತಿಳಿಸಿದರು.ದಾವಣಗೆರೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಚ್.ಬಿ. ಮಂಜಪ್ಪ ಮಾತನಾಡಿ, ಸಿದ್ದರಾಮಯ್ಯ ಅವರು ಕಳೆದ ಅವಧಿಯಲ್ಲಿ ಗೊಲ್ಲರಟ್ಟಿ, ತಾಂಡಾ ಹಟ್ಟಿಗಳನ್ನು ಕಂದಾಯ ಗ್ರಾಮಗಳನ್ನಾಗಿ ಮಾಡಲು ಮುಂದಾಗಿದ್ದರು. ಅದರಂತೆ ಇಂದು ಹೊಸಪೇಟೆಯಲ್ಲಿ ಹಕ್ಕುಪತ್ರ ನೀಡುತ್ತಿದ್ದಾರೆ. ನುಡಿದಂತೆ ನಡೆದ ಸರ್ಕಾರ ದೇಶದಲ್ಲಿ ಯಾವುದಾದರೂ ಇದ್ದರೆ ಅದು ಕರ್ನಾಟಕ ಕಾಂಗ್ರೆಸ್ ಸರ್ಕಾರ ಎಂದರು.
ವಿರೋಧ ಪಕ್ಷ ಬಿಜೆಪಿಯವರು ಜನರಿಗೆ ಸುಳ್ಳು ಹೇಳಿ ದಾರಿ ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ. ಅದನ್ನು ನಮ್ಮ ಕಾರ್ಯಕರ್ತರು ಜನರಿಗೆ ಮನವರಿಕೆ ಮಾಡಿ ಹೊಸಪೇಟೆಯಲ್ಲಿ ನಡೆಯುವ ಕಾರ್ಯಕ್ರಮಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಯಶಸ್ವಿಗೊಳಿಸಬೇಕು ಎಂದು ಕರೆ ನೀಡಿದರು.ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ ಭಟ್ ಮಾತನಾಡಿ, ಕೊಟ್ಟ ಮಾತಿನಂತೆ ಸಿದ್ದರಾಮಯ್ಯ ಅವರ ಸರ್ಕಾರ ಕೆಲಸ ಮಾಡುತ್ತಿದೆ ಎಂದರು.
ಚಿಗಟೇರಿ ಬ್ಲಾಕ್ ಅಧ್ಯಕ್ಷ ಕೆ. ಕುಬೇರಪ್ಪ, ಪುರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ಟಿ. ವೆಂಕಟೇಶ ಮಾತನಾಡಿದರು.ಪುರಸಭೆ ಅಧ್ಯಕ್ಷೆ ಫಾತಿಮಾಬೀ, ಚಿಗಟೇರಿ ಬ್ಲಾಕ್ ಅಧ್ಯಕ್ಷ ಕೆ. ಕುಬೇರಪ್ಪ, ಅರಸೀಕೆರೆ ಬ್ಲಾಕ್ ಅಧ್ಯಕ್ಷ ಎಸ್. ಮಂಜುನಾಥ, ಎಚ್.ಬಿ. ಪರಶುರಾಮಪ್ಪ, ಎಂ. ರಾಜಶೇಖರ, ಶಶಿಧರ ಪೂಜಾರ, ಟಿ. ವೆಂಕಟೇಶ, ಪಿ.ಎಲ್. ಪೋಮ್ಯಾನಾಯ್ಕ್, ಮುತ್ತಿಗಿ ಜಂಬಣ್ಣ, ಬಿ.ಕೆ. ಪ್ರಕಾಶ, ಬಂಡ್ರಿ ಗೋಣಿಬಸಪ್ಪ, ಉಪವಿಭಾಗಾಧಿಕಾರಿ ಚಿದಾನಂದ ಗುರುಸ್ವಾಮಿ, ತಹಸೀಲ್ದಾರ್ ಬಿ.ವಿ. ಗಿರೀಶಬಾಬು, ಮುಖ್ಯಾಧಿಕಾರಿ ಎರಗುಡಿ ಶಿವಕುಮಾರ, ಇಒ ಚಂದ್ರಶೇಖರ, ದಾವಣಗೆರೆ ದಿನೇಶ್ ಕೆ. ಶೆಟ್ಟಿ, ಪುರಸಭೆ ಸದಸ್ಯರಾದ ಲಾಟಿ ದಾದಪೀರ, ಉದ್ದಾರ ಗಣೇಶ, ಜಾಕೀರ್ ಹುಸೇನ್, ಮುಖಂಡರಾದ ಹುಲಿಕಟ್ಟಿ ಚಂದ್ರಪ್ಪ, ರಾಮಣ್ಣ, ಯುವ ಕಾಂಗ್ರೆಸ್ ಅಧ್ಯಕ್ಷ ಚೌಡಪ್ಪ, ಎಚ್.ಟಿ. ಹನುಮಂತ, ಮತ್ತೂರು ಬಸವರಾಜ, ಉದಯಶಂಕರ ಇತರರು ಇದ್ದರು.