ಕಾಂಗ್ರೆಸ್‌ನ ಅತ್ಯುನ್ನತ ನೀತಿ ನಿರ್ಧಾರ ಸಂಸ್ಥೆಯಾದ ಕಾಂಗ್ರೆಸ್ ಕಾರ್ಯಕಾರಿ ಸಮಿತಿ (ಸಿಡಬ್ಲ್ಯುಸಿ) ಡಿ.27ರಂದು ದೆಹಲಿಯಲ್ಲಿ ಸಭೆ ಸೇರಲಿದೆ. ಈ ಸಭೆಗೆ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಮುಖ ಆಹ್ವಾನಿತರಾಗಿದ್ದಾರೆ. ಇನ್ನು ಗೃಹ ಸಚಿವ ಡಾ। ಪರಮೇಶ್ವರ್, ಶಾಸಕ ಬಿ. ಕೆ.ಹರಿಪ್ರಸಾದ್, ಮಾಜಿ ಸಿಎಂ ಎಂ.ವೀರಪ್ಪ ಮೊಯ್ಲಿ ಹಾಗೂ ಸಂಸದ ನಾಸೀರ್ ಹುಸೇನ್ ಕರ್ನಾಟಕದಿಂದ ಆಹ್ವಾನಿತರಾಗಿ ಭಾಗವಹಿಸಲಿದ್ದಾರೆ.
ನವದೆಹಲಿ: ಕಾಂಗ್ರೆಸ್‌ನ ಅತ್ಯುನ್ನತ ನೀತಿ ನಿರ್ಧಾರ ಸಂಸ್ಥೆಯಾದ ಕಾಂಗ್ರೆಸ್ ಕಾರ್ಯಕಾರಿ ಸಮಿತಿ (ಸಿಡಬ್ಲ್ಯುಸಿ) ಡಿ.27ರಂದು ದೆಹಲಿಯಲ್ಲಿ ಸಭೆ ಸೇರಲಿದೆ. ಈ ಸಭೆಗೆ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಮುಖ ಆಹ್ವಾನಿತರಾಗಿದ್ದಾರೆ. ಇನ್ನು ಗೃಹ ಸಚಿವ ಡಾ। ಪರಮೇಶ್ವರ್, ಶಾಸಕ ಬಿ. ಕೆ.ಹರಿಪ್ರಸಾದ್, ಮಾಜಿ ಸಿಎಂ ಎಂ.ವೀರಪ್ಪ ಮೊಯ್ಲಿ ಹಾಗೂ ಸಂಸದ ನಾಸೀರ್ ಹುಸೇನ್ ಕರ್ನಾಟಕದಿಂದ ಆಹ್ವಾನಿತರಾಗಿ ಭಾಗವಹಿಸಲಿದ್ದಾರೆ.
ಇನ್ನು ಸಿಡಬ್ಲ್ಯುಸಿ ಸಭೆ ನಂತರ ಸಾಧ್ಯವಾದರೇ ರಾಜ್ಯ ರಾಜಕಾರಣದ ಬಗ್ಗೆಯೂ ಚರ್ಚೆ ನಡೆಯುವ ಸಾಧ್ಯತೆ ಇದೆ ಎನ್ನಲಾಗಿದೆ. ಈ ಸಂಬಂಧದ ಚರ್ಚೆಗೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೂ ಆಹ್ವಾನ ನೀಡುವ ಸಾಧ್ಯತೆಗಳಿವೆ. ಡಿಸಿಎಂ ಆಪ್ತ ಮೂಲಗಳ ಪ್ರಕಾರ ಇನ್ನು ಹೈಕಮಾಂಡ್‌ನಿಂದ ಯಾವುದೇ ಆಹ್ವಾನ ಬಂದಿಲ್ಲ.ಒಂದು ವೇಳೆ ಆಹ್ವಾನ ಬರದಿದ್ದರೂ ನ್ಯಾಯಾಲಯ ಪ್ರಕರಣ ಸಂಬಂಧ ಶಿವಕುಮಾರ್ ಅವರು ಅಧಿವೇಶನ ಮುಗಿದ ನಂತರ ದೆಹಲಿಗೆ ತೆರಳಲಿದ್ದಾರೆ ಎಂದು ತಿಳಿದು ಬಂದಿದೆ. ಈ ವೇಳೆ ಅವರು ಹೈಕಮಾಂಡ್‌ನ ನಾಯಕರನ್ನು ಭೇಟಿ ಮಾಡುವ ಸಾಧ್ಯತೆಗಳಿವೆ.
ಇನ್ನು ಸಂಸತ್ ಅಧಿವೇಶನ ಮುಗಿದ ಬೆನ್ನಲ್ಲೇ ನಡೆಯುತ್ತಿರುವ ಈ ಸಿಡಬ್ಲ್ಯೂಸಿ ಸಭೆಯಲ್ಲಿ ಇತ್ತೀಚಿನ ಬಿಹಾರ ಚುನಾವಣೆ ಸೋಲು, ಮುಂದಿನ ವರ್ಷ ನಡೆಯಲಿರುವ ವಿವಿಧ ರಾಜ್ಯಗಳ ವಿಧಾನಸಭಾ ಚುನಾವಣೆ, ಕೇಂದ್ರ ಸರ್ಕಾರ ಉದ್ಯೋಗ ಖಾತ್ರಿ ಯೋಜನೆಯನ್ನು ‘ಜಿ ರಾಮ್ ಜಿ’ಎಂದು ಬದಲಾಯಿಸಿದ್ದು ಸೇರಿದಂತೆ ಪಕ್ಷದಲ್ಲಿ ಸಂಘಟನೆಯ ಬಗ್ಗೆ ಚರ್ಚೆ ನಡೆ ನಡೆಸಲಾಗುವುದು ಎನ್ನಲಾಗಿದೆ. ಇಂದಿರಾ ಗಾಂಧಿ ಭವನದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ನಡೆಯಲಿರುವ ಸಭೆಯಲ್ಲಿ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿದಂತೆ ಪ್ರಮುಖ ನಾಯಕರು ಭಾಗಿಯಾಗಲಿದ್ದಾರೆ.