ತೊರೆಕಾಡನಹಳ್ಳಿಯಲ್ಲಿ ರಾರಾಜಿಸುತ್ತಿರುವ ಕಾಂಗ್ರೆಸ್ ನಾಯಕರ ಕಟೌಟ್‌ಗಳು

| Published : Oct 16 2024, 12:45 AM IST

ತೊರೆಕಾಡನಹಳ್ಳಿಯಲ್ಲಿ ರಾರಾಜಿಸುತ್ತಿರುವ ಕಾಂಗ್ರೆಸ್ ನಾಯಕರ ಕಟೌಟ್‌ಗಳು
Share this Article
  • FB
  • TW
  • Linkdin
  • Email

ಸಾರಾಂಶ

ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಬೆಂಗಳೂರು ನಗರಾಭಿವೃದ್ಧಿ ಹಾಗೂ ಜಲಸಂಪನ್ಮೂಲ ಸಚಿವ ಡಿಸಿಎಂ ಡಿ.ಕೆ. ಶಿವಕುಮಾರ್ ಯೋಜನೆಯನ್ನು ಲೋಕಾರ್ಪಣೆ ಮಾಡಲಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರನ್ನು ಸ್ವಾಗತಿಸಲು ಕಾಂಗ್ರೆಸ್ ನಾಯಕರ ಬೃಹತ್ ಕಟೌಟ್‌ಗಳು ತಲೆಎತ್ತಿ ನಿಂತಿವೆ.

ಕನ್ನಡಪ್ರಭ ವಾರ್ತೆ ಹಲಗೂರು

ಬೆಂಗಳೂರಿನ 110 ಹಳ್ಳಿಗಳಿಗೆ ಕುಡಿಯುವ ನೀರು ಒದಗಿಸುವ ಕಾವೇರಿ ಐದನೇ ಹಂತ ಕುಡಿಯುವ ನೀರಿನ ಯೋಜನೆ ಲೋಕಾರ್ಪಣೆ ಹಿನ್ನೆಲೆಯಲ್ಲಿ ಮಳವಳ್ಳಿ ತಾಲೂಕಿನ ತೊರೆಕಾಡನಹಳ್ಳಿ (ಟಿ.ಕೆ.ಹಳ್ಳಿ)ಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಎಐಸಿಸಿ ಅಧ್ಯಕ್ಷ ಖರ್ಗೆ ಸೇರಿದಂತೆ ಸಿಎಂ, ಡಿಸಿಎಂ ಸೇರಿದಂತೆ ಸಚಿವ, ಶಾಸಕರ ಕಟೌಟ್‌ಗಳು ರಾಜಾಜಿಸುತ್ತಿವೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಬೆಂಗಳೂರು ನಗರಾಭಿವೃದ್ಧಿ ಹಾಗೂ ಜಲಸಂಪನ್ಮೂಲ ಸಚಿವ ಡಿಸಿಎಂ ಡಿ.ಕೆ. ಶಿವಕುಮಾರ್ ಯೋಜನೆಯನ್ನು ಲೋಕಾರ್ಪಣೆ ಮಾಡಲಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರನ್ನು ಸ್ವಾಗತಿಸಲು ಕಾಂಗ್ರೆಸ್ ನಾಯಕರ ಬೃಹತ್ ಕಟೌಟ್‌ಗಳು ತಲೆಎತ್ತಿ ನಿಂತಿವೆ.

ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡುವ ಹಿನ್ನೆಲೆಯಲ್ಲಿ ಪಕ್ಷದ ನಾಯಕ ರಾಹುಲ್ ಗಾಂಧಿ, ಎಐಸಿಸಿ ಮಲ್ಲಿಕಾರ್ಜುನ ಖರ್ಗೆ, ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್, ಪಿ.ಎಂ.ನರೇಂದ್ರಸ್ವಾಮಿ ಅವರ ಕಟೌಟ್‌ಗಳು ರಾರಾಜಿಸುತ್ತಿವೆ.

ಜಲಮಂಡಳಿಯ ಆವರಣದ ಒಳಗೆ ಹಸಿರು ತೋರಣದಿಂದ ಸಿಂಗರಿಸಿ ವಿದ್ಯುತ್ ದೀಪಾಲಂಕಾರಗಳಿಂದ ಕಂಗೊಳಿಸುತ್ತಿದೆ. ಕಾರ್ಯಕ್ರಮಕ್ಕೆ ಬರುವ ಪ್ರತಿಯೊಬ್ಬರಿಗೂ ಯಾವುದೇ ತೊಂದರೆ ಆಗದಂತೆ ವ್ಯವಸ್ಥೆ ಮಾಡಲಾಗಿದೆ. ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.

ಗಣ್ಯರಿಗೆ ಹಾಗೂ ಪತ್ರಕರ್ತರಿಗೆ ಒಂದು ದ್ವಾರದಲ್ಲಿ, ಸಾರ್ವಜನಿಕರಿಗೆ ಮತ್ತೊಂದು ದ್ವಾರದಲ್ಲಿ ಪ್ರವೇಶದ ಅವಕಾಶ ಕಲ್ಪಿಸಲಾಗಿದೆ. ಕಾರ್ಯಕ್ರಮಕ್ಕೆ ಬರುವ ಪ್ರತಿಯೊಬ್ಬರಿಗೂ ತಿಂಡಿ ಮತ್ತು ಊಟದ ವ್ಯವಸ್ಥೆಯನ್ನು ಮಾಡಲಾಗಿದೆ.

ತಮಿಳುನಾಡಿನಲ್ಲಿ ಚಂಡಮಾರುತದ ವಾತಾವರಣ ಇರುವುದರಿಂದ ಇಂದು ಸಹ ಮಳೆಯಾಗುವ ಸಾಧ್ಯತೆಯಿದ್ದು, ಮಳೆ ನೀರು ಸುರಿಯದಂತೆ ಸುಧಾರಿತವಾಗಿ ವೇದಿಕೆಯನ್ನು ನಿರ್ಮಿಸಲಾಗಿದೆ. ಸಾರ್ವಜನಿಕರು ಆರಾಮವಾಗಿ ಕುಳಿತು ಮುಖ್ಯಮಂತ್ರಿಗಳ ಭಾಷಣವನ್ನು ಕೇಳಬಹುದಾಗಿದೆ.