ಮಹಿಳೆಯರ ಸುರಕ್ಷತೆ, ಮಾದಕ ವ್ಯಸನದ ನಿಯಂತ್ರಣ, ಸೈಬರ್ ಅಪರಾಧಗಳ ತಡೆ ಮತ್ತು ಸಂಚಾರ ನಿರ್ವಹಣೆ ಕುರಿತು ನಗರದ ಶಾಲಾ ಕಾಲೇಜುಗಳಲ್ಲಿ ಅರಿವು ಮೂಡಿಸಲು ಪೊಲೀಸ್ ಇಲಾಖೆ ವತಿಯಿಂದ ಸೋಮವಾರ ವಿಶೇಷ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಬೆಂಗಳೂರು : ಮಹಿಳೆಯರ ಸುರಕ್ಷತೆ, ಮಾದಕ ವ್ಯಸನದ ನಿಯಂತ್ರಣ, ಸೈಬರ್ ಅಪರಾಧಗಳ ತಡೆ ಮತ್ತು ಸಂಚಾರ ನಿರ್ವಹಣೆ ಕುರಿತು ನಗರದ ಶಾಲಾ ಕಾಲೇಜುಗಳಲ್ಲಿ ಅರಿವು ಮೂಡಿಸಲು ಪೊಲೀಸ್ ಇಲಾಖೆ ವತಿಯಿಂದ ಸೋಮವಾರ ವಿಶೇಷ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
‘ಫ್ರೆಂಡ್ಸ್ ಆಪ್ ಪೊಲೀಸ್ ಸುರಕ್ಷಿತ ಬೆಂಗಳೂರು ನಿರ್ಮಿಸಲು ಒಂದಾಗೋಣ’ ಎಂಬ ಶೀರ್ಷಿಕೆಯಡಿಯಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಸುಮಾರು 750 ಪೊಲೀಸ್ ಅಧಿಕಾರಿಗಳು, ಒಂದು ಸಾವಿರ ಕಾಲೇಜು ಮತ್ತು ಶಾಲೆಗಳಿಗೆ ಭೇಟಿ ನೀಡಿ ಸುಮಾರು 2.5 ಲಕ್ಷ ವಿದ್ಯಾರ್ಥಿಗಳಿಗೆ ಜಾಗೃತಿ ಮೂಡಿಸಿದ್ದಾರೆ.
ಮೌಂಟ್ ಕಾರ್ಮೆಲ್ ಕಾಲೇಜಿನಲ್ಲಿ ಆಯೋಜಿಸಲಾಗಿದ್ದ ಜಾಗೃತಿ ಕಾರ್ಯಕ್ರಮ
ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್, ಮೌಂಟ್ ಕಾರ್ಮೆಲ್ ಕಾಲೇಜಿನಲ್ಲಿ ಆಯೋಜಿಸಲಾಗಿದ್ದ ಜಾಗೃತಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಮಹಿಳೆಯರ ಸುರಕ್ಷತೆಗಾಗಿ ಸಹಾಯವಾಣಿಯ ಬಗ್ಗೆ, ಹೊಯ್ಸಳ ವಾಹನಗಳ ಗಸ್ತು ವ್ಯವಸ್ಥೆ ಬಗ್ಗೆ ವಿದ್ಯಾರ್ಥಿಗಳಿಗೆ ತಿಳಿವಳಿಕೆ ನೀಡಿದರು. ವಿದ್ಯಾರ್ಥಿಗಳಿಗೆ ಸಂಚಾರ ನಿಯಮ ಪಾಲನೆ, ಮಾದಕ ವ್ಯಸನದಂತಹ ದುಶ್ಚಟಗಳಿಂದ ದೂರವಿರುವಂತೆ ಅರಿವು ಮೂಡಿಸಲಾಯಿತು. ಯಾವುದೇ ರೀತಿಯ ದೂರುಗಳು ಸಲ್ಲಿಸಲು ಮತ್ತು ಪೊಲೀಸ್ ಸೇವೆಗಳನ್ನು ಬಳಸಿಕೊಳ್ಳಲು ತುರ್ತು ಸಹಾಯವಾಣಿಗಳ ಬಗ್ಗೆ ವಿದ್ಯಾರ್ಥಿಗಳಿಗೆ ಇದೇ ಸಂದರ್ಭದಲ್ಲಿ ಮಾಹಿತಿ ನೀಡಲಾಯಿತು.
ಸಹಾಯವಾಣಿಗಳ ಬಗ್ಗೆ ಮಾಹಿತಿ:
ತುರ್ತು ಸಹಾಯವಾಣಿ 112, ಮಕ್ಕಳ ಸಹಾಯವಾಣಿ 1098, ಸೈಬರ್ ವಂಚನೆಯ ಸಹಾಯವಾಣಿ 1930, ರಾಷ್ಟ್ರೀಯ ಮಾದಕವಸ್ತು ಸಹಾಯವಾಣಿ 1933, ಮಾದಕವಸ್ತು ನಿಯಂತ್ರಣ ಸಹಾಯವಾಣಿ 1908 ಮತ್ತು ರಾಷ್ಟ್ರೀಯ ಮಹಿಳಾ ಸಹಾಯವಾಣಿ 14490 ಬಗ್ಗೆ ಜಾಗೃತಿ ಮೂಡಿಸಲಾಯಿತು.
ಸಬ್‌ಇನ್‌ಸ್ಪೆಕ್ಟರ್ ಸೇರಿದಂತೆ ಆಯುಕ್ತರವರೆಗೂ ನಗರದ ಎಲ್ಲ ರ್‍ಯಾಂಕ್‌ನ ಅಧಿಕಾರಿಗಳು ಸೇರಿದಂತೆ 750 ಪೊಲೀಸ್ ಅಧಿಕಾರಿಗಳು, ಸಿಬ್ಬಂದಿ ನಗರದ 1250 ಶಾಲಾ ಕಾಲೇಜುಗಳಿಗೆ ಭೇಟಿ ನೀಡಿ ಸುಮಾರು 2.5 ಲಕ್ಷ ವಿದ್ಯಾರ್ಥಿಗಳಿಗೆ ಈ ಬಗ್ಗೆ ಜಾಗೃತಿ ಮೂಡಿಸಲಾಯಿತು. ವಿದ್ಯಾರ್ಥಿಗಳಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.
-ಸೀಮಂತ್ ಕುಮಾರ್ ಸಿಂಗ್, ನಗರ ಪೊಲೀಸ್ ಆಯುಕ್ತ